Ashes 2023: ರೋಚಕಘಟ್ಟದತ್ತ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯ

England vs Australia, 3rd Test: ಭೋಜನಾ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡವು 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಬೆನ್ ಸ್ಟೋಕ್ಸ್ (7) ಹಾಗೂ ಹ್ಯಾರಿ ಬ್ರೂಕ್ (40) ಬ್ಯಾಟ್ ಮಾಡುತ್ತಿದ್ದಾರೆ.

Ashes 2023: ರೋಚಕಘಟ್ಟದತ್ತ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯ
Ashes 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 09, 2023 | 6:21 PM

Ashes 2023: ಲೀಡ್ಸ್​ನ ಹೆಡಿಂಗ್ಲಿ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆನ್ ಸ್ಟೋಕ್ಸ್ (Ben Stokes) ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ (118) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಇತ್ತ ಮಾರ್ಕ್​ ವುಡ್​ ಅವರ ಕರಾರುವಾಕ್ ದಾಳಿ ಮುಂದೆ ಆಸ್ಟ್ರೇಲಿಯಾದ ಇತರೆ ಬ್ಯಾಟರ್​ಗಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಿರಲಿಲ್ಲ. ಪರಿಣಾಮ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 263 ರನ್​ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಮಾರ್ಕ್ ವುಡ್ 5 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡುವಲ್ಲಿ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಯಶಸ್ವಿಯಾದರು. ಇದಾಗ್ಯೂ ಬೆನ್ ಸ್ಟೋಕ್ಸ್ 80 ರನ್ ಬಾರಿಸಿ ಆಂಗ್ಲ ಪಡೆಗೆ ಆಸರೆಯಾಗಿದ್ದರು. ಆದರೆ 6 ವಿಕೆಟ್​ ಕಬಳಿಸಿ ಮಿಂಚಿದ ಪ್ಯಾಟ್ ಕಮಿನ್ಸ್ ಇಂಗ್ಲೆಂಡ್ ತಂಡವನ್ನು 237 ರನ್​ಗಳಿಗೆ ಆಲೌಟ್ ಮಾಡಿದರು.

26 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 77 ರನ್​ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 224 ರನ್​ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್​ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು 251 ರನ್​ಗಳ ಟಾರ್ಗೆಟ್ ಪಡೆಯಿತು. ಈ ಸುಲಭ ಗುರಿಯನ್ನು ಬೆನ್ನತ್ತುವ ವಿಶ್ವಾಸದಲ್ಲಿ ಇನಿಂಗ್ಸ್ ಆರಂಭಿಸಿದ್ದ ಆಂಗ್ಲರಿಗೆ ಮಿಚೆಲ್ ಸ್ಟಾರ್ಕ್​ ಶಾಕ್ ನೀಡಿದ್ದಾರೆ.

ಬೆನ್ ಡಕೆಟ್ (23) ಹಾಗೂ ಮೊಯೀನ್ ಅಲಿ (5) ವಿಕೆಟ್ ಕಬಳಿಸುವ ಮೂಲಕ ಸ್ಟಾರ್ಕ್​ ಬ್ಯಾಟ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟಿದ್ದಾರೆ. ಇನ್ನು ಜೋ ರೂಟ್​ (21) ಗೆ ಕಮಿನ್ಸ್ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಇದರ ಬೆನ್ನಲ್ಲೇ ಝಾಕ್ ಕ್ರಾಲಿ (44) ಮಿಚೆಲ್ ಮಾರ್ಷ್​ಗೆ ವಿಕೆಟ್ ಒಪ್ಪಿಸಿದ್ದಾರೆ.

ಇದೀಗ ಭೋಜನಾ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡವು 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಬೆನ್ ಸ್ಟೋಕ್ಸ್ (7) ಹಾಗೂ ಹ್ಯಾರಿ ಬ್ರೂಕ್ (40) ಬ್ಯಾಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Mark Wood: ಅತೀ ವೇಗದ ಬೌಲಿಂಗ್…ದಾಖಲೆ ಬರೆದ ಮಾರ್ಕ್​ ವುಡ್

ಇಂಗ್ಲೆಂಡ್​ಗೆ ಗೆಲ್ಲಲು ಇನ್ನೂ 98 ರನ್​ಗಳ ಅವಶ್ಯಕತೆಯಿದ್ದರೆ, ಆಸ್ಟ್ರೇಲಿಯಾಗೆ 6 ವಿಕೆಟ್​ಗಳ ಅಗತ್ಯತೆಯಿದೆ. ಹೀಗಾಗಿ ಭೋಜನ ವಿರಾಮದ ಬಳಿಕ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ