AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ

Arjun Tendulkar- Saaniya Chandhok Wedding: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಎಂ.ಎಸ್. ಧೋನಿ, ರಾಹುಲ್ ದ್ರಾವಿಡ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು, ರಾಜಕೀಯ ಗಣ್ಯರು ಭಾಗವಹಿಸಿದ್ದರು. ಕಳೆದ ಆಗಸ್ಟ್‌ನಲ್ಲಿ ನಿಶ್ಚಿತಾರ್ಥ, ಮಾರ್ಚ್ 3 ರಂದು ಮೆಹಂದಿ ಸಮಾರಂಭ ನೆರವೇರಿತ್ತು.

ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ
Arjun Sania
ಪೃಥ್ವಿಶಂಕರ
|

Updated on:Mar 05, 2026 | 3:56 PM

Share

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ತಮ್ಮ ಬಹುದಿನಗಳ ಗೆಳತಿ ಸಾನಿಯಾ ಚಾಂದೋಕ್ (Sania Chandok) ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಆಗಸ್ಟ್​ನಲ್ಲಿ ತೀರ ಖಾಸಗಿಯಾಗಿ ಕುಟುಂಬದವರ ಸಮ್ಮುಖದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಾಗೆಯೇ ಮಾರ್ಚ್ 3 ರಂದು ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್‌ನಲ್ಲಿ ಮೆಹಂದಿ ಸಮಾರಂಭವು ನಡೆದಿತ್ತು. ಆ ಸಮಾರಂಭದಲ್ಲಿ ಕ್ರಿಕೆಟ್ ಜಗತ್ತಿನ ಅನೇಕ ದಂತಕಥೆಗಳು ಉಪಸ್ಥಿತರಿದ್ದರು. ಸಚಿನ್ ಅವರ ಆಪ್ತರು, ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಮೆಹಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು, ಅವರಲ್ಲಿ ರವಿಶಾಸ್ತ್ರಿ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್, ಜಹೀರ್ ಖಾನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಮತ್ತು ಅಜಿತ್ ಅಗರ್ಕರ್ ಸೇರಿದ್ದ್ದರು. ಇದೀಗ ಮದುವೆಗೆ ಅತಿಥಿಗಳ ಮಹಾಪೂರವೇ ಹರಿದುಬಂದಿತ್ತು.

ಮದುವೆಯಲ್ಲಿ ಗಣ್ಯರ ಉಪಸ್ಥಿತಿ

ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ಮುಂಬೈನಲ್ಲಿ ನೆರವೇರಿತು. ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಪತ್ನಿಯೊಂದಿಗೆ ವಿವಾಹ ಸಮಾರಂಭದಲ್ಲಿ ಕಾಣಿಸಿಕೊಂಡರು. ಮಾಜಿ ಕ್ರಿಕೆಟಿಗ ಮತ್ತು ಆಯ್ಕೆದಾರ ಅಜಿತ್ ಅಗರ್ಕರ್ ಕೂಡ ತಮ್ಮ ಪತ್ನಿಯೊಂದಿಗೆ ಆಗಮಿಸಿದ್ದರು. ರಾಹುಲ್ ದ್ರಾವಿಡ್ ಅವರ ಪತ್ನಿ ವಿಜೇತಾ ಪೆಂಧಾರ್ಕರ್, ಕಿರಣ್ ಮೋರೆ, ಅನಿಲ್ ಕುಂಬ್ಳೆ, ಅಜಿಂಕ್ಯ ರಹಾನೆ, ಸುರೇಶ್ ರೈನಾ ಮತ್ತು ವೆಂಕಟೇಶ್ ಪ್ರಸಾದ್ (ಮಾಜಿ ಕ್ರಿಕೆಟಿಗ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ) ಅವರೊಂದಿಗೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ವಿವಾಹ ಸಮಾರಂಭದಲ್ಲಿ ರಾಜಕೀಯ ವ್ಯಕ್ತಿಗಳು ಕೂಡ ಭಾಗವಹಿಸಿದ್ದರು. ಕೆಲವು ದಿನಗಳ ಹಿಂದೆ ಸಚಿನ್ ತೆಂಡೂಲ್ಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದರು. ಕ್ರೀಡಾ ತಾರೆಯರು, ಕೈಗಾರಿಕೋದ್ಯಮಿಗಳು ಮತ್ತು ಪ್ರಮುಖ ವ್ಯಕ್ತಿಗಳು ಸಹ ಭಾಗವಹಿಸಿದ್ದರು, ಇದು ಕಾರ್ಯಕ್ರಮವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಿತು.

View this post on Instagram

A post shared by Suresh Raina (@sureshraina3)

ಅರ್ಜುನ್- ಸಾನಿಯಾ ಬಗ್ಗೆ ಕಿರುಪರಿಚಯ

ಅರ್ಜುನ್ ತೆಂಡೂಲ್ಕರ್ ದೇಶಿ ಕ್ರಿಕೆಟ್​ನಲ್ಲಿ ಗೋವಾ ಪರ ಆಡುತ್ತಿದ್ದು, ಐಪಿಎಲ್‌ನಲ್ಲಿ ಇಷ್ಟು ವರ್ಷ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಇದೀಗ ಅವರು ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಭಾಗವಾಗಿದ್ದಾರೆ. ಇತ್ತ ಸಾನಿಯಾ, ಮುಂಬೈ ಮೂಲದ ಕೈಗಾರಿಕೋದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಸಾನಿಯಾ ಮುಂಬೈ ಮೂಲದ ಮಿಸ್ಟರ್ ಪಾವ್ಸ್ ಪೆಟ್ ಸ್ಪಾ & ಸ್ಟೋರ್ ಎಲ್‌ಎಲ್‌ಪಿಯಲ್ಲಿ ನಿಯೋಜಿತ ಪಾಲುದಾರೆ ಮತ್ತು ನಿರ್ದೇಶಕಿಯೂ ಆಗಿದ್ದಾರೆ. ಹಾಗೆಯೇ ಅರ್ಜುನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳತಿಯೂ ಆಗಿರುವ ಸಾನಿಯಾ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 5 March 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ