AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್​ಗೆ ಒಲಿದ ನಾಯಕತ್ವ..!

ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್‌ಗೆ ದೆಹಲಿ U19 ತಂಡದ ನಾಯಕತ್ವ ದೊರೆತಿದೆ. ಮುಂಬರುವ ವಿನೂ ಮಂಕಡ್ ಟ್ರೋಫಿಗಾಗಿ ಡಿಡಿಸಿಎ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಅಕ್ಟೋಬರ್ 8 ರಿಂದ ವಿಶಾಖಪಟ್ಟಣದಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಭಾರತ U19 ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಆರ್ಯವೀರ್, ಉತ್ತಮ ಪ್ರದರ್ಶನ ನೀಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ದೊಡ್ಡ ಜವಾಬ್ದಾರಿ ಸಿಕ್ಕಿದ್ದು, ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.

ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್​ಗೆ ಒಲಿದ ನಾಯಕತ್ವ..!
Aaryavir SehwagImage Credit source: PTI
ಪೃಥ್ವಿಶಂಕರ
|

Updated on: Oct 04, 2026 | 10:11 PM

Share

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ 18 ವರ್ಷದ ಪುತ್ರ ಆರ್ಯವೀರ್ ಸೆಹ್ವಾಗ್ ಅವರಿಗೆ ದೇಶೀಯ ಕ್ರಿಕೆಟ್‌ನಲ್ಲಿ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಮುಂಬರುವ ವಿನೂ ಮಂಕಡ್ ಟ್ರೋಫಿಗಾಗಿ ಆರ್ಯವೀರ್ ಅವರನ್ನು ದೆಹಲಿಯ ಪುರುಷರ 19 ವರ್ಷದೊಳಗಿನವರ ತಂಡದ ನಾಯಕರನ್ನಾಗಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಘೋಷಿಸಿದೆ. ಡಿಡಿಸಿಎಯ ಜೂನಿಯರ್ ಪುರುಷರ ಆಯ್ಕೆ ಸಮಿತಿಯು 16 ಸದಸ್ಯರ ತಂಡವನ್ನು ಈ ಟೂರ್ನಿಗಾಗಿ ಆಯ್ಕೆ ಮಾಡಲಾಗಿದೆ. ಈ ಪಂದ್ಯಾವಳಿ ಅಕ್ಟೋಬರ್ 8 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಅಲ್ಲಿ ದೆಹಲಿಯ ಯುವ ತಂಡವು ಆರ್ಯವೀರ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಅರ್ನವ್ ಬುಗ್ಗಾ ಅವರನ್ನು ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ.

ಆರ್ಯವೀರ್ ಸೆಹ್ವಾಗ್​ಗೆ ನಾಯಕತ್ವ

ಆರ್ಯವೀರ್ ಸೆಹ್ವಾಗ್ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಕಳೆದ ತಿಂಗಳು ಆಸ್ಟ್ರೇಲಿಯಾ ಅಂಡರ್ -19 ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ಅವರು ಭಾರತದ ಅಂಡರ್ -19 ತಂಡಕ್ಕೆ ಪಾದಾರ್ಪಣೆ ಮಾಡಿದರು. ಸರಣಿಯ ಮೊದಲ ಪಂದ್ಯದಲ್ಲಿ 28 ರನ್, ಎರಡನೇ ಪಂದ್ಯದಲ್ಲಿ 47 ರನ್ ಮತ್ತು ಮೂರನೇ ಪಂದ್ಯದಲ್ಲಿ ಉಪಯುಕ್ತ 34 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು. 18 ವರ್ಷದ ಆರ್ಯವೀರ್ ಹಿರಿಯರ ಮಟ್ಟದ ಟಿ20 ಕ್ರಿಕೆಟ್‌ನಲ್ಲೂ ಅನುಭವ ಹೊಂದಿದ್ದಾರೆ. ಈ ವರ್ಷ ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಅವರು ವೆಸ್ಟ್ ದೆಹಲಿ ಲಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದರು. ಆ ಪಂದ್ಯಾವಳಿಯಲ್ಲಿ ಎರಡು ಪಂದ್ಯಗಳನ್ನು ಆಡಿದ ಅವರು 24 ರನ್ ಕಲೆಹಾಕಿದರು.

View this post on Instagram

A post shared by DDCA (@ddcacricketofficial)

View this post on Instagram

A post shared by DDCA (@ddcacricketofficial)

ವಿನೂ ಮಂಕಡ್ ಟ್ರೋಫಿಗಾಗಿ ದೆಹಲಿಯ 16 ಸದಸ್ಯರ ತಂಡ: ಆರ್ಯವೀರ್ ಸೆಹ್ವಾಗ್ (ನಾಯಕ), ತನ್ಮಯ್ ಚೌಧರಿ, ಅರ್ನವ್ ಬುಗ್ಗಾ (ಉಪನಾಯಕ), ಧನ್ಯಾ ನಕ್ರಾ, ಉದಯ್ ಚಾವ್ಲಾ, ಗರ್ವ್ ಕುಮಾರ್, ಅಭಿರಾಜ್ ಗಗನ್ ಸಿಂಗ್ (ವಿಕೆಟ್ ಕೀಪರ್), ತರುಣ್ ಸಿಂಗ್ (ವಿಕೆಟ್ ಕೀಪರ್), ಆರ್ಯನ್ ಶರ್ಮಾ, ಓಜಸ್ದೀಪ್ ಸಿಂಗ್, ಕಿರಿತ್ ಕೌಶಿಕ್, ವರುಣ್ ವಂಜನಿ, ರುದ್ರ ದೇವ್ ಯಾದವ್, ಪ್ರದ್ಯುಮನ್ ಸನನ್, ಪಾರ್ಥ್ ರಾಜ್, ಶಾಂತನು ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!