AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ತಕ್ಕ ಮಗ: ಅಪ್ಪನ ಸ್ಟೈಲ್​ ಮರುಸೃಷ್ಟಿಸಿದ ಜೂನಿಯರ್ ಸೆಹ್ವಾಗ್!

Aryavir Sehwag: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ 'ನಜಾಫ್‌ಗಢದ ನವಾಬ' ವೀರೇಂದ್ರ ಸೆಹ್ವಾಗ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಕೋಟ್ಯಂತರ ಅಭಿಮಾನಿಗಳು ಮನಸೋತಿದ್ದರು. ಇದೀಗ ಅವರದೇ ರಕ್ತ, 18 ವರ್ಷದ ಆರ್ಯವೀರ್ ಸೆಹ್ವಾಗ್ ಮೈದಾನದಲ್ಲಿ ಅಪ್ಪನ ಆ ಐಕಾನಿಕ್ ಬ್ಯಾಟಿಂಗ್ ಶೈಲಿಯನ್ನು ಮರುಸೃಷ್ಟಿಸುವ ಮೂಲಕ ಇಡೀ ಕ್ರಿಕೆಟ್ ಜಗತ್ತನ್ನು ಮತ್ತೊಮ್ಮೆ ರೋಮಾಂಚನಗೊಳಿಸಿದ್ದಾರೆ. 

ತಂದೆಗೆ ತಕ್ಕ ಮಗ: ಅಪ್ಪನ ಸ್ಟೈಲ್​ ಮರುಸೃಷ್ಟಿಸಿದ ಜೂನಿಯರ್ ಸೆಹ್ವಾಗ್!
Aryavir Sehwag - Virender Sehwag
ಝಾಹಿರ್ ಯೂಸುಫ್
|

Updated on: Aug 25, 2026 | 11:15 AM

Share

ಭಾರತ ಕ್ರಿಕೆಟ್ ತಂಡದ ದಂತಕಥೆ, ಸ್ಫೋಟಕ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಬ್ಯಾಟಿಂಗ್ ಶೈಲಿಯನ್ನು ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದೀಗ ಅವರ ಪುತ್ರ 18 ವರ್ಷದ ಆರ್ಯವೀರ್ ಸೆಹ್ವಾಗ್ ಮೈದಾನದಲ್ಲಿ ಅಪ್ಪನ ಬ್ಯಾಟಿಂಗ್ ಶೈಲಿಯನ್ನು ಮರುಸೃಷ್ಟಿಸುವ ಮೂಲಕ ಇಡೀ ಕ್ರಿಕೆಟ್ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ.

ವೈರಲ್ ಆದ ಆ ‘ಐಕಾನಿಕ್ ಶಾಟ್’

ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಲಯನ್ಸ್ ಪರ ಕಣಕ್ಕಿಳಿಯುತ್ತಿರುವ ಆರ್ಯವೀರ್ ಸೆಹ್ವಾಗ್, ನ್ಯೂ ಡೆಲ್ಲಿ ಟೈಗರ್ಸ್ ವಿರುದ್ಧದ ಪಂದ್ಯದಲ್ಲಿ ಆಫ್ ಸ್ಟಂಪ್‌ನಿಂದ ಹೊರಗಿದ್ದ ಶಾರ್ಟ್-ಲೆಂತ್ ಎಸೆತವನ್ನು ಬ್ಯಾಕ್-ಫುಟ್‌ನಲ್ಲಿ ನಿಂತು ಕವರ್ಸ್ ದಿಕ್ಕಿನಲ್ಲಿ ಆಕರ್ಷಕ ಬೌಂಡರಿಗಟ್ಟಿದರು.  ಶಾಟ್ ಹೊಡೆದ ನಂತರ ಅವರು ಬ್ಯಾಟ್ ಹಿಡಿದು ನಿಂತ ಭಂಗಿ ಅವರ ತಂದೆ ವೀರೇಂದ್ರ ಸೆಹ್ವಾಗ್ ಅವರನ್ನೇ ನೆನಪಿಸುವಂತಿತ್ತು.

ಅಷ್ಟೇ ಅಲ್ಲದೆ, ಆರ್ಯವೀರ್ ಅವರ ಈ ಶಾಟ್ ಅನ್ನು ಈ ಹಿಂದೆ ವೀರೇಂದ್ರ ಸೆಹ್ವಾಗ್ ಬಾರಿಸಿದ್ದ ಐಕಾನಿಕ್ ಬೌಂಡರಿಗೆ ಹೋಲಿಸಿ, ಡಿಪಿಎಲ್ ತನ್ನ ಅಧಿಕೃತ ಖಾತೆಯಲ್ಲಿ ‘ಸೈಡ್-ಬೈ-ಸೈಡ್’ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಇದನ್ನು ನೋಡಿದ ಕ್ರಿಕೆಟ್ ಅಭಿಮಾನಿಗಳು “ಸೆಹ್ವಾಗ್ ಈಸ್ ಬ್ಯಾಕ್”, “ತಂದೆಗೆ ತಕ್ಕ ಮಗ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡುತ್ತಿದ್ದಾರೆ.

ಆರ್ಯವೀರ್ ಪ್ರದರ್ಶನ:

ಆ ಪಂದ್ಯದಲ್ಲಿ ವೆಸ್ಟ್ ಡೆಲ್ಲಿ ಲಯನ್ಸ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಆರ್ಯವೀರ್, ಕೇವಲ 14 ಎಸೆತಗಳಲ್ಲಿ 4 ಭರ್ಜರಿ ಬೌಂಡರಿಗಳ ನೆರವಿನಿಂದ 22 ರನ್ ಸಿಡಿಸಿದರು. 157.14 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಅವರ ಈ ಆಕ್ರಮಣಕಾರಿ ಆರಂಭ, ತಂಡವು 6 ವಿಕೆಟ್‌ಗಳ ಸುಲಭ ಜಯ ದಾಖಲಿಸಲು ನೆರವಾಯಿತು.

18 ವರ್ಷದ ಆರ್ಯವೀರ್ ಸೆಹ್ವಾಗ್ ಕೇವಲ ಟಿ20 ಮಾತ್ರವಲ್ಲದೆ, ದೀರ್ಘಾವಧಿಯ ಕ್ರಿಕೆಟ್‌ನಲ್ಲೂ ಈಗಾಗಲೇ ತಮ್ಮ ಪ್ರತಿಭೆ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಕೂಚ್ ಬೆಹಾರ್ ಟ್ರೋಫಿಯಲ್ಲಿ ದೆಹಲಿ ಪರ ಆಡಿದ್ದ ಅವರು, ಮೇಘಾಲಯ ವಿರುದ್ಧ ಕೇವಲ 309 ಎಸೆತಗಳಲ್ಲಿ 51 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 297 ರನ್ ಚಚ್ಚಿ ಇತಿಹಾಸ ನಿರ್ಮಿಸಿದ್ದರು.

ಇದನ್ನೂ ಓದಿ: ಧ್ರುವ್ ಜುರೆಲ್ ಶತಕಕ್ಕೆ ಧೋನಿ ದಾಖಲೆ ಧೂಳೀಪಟ

ತಂದೆಯಂತೆಯೇ ಯಾವುದೇ ಭಯವಿಲ್ಲದೆ, ಮುನ್ನುಗ್ಗಿ ಹೊಡೆಯುವ ಆಕ್ರಮಣಕಾರಿ ಶೈಲಿಯನ್ನು ಮೈಗೂಡಿಸಿಕೊಂಡಿರುವ ಆರ್ಯವೀರ್ ಸೆಹ್ವಾಗ್, ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟರೂ ಅಚ್ಚರಿಪಡಬೇಕಿಲ್ಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು