AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಆ್ಯಶಸ್ ಸರಣಿಯ 3ನೇ ಟೆಸ್ಟ್​ನಲ್ಲಿ 5 ದಾಖಲೆಗಳು ನಿರ್ಮಾಣ

England vs Australia: ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 75 ರನ್ ಬಾರಿಸುವ ಮೂಲಕ ಇಂಗ್ಲೆಂಡ್​ನ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಟೆಸ್ಟ್​ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ.

Ashes 2023: ಆ್ಯಶಸ್ ಸರಣಿಯ 3ನೇ ಟೆಸ್ಟ್​ನಲ್ಲಿ 5 ದಾಖಲೆಗಳು ನಿರ್ಮಾಣ
Ashes 2023
TV9 Web
| Edited By: |

Updated on: Jul 10, 2023 | 3:08 PM

Share

Ashes 2023: ಲೀಡ್ಸ್​ನ ಹೆಡಿಂಗ್ಲಿ ಮೈದಾನದಲ್ಲಿ ನಡೆದ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಇಂಗ್ಲೆಂಡ್ (England) 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಇನಿಂಗ್ಸ್​ನಲ್ಲಿ 251 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಇದರೊಂದಿಗೆ 5 ಪಂದ್ಯಗಳ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ.

ಮೊದಲೆರಡು ಟೆಸ್ಟ್​ಗಳಲ್ಲಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾಗೆ ಮೂರನೇ ಪಂದ್ಯದಲ್ಲಿ ಸೋಲುಣಿಸುವಲ್ಲಿ ಕೊನೆಗೂ ಇಂಗ್ಲೆಂಡ್ ಯಶಸ್ವಿಯಾಗಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಕೂಡ ನಿರ್ಮಾಣವಾಗಿದೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

  1. – ಕ್ಯಾಚ್ ದಾಖಲೆ: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಫೀಲ್ಡರ್ ಸ್ಟೀವ್ ಸ್ಮಿತ್ 5 ಕ್ಯಾಚ್​ಗಳನ್ನು ಹಿಡಿದಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಬಾರಿ 4 ಕ್ಕಿಂತ ಹೆಚ್ಚು ಕ್ಯಾಚ್ ಹಿಡಿದ ದಾಖಲೆಯೊಂದು ಸ್ಮಿತ್ ಪಾಲಾಯಿತು. ಸ್ಟೀವ್ ಸ್ಮಿತ್ ಇದುವರೆಗೆ 4 ಬಾರಿ ಒಂದೇ ಇನಿಂಗ್ಸ್​ನಲ್ಲಿ 4 ಕ್ಕಿಂತ ಹೆಚ್ಚು ಕ್ಯಾಚ್​ಗಳನ್ನು ಹಿಡಿದಿದ್ದಾರೆ.
  2. – ದಾಖಲೆಯ ಸ್ಟ್ರೈಕ್ ರೇಟ್: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ಆಟಗಾರ ಮಾರ್ಕ್​ ವುಡ್ 8 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 24 ರನ್ ಬಾರಿಸಿದ್ದರು. ಇದರೊಂದಿಗೆ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ 300 ರ ಸ್ಟ್ರೈಕ್ ರೇಟ್​ನಲ್ಲಿ ರನ್ ಕಲೆಹಾಕಿದ ವಿಶೇಷ ದಾಖಲೆಯೊಂದು ಮಾರ್ಕ್​ ವುಡ್ ಪಾಲಾಯಿತು.
  3. – ಆಸ್ಟ್ರೇಲಿಯಾ ದಾಖಲೆ: ಈ ಪಂದ್ಯದ ಮೂಲಕ ಸ್ಟೀವ್ ಸ್ಮಿತ್ 100 ಟೆಸ್ಟ್​ಗಳನ್ನಾಡಿದ ವಿಶೇಷ ದಾಖಲೆ ನಿರ್ಮಿಸಿದ್ದರು. ಈ ವಿಶೇಷ ದಾಖಲೆಯೊಂದಿಗೆ ಆಸ್ಟ್ರೇಲಿಯಾ ಪರ ನೂರು ಟೆಸ್ಟ್​ ಪಂದ್ಯಗಳನ್ನಾಡಿದ 16ನೇ ಆಟಗಾರ ಎನಿಸಿಕೊಂಡರು. ಇದರೊಂದಿಗೆ 100+ ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಿದ ಅತಿ ಹೆಚ್ಚು ಕ್ರಿಕೆಟಿಗರನ್ನು ಹೊಂದಿರುವ ದೇಶವಾಗಿ ಆಸ್ಟ್ರೇಲಿಯಾ ಹೊರಹೊಮ್ಮಿದೆ. ಇದಕ್ಕೂ ಮುನ್ನ 15 ಆಟಗಾರರನ್ನು ಹೊಂದಿದ್ದ ಇಂಗ್ಲೆಂಡ್ ಅಗ್ರಸ್ಥಾನದಲ್ಲಿತ್ತು.
  4. – ಬೂಮ್ ಬೂಮ್ ಬ್ರೂಕ್: ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 75 ರನ್ ಬಾರಿಸುವ ಮೂಲಕ ಇಂಗ್ಲೆಂಡ್​ನ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಟೆಸ್ಟ್​ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ. ಇದರೊಂದಿಗೆ ಅತೀ ಕಡಿಮೆ ಎಸೆತಗಳನ್ನು ಎದುರಿಸಿ ಸಾವಿರ ರನ್ ಪೂರೈಸಿದ ದಾಖಲೆ ಬ್ರೂಕ್ ಪಾಲಾಗಿದೆ. ಇಂಗ್ಲೆಂಡ್​ನ ಈ ಹೊಡಿಬಡಿ ದಾಂಡಿಗ 1058 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.
  5. – ಕ್ಯಾಪ್ಟನ್ ದಾಖಲೆ: ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250+ ರನ್​ಗಳನ್ನು ಚೇಸ್ ಮಾಡಿ ಗೆದ್ದ ತಂಡದ ನಾಯಕ ಎಂಬ ಹೆಗ್ಗಳಿಕೆಗೆ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಧೋನಿ ಹೆಸರಿನಲ್ಲಿತ್ತು. ಎಂಎಸ್​ಡಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 4 ಬಾರಿ ಜಯ ಸಾಧಿಸಿತ್ತು. ಇದೀಗ ಬೆನ್ ಸ್ಟೋಕ್ಸ್ ನೇತೃತ್ವದಲ್ಲಿ ಇಂಗ್ಲೆಂಡ್ ತಂಡವು 5ನೇ ಬಾರಿ 250+ ರನ್ ಚೇಸ್ ಮಾಡಿ ಗೆಲುವು ದಾಖಲಿಸಿದೆ. ಈ ಮೂಲಕ ಸ್ಟೋಕ್ಸ್ ನಾಯಕತ್ವದಲ್ಲೂ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ