ರಣಜಿಯಲ್ಲಿ ಮರಿ ತೆಂಡೂಲ್ಕರ್ ರೌದ್ರಾವತಾರ; ಮೊದಲ ಬಾರಿಗೆ ಈ ಸಾಧನೆ ಮಾಡಿದ ಅರ್ಜುನ್

Arjun Tendulkar: ರಣಜಿ ಟ್ರೋಫಿಯಲ್ಲಿ ನಿರಂತರ ವೈಫಲ್ಯಗಳನ್ನು ಎದುರಿಸುತ್ತಿದ್ದ ಅರ್ಜುನ್ ತೆಂಡೂಲ್ಕರ್ ಅವರು ಗೋವಾ ಪರ ಅರುಣಾಚಲ ಪ್ರದೇಶದ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ 9 ಓವರ್‌ಗಳಲ್ಲಿ 25 ರನ್‌ಗಳಿಗೆ 5 ವಿಕೆಟ್ ಪಡೆದು ತಂಡಕ್ಕೆ ನೆರವಾಗಿದ್ದಾರೆ. ಇದು ಅವರ ರಣಜಿ ಟ್ರೋಫಿ ವೃತ್ತಿಜೀವನದ ಮೊದಲ ಐದು ವಿಕೆಟ್‌ಗಳ ಗೊಂಚಲು ಎಂಬುದು ವಿಶೇಷ.

ರಣಜಿಯಲ್ಲಿ ಮರಿ ತೆಂಡೂಲ್ಕರ್ ರೌದ್ರಾವತಾರ; ಮೊದಲ ಬಾರಿಗೆ ಈ ಸಾಧನೆ ಮಾಡಿದ ಅರ್ಜುನ್
ಅರ್ಜುನ್ ತೆಂಡೂಲ್ಕರ್
Follow us
ಪೃಥ್ವಿಶಂಕರ
|

Updated on:Nov 13, 2024 | 5:09 PM

ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ವೈಫಲ್ಯಗಳನ್ನೇ ಎದುರಿಸಿದ್ದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್, ಇದೀಗ ಲಯ ಕಂಡುಕೊಂಡಿದ್ದಾರೆ. ಗೋವಾ ಪರ ಕಣಕ್ಕಿಳಿದಿರುವ ಅರ್ಜುನ್, ಅರುಣಾಚಲ ಪ್ರದೇಶದ ವಿರುದ್ಧ ಅದ್ಭುತ ಪ್ರದರ್ಶನ ನೀಡಿ, ರಣಜಿಯಲ್ಲಿ ಇದೇ ಮೊದಲ ಬಾರಿಗೆ ಐದು ವಿಕೆಟ್​ಗಳ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ ಮ್ಯಾಜಿಕಲ್ ಸ್ಪೆಲ್ ಮಾಡಿದ ಅರ್ಜುನ್, ಕೇವಲ 9 ಓವರ್‌ಗಳಲ್ಲಿ 25 ರನ್‌ ನೀಡಿ 5 ವಿಕೆಟ್‌ಗಳನ್ನು ಪಡೆದರು. ತಮ್ಮ 17ನೇ ಪ್ರಥಮ ದರ್ಜೆ ಪಂದ್ಯವನ್ನು ಆಡುತ್ತಿರುವ ಅರ್ಜುನ್ ಅವರ ಮಾರಕ ದಾಳಿಯ ನೆರವಿನಿಂದ ಗೋವಾ ತಂಡ, ಅರುಣಾಚಲ ಪ್ರದೇಶವನ್ನು ಕೇವಲ 84 ರನ್‌ಗಳಿಗೆ ಆಲೌಟ್ ಮಾಡಿದೆ.

‘ಬೆಂಕಿ’ ಚೆಂಡು ಅರ್ಜುನ್

ರಣಜಿ ಟ್ರೋಫಿಯ 5ನೇ ಸುತ್ತಿನ ಪಂದ್ಯಗಳು ಶುರುವಾಗಿದ್ದು, ನವೆಂಬರ್ 13 ಬುಧವಾರದಂದು ಗೋವಾ ಮತ್ತು ಅರುಣಾಚಲ ಪ್ರದೇಶ ನಡುವಿನ ಪಂದ್ಯ ಆರಂಭವಾಗಿದೆ. ಗೋವಾ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಅರುಣಾಚಲ ಪ್ರದೇಶ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಅರುಣಾಚಲ ಪ್ರದೇಶ ತಂಡದ ಆಯ್ಕೆಯನ್ನು ತಪ್ಪು ಎಂದು ಸಾಭೀತುಪಡಿಸಿದ ಅರ್ಜುನ್ ತೆಂಡೂಲ್ಕರ್, ಬ್ಯಾಟ್ಸ್​ಮನ್​ಗಳನ್ನು ಹೆಡೆಮುರಿ ಕಟ್ಟಿದರು. ಅರ್ಜುನ್, ಎರಡನೇ ಓವರ್‌ನಲ್ಲಿಯೇ ಆರಂಭಿಕ ಬ್ಯಾಟ್ಸ್‌ಮನ್ ನೀಬಾಮ್ ಹಚಾಂಗ್ ಅವರನ್ನು ಔಟ್ ಮಾಡುವ ಮೂಲಕ ಅರುಣಾಚಲ ಪ್ರದೇಶಕ್ಕೆ ಮೊದಲ ಹೊಡೆತ ನೀಡಿದರು.

ಕೇವಲ 84 ರನ್​ಗಳಿಗೆ ಆಲೌಟ್

ಸ್ವಲ್ಪ ಸಮಯದ ನಂತರ ಮತ್ತೆ ದಾಳಿಗಿಳಿದ ಅರ್ಜುನ್, ನೀಲಂ ಓಬಿಯನ್ನು ಮತ್ತು ಜೈ ಭಾವಸರ್ ಅವರನ್ನು ಪೆವಿಲಿಯನ್​ಗಟ್ಟಿದರು. ಇದಾದ ಬಳಿಕ ಚಿನ್ಮಯ್ ಪಾಟೀಲ್, ಮೋಜಿ ಅಟೆ ಅವರ ಬಲಿ ಪಡೆದು 5ನೇ ವಿಕೆಟ್ ಪೂರೈಸಿದರು. ಅರ್ಜುನ್ ಅವರ ಈ ವಿಕೆಟ್​ಗಳ ಭೇಟೆಯ ವಿಶೇಷವೆಂದರೆ, ಅವರು ಪಡೆದು ಐದು ವಿಕೆಟ್​ಗಳು ಮೊದಲ ಐವರು ಬ್ಯಾಟ್ಸ್‌ಮನ್‌ಗಳದ್ದಾಗಿದ್ದವು. ಅದರಲ್ಲೂ ಕೇವಲ 36 ರನ್‌ಗಳಲ್ಲಿ ಔಟ್ ಮಾಡುವ ಮೂಲಕ ಅರುಣಾಚಲ ಪ್ರದೇಶಕ್ಕೆ ಆರಂಭಿಕ ಆಘಾತ ನೀಡಿದರು. ಇದರ ಫಲವಾಗಿ ಅರುಣಾಚಲ ಪ್ರದೇಶ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 84 ರನ್ ಗಳಿಸಲಷ್ಟೇ ಶಕ್ತವಾಯಿತು.

ಅರ್ಜುನ್ ಇದಕ್ಕೂ ಮುನ್ನ 16 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 32 ವಿಕೆಟ್‌ಗಳನ್ನು ಉರುಳಿಸಿದ್ದರು. ಈ ಅವಧಿಯಲ್ಲಿ 49 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು. ಈ ವೇಳೆ ಬ್ಯಾಟಿಂಗ್‌ನಲ್ಲೂ ಕೊಡುಗೆ ನೀಡಿರುವ ಅವರು 16 ಪಂದ್ಯಗಳಲ್ಲಿ 23 ರ ಸರಾಸರಿಯಲ್ಲಿ 531 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 2 ಅರ್ಧ ಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Wed, 13 November 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ