AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಬಂಧಿಸಲು ಆಗ್ರಹ; ಸೋಶಿಯಲ್ ಮೀಡಿಯಾದಲ್ಲಿ #ArrestKohli ಟ್ರೆಂಡಿಂಗ್

#ArrestKohli Trends: ಆರ್‌ಸಿಬಿ ತಂಡದ ಐಪಿಎಲ್ ಗೆಲುವಿನ ಸಂಭ್ರಮದ ನಡುವೆ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಘಟನೆಯ ನಂತರ ವಿರಾಟ್ ಕೊಹ್ಲಿ ವಿರುದ್ಧ #ArrestKohli ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ. ಕೆಲವರು ಕೊಹ್ಲಿ ಕೂಡ ಈ ದುರಂತಕ್ಕೆ ಕಾರಣವೆಂದು ಆರೋಪಿಸುತ್ತಿದ್ದಾರೆ, ಆದರೆ ಅವರ ಪಾತ್ರವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದೆ.

ವಿರಾಟ್ ಕೊಹ್ಲಿಯನ್ನು ಬಂಧಿಸಲು ಆಗ್ರಹ; ಸೋಶಿಯಲ್ ಮೀಡಿಯಾದಲ್ಲಿ #ArrestKohli ಟ್ರೆಂಡಿಂಗ್
Virat Kohli
ಪೃಥ್ವಿಶಂಕರ
|

Updated on: Jun 06, 2025 | 6:32 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2025 (IPL 2025) ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಆರು ರನ್‌ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿತ್ತು. ಆರ್‌ಸಿಬಿ ಚಾಂಪಿಯನ್‌ ಆಗುತ್ತಿದ್ದಂತೆ ದೇಶದಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಅದರಲ್ಲೂ ಆರ್​ಸಿಬಿ ತವರಾದ ಕರ್ನಾಟಕದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಕೋಟ್ಯಾಂತರ ಅಭಿಮಾನಿಗಳು ರಸ್ತೆಗಿಳಿದು ಸಂಭ್ರಮಿಸಿದ್ದರು. ಇತ್ತ ಆರ್​ಸಿಬಿ ಕೂಡ ಅಭಿಮಾನಿಗಳನ್ನು ಇನ್ನಷ್ಟು ರಂಜಿಸಲು ಮೆರವಣಿಗೆಯ ಕಾರ್ಯಕ್ರಮ ಕೂಡ ಹಮ್ಮಿಕೊಂಡಿತ್ತು. ಆದರೆ ಮೆರವಣಿಗೆ ನಡೆಯುವುದಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಸಾವನ್ನಪ್ಪಿದರು. ಸರ್ಕಾರ ಕೂಡ ಹಲವರ ವಿರುದ್ಧ ಕ್ರಮ ಕೈಗೊಂಡಿದೆ. ಇದೆಲ್ಲದರ ನಡುವೆ #ArrestKohli ಹ್ಯಾಶ್​ಟ್ಯಾಗ್ ಕಳೆದ 24 ಗಂಟೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೆಂಡಿಂಗ್‌ನಲ್ಲಿದೆ.

#ArrestKohli ಏಕೆ ಟ್ರೆಂಡಿಂಗ್ ಆಗುತ್ತಿದೆ?

ಜೂನ್ 4 ರಂದು ನಡೆದ ಈ ಘಟನೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಈ ಅವಘಡದಲ್ಲಿ ಕೊಹ್ಲಿಯ ಪಾತ್ರವಿಲ್ಲದಿದ್ದರೂ, ಒಂದು ರೀತಿಯಲ್ಲಿ ಕೊಹ್ಲಿ ಕೂಡ ಈ ದುರಂತಕ್ಕೆ ಕಾರಣ ಎಂಬುದು ಕೆಲವರ ಅಭಿಪ್ರಾಯ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಕೊಹ್ಲಿಯ ಬಂಧನಕ್ಕೆ ಒತ್ತಾಯ ಜೋರಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ #ArrestKohli ಟ್ರೆಂಡ್ ಆಗುತ್ತಿದೆ.

ಮೇಲೆ ಹೇಳಿದಂತೆ ವಿರಾಟ್ ಕೊಹ್ಲಿಯಿಂದಾಗಿ ಈ ಕಾಲ್ತುಳಿತ ಸಂಭವಿಸಿದೆ ಎಂಬುದು ಹಲವರ ಅಭಿಪ್ರಾಯವಾಗಿದೆ. ಹೀಗಾಗಿ ಕೊಹ್ಲಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಸಹ ಬಂಧಿಸಬೇಕು ಒಂದು ಒತ್ತಾಯಿಸಲಾಗುತ್ತಿದೆ. ಅವಘಡ ನಡೆದ ಮಾರನೇ ದಿನವೇ ವಿರಾಟ್ ಕೊಹ್ಲಿ ಮುಂಬೈಗೆ ಮರಳಿದರು. ಅದರ ಬದಲು ವಿರಾಟ್ ಕೊಹ್ಲಿ ಸಂತ್ರಸ್ಥರ ಕುಟುಂಬಗಳನ್ನು ಭೇಟಿ ಮಾಡಬೇಕಿತ್ತು. ಮೃತರ ಕುಟುಂಬಗಳಿಗೆ ನೆರವಾಗಬೇಕಿತ್ತು ಎಂಬುದು ಕೆಲವರ ವಾದವಾಗಿದೆ. ಹೀಗಾಗಿಯೇ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ #ArrestKohli ಅನ್ನು ಟ್ರೆಂಡ್ ಮಾಡುತ್ತಿದ್ದಾರೆ.

Virat Kohli: ಭಾರದ ಮನಸ್ಸಿನಲ್ಲಿ ಬೆಂಗಳೂರು ತೊರೆದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ

ಕೊಹ್ಲಿ ವಿರುದ್ಧವೂ ದೂರು ದಾಖಲು

ಇದು ಮಾತ್ರವಲ್ಲದೆ ಈ ದುರಂತಕ್ಕೆ ವಿರಾಟ್ ಕೊಹ್ಲಿಯೂ ಕಾರಣರೆಂದು ನೈಜ ಹೋರಾಟಗಾರರ ವೇದಿಕೆಯ ಎಚ್ ಎ‌ಂ ವೆಂಕಟೇಶ್ ಆರೋಪ ಹೊರಿಸುತ್ತಿದ್ದು,ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಈಗಾಗಲೇ‌ ಆರ್​ಸಿಬಿ ವಿರುದ್ದ ದಾಖಲಾಗಿರುವ ಎಫ್​ಐಆರ್ ಜೊತೆಗೆ ಕೊಹ್ಲಿ ವಿರುದ್ಧದ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.

ಹಲವರ ತಲೆ ದಂಡ

ಈಗಾಗಲೇ ಈ ದುರಂತಕ್ಕೆ ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಅಲ್ಲದೆ ಆರ್​ಸಿಬಿ ಫ್ರಾಂಚೈಸಿಯ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ ರಾಜ್ಯ ಪೊಲೀಸ್ ಇಲಾಖೆಯಲ್ಲೂ ಕೆಲವರ ತಲೆದಂಡವಾಗಿದೆ. ರಾಜ್ಯ ಸರ್ಕಾರ ಕೂಡ ಮಡಿದವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಕೆಎಸ್​ಸಿಎ ಹಾಗೂ ಆರ್​ಸಿಬಿ ಫ್ರಾಂಚೈಸಿ ಕೂಡ ಪರಿಹಾರ ಘೋಷಿಸಿದ್ದು, ಗಾಯಾಳುಗಳ ನೆರವಿಗೆ ನಿಲ್ಲುವುದಾಗಿ ತಿಳಿಸಿದೆ. ಇದೆಲ್ಲದರ ನಡುವೆ ಕೊಹ್ಲಿಯನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವುದು ಮುಂದಿನ ದಿನಗಳಲ್ಲಿ ಯಾವ ರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ