ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

|

Updated on: Dec 21, 2024 | 7:58 AM

Robin Uthappa: ಭಾರತ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಟೀಮ್ ಇಂಡಿಯಾ ಪರ ಒಟ್ಟು 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್​ನಲ್ಲಿ 934 ರನ್ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ 249 ರನ್ ಸಿಡಿಸಿದ್ದಾರೆ. ಇದರ ನಡುವೆ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ನಿವೃತ್ತರಾಗಿರುವ ರಾಬಿನ್ ಕೆಲ ಲೀಗ್​​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
Robin Uthappa
Follow us on

ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

ಸದ್ಯ ರಾಬಿನ್ ಉತ್ತಪ್ಪ ಭಾರತವನ್ನು ತೊರೆದು ದುಬೈನಲ್ಲಿ ನೆಲೆಸಿದ್ದಾರೆ. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ: ಸ್ಮೃತಿ ಮಂಧಾನ ಸಿಡಿಲಬ್ಬರಕ್ಕೆ ವಿಶ್ವ ದಾಖಲೆಗಳೇ ಉಡೀಸ್

ಟೀಮ್ ಇಂಡಿಯಾ ಪರ 46 ಏಕದಿನ ಪಂದ್ಯಗಳಲ್ಲಿ 42 ಇನಿಂಗ್ಸ್ ಆಡಿರುವ ರಾಬಿನ್ ಉತ್ತಪ್ಪ 6 ಅರ್ಧಶತಕಗಳೊಂದಿಗೆ ಒಟ್ಟು 934 ರನ್ ಕಲೆಹಾಕಿದ್ದಾರೆ. ಹಾಗೆಯೇ 13 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಅವರು 12 ಇನಿಂಗ್ಸ್​ಗಳಿಂದ 249 ರನ್ ಬಾರಿಸಿದ್ದಾರೆ. ಈ ವೇಳೆ ಒಂದು ಅರ್ಧಶತಕವನ್ನು ಸಹ ಸಿಡಿಸಿದ್ದರು. 2022 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಉತ್ತಪ್ಪ ಇದೀಗ ಕುಟುಂಬಸ್ಥರೊಂದಿಗೆ ದುಬೈನಲ್ಲಿ ಸೆಟಲ್ ಆಗಿದ್ದಾರೆ.