Ashes 2023: ಒಂದು ವಾರ ಇಂಗ್ಲೆಂಡ್-ಆಸ್ಟ್ರೇಲಿಯಾ ಆಟಗಾರರಿಗೆ ರೆಸ್ಟ್..!
England vs Australia: ಲೀಡ್ಸ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
Ashes 2023: ಆ್ಯಶಸ್ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಕ್ತಾಯವಾಗಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಆದರೆ ಜುಲೈ 9 ರಂದು ಮುಕ್ತಾಯಗೊಂಡ ಮೂರನೇ ಟೆಸ್ಟ್ ಬಳಿಕ ಇಂಗ್ಲೆಂಡ್-ಆಸ್ಟ್ರೇಲಿಯಾ (England vs Australia) ಆಟಗಾರರಿಗೆ ದೀರ್ಘಾವಧಿಯ ವಿಶ್ರಾಂತಿ ದೊರೆಕಿದೆ. ಅಂದರೆ 4ನೇ ಟೆಸ್ಟ್ ಪಂದ್ಯವು ಆರಂಭವಾಗುವುದು ಜುಲೈ 19 ರಿಂದ. ಅದರಂತೆ ಇನ್ನೊಂದು ವಾರ ಉಭಯ ತಂಡಗಳ ಆಟಗಾರರು ಸಂಪೂರ್ಣ ವಿಶ್ರಾಂತಿಯಲ್ಲಿರಲಿದ್ದಾರೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್ ವಿಕೆಟ್ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಲಾರ್ಡ್ಸ್ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ತಂಡವು 43 ರನ್ಗಳಿಂದ ಗೆಲುವು ದಾಖಲಿಸಿತ್ತು. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಆಸೀಸ್ ಮುಂದಿತ್ತು.
ಆದರೆ ಲೀಡ್ಸ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯು 2-1 ಆಗಿದೆ.
ಇನ್ನುಳಿದಿರುವ 2 ಪಂದ್ಯಗಳು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಒಂದು ವೇಳೆ ಇಂಗ್ಲೆಂಡ್ ಗೆಲುವು ದಾಖಲಿಸಿದರೆ ಸರಣಿಯು 2-2 ಅಂತರದಿಂದ ಸಮಬಲಗೊಳ್ಳಲಿದೆ. ಹೀಗಾದರೆ ಕೊನೆಯ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಡಲಿದೆ.
ಇದನ್ನೂ ಓದಿ: Ashes 2023: ಆ್ಯಶಸ್ ಸರಣಿಯ 3ನೇ ಟೆಸ್ಟ್ನಲ್ಲಿ 5 ದಾಖಲೆಗಳು ನಿರ್ಮಾಣ
ಹೀಗಾಗಿಯೇ ಮ್ಯಾಚೆಂಸ್ಟರ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಕೂಡ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಜುಲೈ 19 ರಿಂದ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸರಣಿ ಸಮಬಲವಾಗಲಿದ್ದು, ಆಸ್ಟ್ರೇಲಿಯಾ ಜಯಿಸಿದರೆ ಸರಣಿ ಆಸೀಸ್ ಪಾಲಾಗಲಿದೆ. ಅದರಂತೆ ಮ್ಯಾಂಚೆಸ್ಟರ್ನಲ್ಲಿ ಮತ್ತೊಂದು ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.