Ashes 2023: ಮೊದಲ ಟೆಸ್ಟ್ ಗೆಲ್ಲುತ್ತಿದ್ದಂತೆ ಹುಚ್ಚೆದ್ದು ಕುಣಿದ ಆಸೀಸ್ ಆಟಗಾರರು; ವಿಡಿಯೋ ನೋಡಿ

Ashes 2023, AUS vs ENG: ರಾಬಿನ್ಸನ್ ಓವರ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ಕಮ್ಮಿನ್ಸ್ ಆಸೀಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

Ashes 2023: ಮೊದಲ ಟೆಸ್ಟ್ ಗೆಲ್ಲುತ್ತಿದ್ದಂತೆ ಹುಚ್ಚೆದ್ದು ಕುಣಿದ ಆಸೀಸ್ ಆಟಗಾರರು; ವಿಡಿಯೋ ನೋಡಿ
ಆಸೀಸ್ ಆಟಗಾರರ ಸಂಭ್ರಮಾಚರಣೆ
Follow us
ಪೃಥ್ವಿಶಂಕರ
|

Updated on:Jun 21, 2023 | 9:30 AM

ಆಸೀಸ್ ಕ್ಯಾಪ್ಟನ್ ಕಮ್ಮಿನ್ಸ್ (Pat Cummins ) ಅವರ ಹೋರಾಟದ ಇನ್ನಿಂಗ್ಸ್‌ನ ಆಧಾರದ ಮೇಲೆ ಆಸ್ಟ್ರೇಲಿಯಾ 2023 ರ ಆ್ಯಶಸ್ (Ashes 2023) ಸರಣಿಯಲ್ಲಿ ಗೆಲುವಿನ ಆರಂಭ ಪಡೆದುಕೊಂಡಿದೆ . ಮೊದಲ ಪಂದ್ಯದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಉಸ್ಮಾನ್ ಖವಾಜಾ (Usman Khawaja) 65 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರೆ , ಪ್ಯಾಟ್ ಕಮಿನ್ಸ್ ಅಜೇಯ 44 ರನ್ ಮತ್ತು ಡೇವಿಡ್ ವಾರ್ನರ್ 36 ರನ್ ಗಳಿಸಿದರು. ಪ್ಯಾಟ್ ಕಮಿನ್ಸ್ ಮತ್ತು ನಾಥನ್ ಲಿಯಾನ್ ಒಂಬತ್ತನೇ ವಿಕೆಟ್‌ಗೆ 50+ ರನ್‌ಗಳ ಜೊತೆಯಾಟವನ್ನು ಹಂಚಿಕೊಂಡು ತಂಡವನ್ನು ಗೆಲುವಿನ ದಡ ಸೇರಿಸಿದರು.

ರಾಬಿನ್ಸನ್ ಓವರ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ಕಮ್ಮಿನ್ಸ್ ಆಸೀಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಇತ್ತ ಕಮ್ಮಿನ್ಸ್ ಬೌಂಡರಿ ಬಾರಿಸುತ್ತಿದ್ದಂತೆ, ಡಗೌಟ್​ನಲ್ಲಿ ಕುಳಿತ್ತಿದ್ದ ಆಸೀಸ್ ಆಟಗಾರರು ಒಬ್ಬರನ್ನೊಬ್ಬರು ತಬ್ಬಿಕೊಂಡು ಕುಣಿಯಲಾರಂಭಿಸಿದರು. ಇತ್ತ ಗೆಲುವಿನ ಬೌಂಡರಿ ಬಾರಿಸಿದ ನಾಯಕ ಕಮ್ಮಿನ್ಸ್ ತಮ್ಮ ಹೆಲ್ಮೆಟ್ ಹಾಗೂ ಬ್ಯಾಟ್ ಬೀಸಾಡಿ, ಆಸೀಸ್ ಗೆಲುವಿಗೆ ಸ್ಮರಣೀಯ ಜೊತೆಯಾಟವನ್ನಾಡಿದ ನಾಥನ್ ಲಿಯಾನ್ ಅವರನ್ನು ತಬ್ಬಿಕೊಂಡು ಸಂಭ್ರಮಾಚರಣೆ ಮಾಡಿದರು.

ಪಂದ್ಯದ ಸಾರಾಂಶ ಹೀಗಿದೆ

ಇನ್ನು ಈ ಪಂದ್ಯದ ವಿಚಾರಕ್ಕೆ ಬಂದರೆ, ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ಭಾಝ್ ಬಾಲ್ ಕ್ರಿಕೆಟ್​ಗೆ ಆದ್ಯತೆ ನೀಡಿ ತನ್ನ ಮೊದಲ ಇನ್ನಿಂಗ್ಸ್ ಅನ್ನು 393 ರನ್​ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಇದಾದ ಬಳಿಕ ಆಸ್ಟ್ರೇಲಿಯದ ಮೊದಲ ಇನಿಂಗ್ಸ್ 386 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿದ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 273 ರನ್‌ಗಳಿಗೆ ಆಲೌಟ್ ಆಯಿತು. ಅಂತಿಮವಾಗಿ ಆಸ್ಟ್ರೇಲಿಯಾ ಗೆಲುವಿಗೆ 281 ರನ್‌ಗಳ ಗುರಿ ಸಿಕ್ಕಿತು.

Steve Smith Video: ‘ನೀವು ಅಳುವುದನ್ನು ನಾವು ಟಿವಿಯಲ್ಲಿ ನೋಡಿದ್ದೇವೆ’! ಸ್ಟೀವ್ ಸ್ಮಿತ್ ಕಾಲೆಳೆದ ಇಂಗ್ಲೆಂಡ್ ಫ್ಯಾನ್ಸ್; ವಿಡಿಯೋ

ಕೊನೆಯ ದಿನದ ಪರಿಸ್ಥಿತಿ ಹೇಗಿತ್ತು?

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಬಯಸಿದ ಆರಂಭವನ್ನು ಪಡೆಯಲಿಲ್ಲ. ನಾಲ್ಕನೇ ದಿನವೇ ಮೂರು ವಿಕೆಟ್ ಕಳೆದುಕೊಂಡಿತು. ಮಳೆಯಿಂದಾಗಿ ಟೆಸ್ಟ್‌ನ ಕೊನೆಯ ದಿನದ ಆಟ ತಡವಾಯಿತು. ಮಂಗಳವಾರ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿತ್ತು. ಕೊನೆಯ ದಿನ ಆಸ್ಟ್ರೇಲಿಯಕ್ಕೆ 174 ರನ್‌ಗಳ ಅಗತ್ಯವಿದ್ದು, ಇಂಗ್ಲೆಂಡ್‌ಗೆ ಗೆಲುವಿಗೆ 7 ವಿಕೆಟ್‌ಗಳ ಅಗತ್ಯವಿತ್ತು.

ಅರ್ಧಶತಕ ಸಿಡಿಸಿದ ಖವಾಜಾ

ನಾಲ್ಕನೇ ದಿನದಾಟದಂತ್ಯಕ್ಕೆ ಉಸ್ಮಾನ್ ಖವಾಜಾ 34 ರನ್ ಮತ್ತು ಸ್ಕಾಟ್ ಬೋಲ್ಯಾಂಡ್ 13 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಮೊದಲ ಇನಿಂಗ್ಸ್‌ನಲ್ಲಿ 141 ರನ್ ಗಳಿಸಿದ್ದ ಖವಾಜಾ ಮತ್ತೊಮ್ಮೆ ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪರ 65 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಖವಾಜಾರನ್ನು ಹೊರತುಪಡಿಸಿ ಆಸ್ಟ್ರೇಲಿಯಾದ ಉಳಿದ ಆಟಗಾರರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ಹೀಗಾಗಿ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ಗೆ ನಾಯಕ ಪ್ಯಾಟ್ ಕಮಿನ್ಸ್ ಮತ್ತು ನಾಥನ್ ಲಿಯಾನ್ ಅರ್ಧಶತಕದ ಜೊತೆಯಾಟ ನೆರವಿಗೆ ಬಂತು. ಈ ವೇಳೆ ಆಸ್ಟ್ರೇಲಿಯಾ ಗೆಲುವಿಗೆ 15 ಓವರ್‌ಗಳಲ್ಲಿ 51 ರನ್‌ಗಳ ಅಗತ್ಯವಿತ್ತು. ಈ ವೇಳೆ ಕಮ್ಮಿನ್ಸ್ ಆಕ್ರಮಣಕಾರಿ ಕ್ರಿಕೆಟ್ ಆಡಿದರು. 8 ವಿಕೆಟ್‌ಗಳ ನಷ್ಟದ ಹೊರತಾಗಿಯೂ, ಅವರು ನಾಥನ್ ಲಿಯಾನ್ ಅವರೊಂದಿಗೆ ಅಜೇಯ 55 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:24 am, Wed, 21 June 23

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ