Ashes 2023: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಗುರುವಾರದಿಂದ (ಜುಲೈ 27) ಶುರುವಾಗಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇನ್ಬು ಮೂರನೇ ಪಂದ್ಯದಲ್ಲಿ ಗೆದ್ದ ಇಂಗ್ಲೆಂಡ್ ತಂಡ ಅಂತರವನ್ನು 2-1 ಕ್ಕೆ ಇಳಿಸಿದ್ದರು. ಆದರೆ 4ನೇ ಟೆಸ್ಟ್ ಪಂದ್ಯವು ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಇಂಗ್ಲೆಂಡ್ ತಂಡದ ಸರಣಿ ಗೆಲ್ಲುವ ಕನಸು ಅಂತ್ಯವಾಗಿದೆ.
ಇನ್ನೇನಿದ್ದರೂ ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕು. ಅಂದರೆ ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 2-2 ಸಮಬಲದೊಂದಿಗೆ ಅಂತ್ಯಗೊಳಿಸಬಹುದು. ಆದರೆ ಅತ್ತ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೆ ಅಥವಾ ಗೆಲುವು ದಾಖಲಿಸಿದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಹೀಗಾಗಿಯೇ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಇಂಗ್ಲೆಂಡ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.
ಇದೀಗ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದ್ದು, ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದ ಪ್ಲೇಯಿಂಗ್ ಇವೆಲೆನ್ ಈ ಪಂದ್ಯದಲ್ಲೂ ಆಡಲಿದೆ. ಅದರಂತೆ ಇಂಗ್ಲೆಂಡ್ ತಂಡದ ಆಡುವ ಬಳಗ ಈ ಕೆಳಗಿನಂತಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11:
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಒಲ್ಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ಇದನ್ನೂ ಓದಿ: ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ್ದು ಯಾರು ಗೊತ್ತಾ?
ಆಸ್ಟ್ರೇಲಿಯಾ ಟೆಸ್ಟ್ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಝಲ್‌ವುಡ್, ಮಾರ್ಕಸ್ ಹ್ಯಾರಿಸ್, ಮೈಕೆಲ್ ನೆಸರ್ , ಜೋಶ್ ಇಂಗ್ಲಿಸ್, ಕ್ಯಾಮರೋನ್ ಗ್ರೀನ್.