AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ತೆಂಡೂಲ್ಕರ್ ಮಾರಕ ದಾಳಿ; ಮೊದಲ ಪಂದ್ಯದಲ್ಲೇ ಗೆದ್ದ ಗೋವಾ

Goa Wins Vijay Hazare Trophy Opener: ಗೋವಾ ತಂಡವು ವಿಜಯ್ ಹಜಾರೆ ಟ್ರೋಫಿಯಲ್ಲಿ ಒಡಿಶಾವನ್ನು 27 ರನ್​ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಅರ್ಜುನ್ ತೆಂಡೂಲ್ಕರ್ 3 ವಿಕೆಟ್ ಪಡೆದು ತಂಡಕ್ಕೆ ಪ್ರಮುಖ ಕೊಡುಗೆ ನೀಡಿದರು. ಇಶಾನ್ ಗಡೇಕರ್ ಅತ್ಯಧಿಕ 93 ರನ್ ಗಳಿಸಿದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಅರ್ಜುನ್ ಈ ಪಂದ್ಯದಲ್ಲಿ ಅದ್ಭುತವಾದ ಕಮ್‌ಬ್ಯಾಕ್ ಮಾಡಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಮಾರಕ ದಾಳಿ; ಮೊದಲ ಪಂದ್ಯದಲ್ಲೇ ಗೆದ್ದ ಗೋವಾ
ಅರ್ಜುನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on: Dec 21, 2024 | 8:11 PM

Share

ವಿಜಯ್ ಹಜಾರೆ ಟ್ರೋಫಿಯಲ್ಲಿ ಗೋವಾ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಗೋವಾ ತನ್ನ ಮೊದಲ ಪಂದ್ಯದಲ್ಲಿ ಒಡಿಶಾವನ್ನು 27 ರನ್​ಗಳಿಂದ ಸೋಲಿಸಿದೆ. ಜೈಪುರದ ಡಾ.ಸೋನಿ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗೋವಾ 371 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಒಡಿಶಾ 344 ರನ್​ಗಳಿಗೆ ಆಲೌಟ್ ಆಯಿತು. ಒಡಿಶಾ ತಂಡವನ್ನು ಆಲೌಟ್ ಮಾಡುವಲ್ಲಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ಪಾತ್ರ ಪ್ರಮುಖವಾಗಿತ್ತು. ಈ ಪಂದ್ಯದಲ್ಲಿ 10 ಓವರ್ ಬೌಲ್ ಮಾಡಿದ ಅರ್ಜುನ್ 61 ರನ್ ಬಿಟ್ಟುಕೊಟ್ಟರಾದರೂ ಪ್ರಮುಖ 3 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ಅರ್ಜುನ್ ಮ್ಯಾಜಿಕಲ್ ಸ್ಪೆಲ್

ಈ ಪಂದ್ಯದಲ್ಲಿ ಟಾಸ್ ಸೋತ ಮೊದಲು ಬ್ಯಾಟಿಂಗ್ ಮಾಡಿದ ಗೋವಾ ಪರ ತಂಡದ ಬ್ಯಾಟ್ಸ್‌ಮನ್‌ಗಳು ದಿಟ್ಟ ಪ್ರದರ್ಶನ ನೀಡಿ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 371 ರನ್‌ ಗಳಿಸಿದರು. ತಂಡದ ಪರ ಇಶಾನ್ ಗಡೇಕರ್ 93 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ನಾಯಕ ದರ್ಶನ್ ಮಿಸಾಲ್ 79 ರನ್ ಮತ್ತು ಸುಯಶ್ ಪ್ರಭುದೇಸಾಯಿ 74 ರನ್ ಕೊಡುಗೆ ನೀಡಿದರು. ಸ್ನೇಹಲ್ ಕೌತಾಂಕರ್ ಕೂಡ 67 ರನ್ ಕಲೆಹಾಕಿದರು. ಈ ಇನ್ನಿಂಗ್ಸ್‌ನಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗದಿದ್ದರೂ, ಬೌಲಿಂಗ್​ನಲ್ಲಿ ಮಾತ್ರ ತಮ್ಮ ಚಮತ್ಕಾರ ತೋರಿದರು.

ಗೋವಾ ಪರ ಬೌಲಿಂಗ್ ಆರಂಭಿಸಿದ ಅರ್ಜುನ್ ತೆಂಡೂಲ್ಕರ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಆರಂಭಿಕ ಓವರ್‌ಗಳಲ್ಲಿ ಕರಾರುವಕ್ಕಾದ ದಾಳಿ ನಡೆಸಿದ ಅರ್ಜುನ್ ಇದರ ನಂತರ ತಮ್ಮ ಎರಡನೇ ಸ್ಪೆಲ್‌ನಲ್ಲಿ ವಿಕೆಟ್​ಗಳ ಬೇಟೆ ಆರಂಭಿಸಿದರು. ಒಬ್ಬರ ನಂತರ ಒಬ್ಬರಂತೆ 3 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಅರ್ಜುನ್ ತೆಂಡೂಲ್ಕರ್ 10 ಓವರ್‌ಗಳಲ್ಲಿ 6.10 ಎಕಾನಮಿ ದರದಲ್ಲಿ 61 ರನ್ ನೀಡಿ ಒಟ್ಟು 3 ವಿಕೆಟ್ ಪಡೆದರು. ಅವರು ಕಾರ್ತಿಕ್ ಬಿಸ್ವಾಲ್, ಅಭಿಷೇಕ್ ರಾವುತ್ ಮತ್ತು ರಾಜೇಶ್ ಮೊಹಂತಿ ಅವರ ವಿಕೆಟ್ ಉರುಳಿಸಿದರು. ಅರ್ಜುನ್ ಹೊರತಾಗಿ ಶುಭಂ ತಾರಿ ಮತ್ತು ಮೋಹಿತ್ ರೆಡ್ಕರ್ ಕೂಡ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ವಿಫಲ

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಪ್ರದರ್ಶನ ತೀರಾ ಕಳಪೆಯಾಗಿತ್ತು. ಒಟ್ಟು 3 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಅರ್ಜುನ್ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಇದರ ನಂತರ ಅವರನ್ನು ತಂಡದಿಂದ ಹೊರಗಿಡಲಾಗಿತ್ತು. ಇದೀಗ ಅರ್ಜುನ್ ತಂಡಕ್ಕೆ ಭರ್ಜರಿ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!