Ashes 2023: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯವು ನಾಳೆಯಿಂದ ಪ್ರಾರಂಭವಾಗಲಿದೆ. ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಈ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಲಾರ್ಡ್ಸ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯರನ್ನು 43 ರನ್ಗಳಿಂದ ಬಗ್ಗು ಬಡಿದ ಆಸೀಸ್ ಪಡೆಯು ಗೆಲುವಿನ ಅಂತರವನ್ನು 2-0 ಕ್ಕೇರಿಸಿದ್ದರು.
ಆದರೆ ಲೀಡ್ಸ್ನ ಹೆಂಡಿಗ್ಲಿ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಕಂಬ್ಯಾಕ್ ಮಾಡಿತ್ತು. ಆಂಗ್ಲರ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಪಡೆಯು 3 ವಿಕೆಟ್ಗಳಿಂದ ರೋಚಕ ಜಯ ಸಾಧಿಸಿತ್ತು. ಈ ಮೂಲಕ ಸರಣಿ ಅಂತರವನ್ನು 2-1 ಕ್ಕಿಳಿಸಿದರು.
ಇದೀಗ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನವು 4ನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಸೋತರೆ ಸರಣಿ ಆಸ್ಟ್ರೇಲಿಯಾ ಪಾಲಾಗಲಿದೆ. ಹೀಗಾಗಿಯೇ ಇದು ಇಂಗ್ಲೆಂಡ್ ಪಾಲಿಗೆ ಸರಣಿ ನಿರ್ಣಾಯಕ ಪಂದ್ಯ.
ಒಂದು ವೇಳೆ ಈ ಪಂದ್ಯದಲ್ಲಿ ಇಂಗ್ಲೆಂಡ್ ಜಯಗಳಿಸಲು ಅಥವಾ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದರೆ, ಓವಲ್ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಡಲಿದೆ. ಹೀಗಾಗಿ ಮ್ಯಾಚೆಂಸ್ಟರ್ ಮೈದಾನದಲ್ಲಿ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಇಂಗ್ಲೆಂಡ್ ಪ್ಲೇಯಿಂಗ್ 11:
4ನೇ ಟೆಸ್ಟ್ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, 3ನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೇಗಿ ಒಲ್ಲಿ ರಾಬಿನ್ಸನ್ ಬದಲಿಗೆ ಜೇಮ್ಸ್ ಅ್ಯಂಡರ್ಸನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಹೆಡಿಂಗ್ಲಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಒಲ್ಲಿ ರಾಬಿನ್ಸನ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ 4ನೇ ಟೆಸ್ಟ್ ಪಂದ್ಯದಿಂದ ಅವರನ್ನು ಕೈ ಬಿಡಲಾಗಿದ್ದು, ಬದಲಾಗಿ 3ನೇ ಟೆಸ್ಟ್ ಪಂದ್ಯದ ವೇಳೆ ಹೊರಗುಳಿದಿದ್ದ ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ಗೆ ಸ್ಥಾನ ಕಲ್ಪಿಸಲಾಗಿದೆ.
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮೈಕೆಲ್ ನೆಸರ್ , ಜೋಶ್ ಇಂಗ್ಲಿಸ್, ಕ್ಯಾಮರೋನ್ ಗ್ರೀನ್.
ಇದನ್ನೂ ಓದಿ: Team India: ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಫುಲ್ ಬ್ಯುಸಿ: ಇಲ್ಲಿದೆ ವೇಳಾಪಟ್ಟಿ
ಇಂಗ್ಲೆಂಡ್ ಟೆಸ್ಟ್ ತಂಡ ಹೀಗಿದೆ: ಬೆನ್ ಸ್ಟೋಕ್ಸ್ (ನಾಯಕ), ಮೊಯೀನ್ ಅಲಿ, ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್‌ಸ್ಟೋ, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಒಲ್ಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
Published On - 5:04 pm, Tue, 18 July 23