AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ನಿರ್ಣಾಯಕ ಪಂದ್ಯದಲ್ಲೂ ಮುಗ್ಗರಿಸಿದ ಆಂಗ್ಲರು; ಮೊದಲ ದಿನ ಆಸೀಸ್ ಮೇಲುಗೈ

England vs Australia 5th Test Day 1: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ಓವಲ್‌ನಲ್ಲಿ ನಡೆಯುತ್ತಿರುವ ನಿರ್ಣಾಯಕ ಮತ್ತು ಅಂತಿಮ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ದಿನದಾಟದಲ್ಲಿ ಆಸೀಸ್ ಮೇಲುಗೈ ಸಾಧಿಸಿದೆ.

Ashes 2023: ನಿರ್ಣಾಯಕ ಪಂದ್ಯದಲ್ಲೂ ಮುಗ್ಗರಿಸಿದ ಆಂಗ್ಲರು; ಮೊದಲ ದಿನ ಆಸೀಸ್ ಮೇಲುಗೈ
ಆ್ಯಶಸ್ 5ನೇ ಟೆಸ್ಟ್
ಪೃಥ್ವಿಶಂಕರ
|

Updated on: Jul 28, 2023 | 11:01 AM

Share

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (England vs Australia) ನಡುವೆ ಓವಲ್‌ನಲ್ಲಿ ನಡೆಯುತ್ತಿರುವ ನಿರ್ಣಾಯಕ ಮತ್ತು ಅಂತಿಮ ಆ್ಯಶಸ್ ಟೆಸ್ಟ್ (Ashes 2023) ಸರಣಿಯ ಮೊದಲ ದಿನದಾಟದಲ್ಲಿ ಆಸೀಸ್ ಮೇಲುಗೈ ಸಾಧಿಸಿದೆ. ಈಗಾಗಲೇ ಸರಣಿಯಲ್ಲಿ 2-1 ಅಂತರದಿಂದ ಹಿನ್ನಡೆ ಕಾಯ್ದುಕೊಂಡಿರುವ ಆಂಗ್ಲರು ಸರಣಿಯನ್ನು ಸಮಬಲಗೊಳಿಸಬೇಕೆಂದರೆ, ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಆದರೆ ಸ್ಟೋಕ್ಸ್ (Ben Stokes) ಪಡೆಗೆ ಮೊದಲ ಇನ್ನಿಂಗ್ಸ್​ನಲ್ಲಿ ಭಾರಿ ಹಿನ್ನಡೆಯುಂಟಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಇಂಗ್ಲೆಂಡ್, ಆಸೀಸ್ ಬೌಲರ್​ಗಳ ದಾಳಿಗೆ ತತ್ತರಿಸಿ, ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 283 ರನ್​ಗಳಿಗೆ ಆಲೌಟ್ ಆಗಿದೆ. ಇನ್ನು ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸೀಸ್ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 61 ರನ್ ಕಲೆಹಾಕಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡ, ತನ್ನ ಎಂದಿನ ಬಾಝ್ ಬಾಲ್ ಕ್ರಿಕೆಟ್ ಶೈಲಿಯಲ್ಲಿ ಮುಂದುವರೆಸಿತು. ಇದರ ಫಲವಾಗಿ ಆತಿಥೇಯರು ಆಗಾಗ್ಗೆ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಿದ್ದರು. ಆರಂಭಿಕರಾದ ಜಾಕ್ ಕ್ರಾಲಿ (21), ಬೆನ್ ಡಕೆಟ್ (41), ಮೊಯಿನ್ ಅಲಿ (34) ಉತ್ತಮ ಆರಂಭದ ಹೊರತಾಗಿಯೂ ಇದನ್ನು ದೊಡ್ಡ ಇನ್ನಿಂಗ್ಸ್‌ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

Ashes 2023: ಕಾಂಗರೂಗಳ ಮೇಲೆ ಆಂಗ್ಲರ ಸವಾರಿ; ರೋಚಕ ಘಟ್ಟದತ್ತ 4ನೇ ಆ್ಯಶಸ್ ಟೆಸ್ಟ್​

ಬ್ರೂಕ್ ಅರ್ಧಶತಕ

ತಂಡದ ಮಾಜಿ ನಾಯಕ ಜೋ ರೂಟ್ ಐದು ರನ್ ಗಳಿಸಿ ಔಟಾದರು. ಆದಾಗ್ಯೂ, ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿದ ಬ್ರೂಕ್, 91 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 85 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಕ್ರಿಸ್ ವೋಕ್ಸ್ 36 ಮತ್ತು ಮಾರ್ಕ್ ವುಡ್ 28 ರನ್ ಗಳಿಸಿ ಇಂಗ್ಲೆಂಡ್ ತಂಡವನ್ನು 250ರ ಗಡಿ ದಾಟಿಸಲು ನೆರವಾದರು.

4 ವಿಕೆಟ್ ಉರುಳಿಸಿದ ಸ್ಟಾರ್ಕ್​

ಇನ್ನು ಆಸೀಸ್ ಪರ ವೇಗಿ ಸ್ಟಾರ್ಕ್ ಪ್ರಮುಖ 4 ವಿಕೆಟ್ ಉರುಳಿಸಿ ಮಿಂಚಿದರು. ಸ್ಟಾರ್ಕ್​ ಹೊರತುಪಡಿಸಿ, ಜೋಶ್ ಹ್ಯಾಜಲ್‌ವುಡ್ ಮತ್ತು ಟಾಡ್ ಮರ್ಫಿ ತಲಾ ಎರಡು ವಿಕೆಟ್ ಪಡೆದರು. ಕಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದು ವಿಕೆಟ್ ಪಡೆದರು. ಹಾಗೆಯೇ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯ ಡೇವಿಡ್ ವಾರ್ನರ್ (24) ರೂಪದಲ್ಲಿ ಒಂದು ವಿಕೆಟ್ ಕಳೆದುಕೊಂಡಿದ್ದು, ಉಸ್ಮಾನ್ ಖವಾಜಾ 26 ಮತ್ತು ಮಾರ್ನಸ್ ಲಬುಶೆನ್ 2 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ