AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ನಾಳೆಯಿಂದ ಆ್ಯಶಸ್ ಟೆಸ್ಟ್ ಸರಣಿಯ 4ನೇ ಫೈಟ್ ಶುರು

England vs Australia, 4th Test: ಲೀಡ್ಸ್​ನ ಹೆಂಡಿಗ್ಲಿ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಕಂಬ್ಯಾಕ್ ಮಾಡಿತ್ತು. ಆಂಗ್ಲರ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಪಡೆಯು 3 ವಿಕೆಟ್​ಗಳಿಂದ ರೋಚಕ ಜಯ ಸಾಧಿಸಿತ್ತು.

Ashes 2023: ನಾಳೆಯಿಂದ ಆ್ಯಶಸ್ ಟೆಸ್ಟ್ ಸರಣಿಯ 4ನೇ ಫೈಟ್ ಶುರು
Ashes 2023
TV9 Web
| Edited By: |

Updated on:Jul 18, 2023 | 5:08 PM

Share

Ashes 2023: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯವು ನಾಳೆಯಿಂದ ಪ್ರಾರಂಭವಾಗಲಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫರ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಈ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯರನ್ನು 43 ರನ್​ಗಳಿಂದ ಬಗ್ಗು ಬಡಿದ ಆಸೀಸ್ ಪಡೆಯು ಗೆಲುವಿನ ಅಂತರವನ್ನು 2-0 ಕ್ಕೇರಿಸಿದ್ದರು.

ಆದರೆ ಲೀಡ್ಸ್​ನ ಹೆಂಡಿಗ್ಲಿ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಕಂಬ್ಯಾಕ್ ಮಾಡಿತ್ತು. ಆಂಗ್ಲರ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಪಡೆಯು 3 ವಿಕೆಟ್​ಗಳಿಂದ ರೋಚಕ ಜಯ ಸಾಧಿಸಿತ್ತು. ಈ ಮೂಲಕ ಸರಣಿ ಅಂತರವನ್ನು 2-1 ಕ್ಕಿಳಿಸಿದರು.

ಇದೀಗ ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಮೈದಾನವು 4ನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಸೋತರೆ ಸರಣಿ ಆಸ್ಟ್ರೇಲಿಯಾ ಪಾಲಾಗಲಿದೆ. ಹೀಗಾಗಿಯೇ ಇದು ಇಂಗ್ಲೆಂಡ್ ಪಾಲಿಗೆ ಸರಣಿ ನಿರ್ಣಾಯಕ ಪಂದ್ಯ.

ಒಂದು ವೇಳೆ ಈ ಪಂದ್ಯದಲ್ಲಿ ಇಂಗ್ಲೆಂಡ್ ಜಯಗಳಿಸಲು ಅಥವಾ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದರೆ, ಓವಲ್​ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಡಲಿದೆ. ಹೀಗಾಗಿ ಮ್ಯಾಚೆಂಸ್ಟರ್ ಮೈದಾನದಲ್ಲಿ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇಂಗ್ಲೆಂಡ್ ಪ್ಲೇಯಿಂಗ್ 11:

4ನೇ ಟೆಸ್ಟ್ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, 3ನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೇಗಿ ಒಲ್ಲಿ ರಾಬಿನ್ಸನ್ ಬದಲಿಗೆ ಜೇಮ್ಸ್ ಅ್ಯಂಡರ್ಸನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಹೆಡಿಂಗ್ಲಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಒಲ್ಲಿ ರಾಬಿನ್ಸನ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ 4ನೇ ಟೆಸ್ಟ್ ಪಂದ್ಯದಿಂದ ಅವರನ್ನು ಕೈ ಬಿಡಲಾಗಿದ್ದು, ಬದಲಾಗಿ 3ನೇ ಟೆಸ್ಟ್ ಪಂದ್ಯದ ವೇಳೆ ಹೊರಗುಳಿದಿದ್ದ ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್​ಗೆ ಸ್ಥಾನ ಕಲ್ಪಿಸಲಾಗಿದೆ.

  • 1. ಬೆನ್ ಡಕೆಟ್
  • 2. ಝಾಕ್ ಕ್ರಾಲಿ
  • 3. ಮೊಯೀನ್ ಅಲಿ
  • 4. ಜೋ ರೂಟ್
  • 5. ಹ್ಯಾರಿ ಬ್ರೂಕ್
  • 6. ಬೆನ್ ಸ್ಟೋಕ್ಸ್​ (ನಾಯಕ)
  • 7. ಜಾನಿ ಬೈರ್​ಸ್ಟೋವ್ (ವಿಕೆಟ್ ಕೀಪರ್)
  • 8. ಕ್ರಿಸ್ ವೋಕ್ಸ್
  • 9. ಮಾರ್ಕ್​ ವುಡ್
  • 10. ಸ್ಟುವರ್ಟ್ ಬ್ರಾಡ್
  • 11. ಜೇಮ್ಸ್ ಅ್ಯಂಡರ್ಸನ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ ಹೀಗಿದೆ: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮೈಕೆಲ್ ನೆಸರ್ , ಜೋಶ್ ಇಂಗ್ಲಿಸ್, ಕ್ಯಾಮರೋನ್ ಗ್ರೀನ್.

ಇದನ್ನೂ ಓದಿ: Team India: ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಫುಲ್ ಬ್ಯುಸಿ: ಇಲ್ಲಿದೆ ವೇಳಾಪಟ್ಟಿ

ಇಂಗ್ಲೆಂಡ್ ಟೆಸ್ಟ್​ ತಂಡ ಹೀಗಿದೆ: ಬೆನ್ ಸ್ಟೋಕ್ಸ್ (ನಾಯಕ), ಮೊಯೀನ್ ಅಲಿ, ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್‌ಸ್ಟೋ, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಒಲ್ಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

Published On - 5:04 pm, Tue, 18 July 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!