AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Steve Smith: ನೂರನೇ ಪಂದ್ಯದಲ್ಲಿ ದಾಖಲೆ ಬರೆದ ಸ್ಟೀವ್ ಸ್ಮಿತ್

Ashes 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದ್ದಾರೆ. ಪರಿಣಾಮ ಆಸ್ಟ್ರೇಲಿಯಾ ತಂಡವು ಭೋಜನಾ ವಿರಾಮಕ್ಕೂ ಮುನ್ನ ಡೇವಿಡ್ ವಾರ್ನರ್ (4), ಉಸ್ಮಾನ್ ಖ್ವಾಜಾ (13), ಮಾರ್ನಸ್ ಲಾಬುಶೇನ್ (21) ಹಾಗೂ ಸ್ಟೀವ್ ಸ್ಮಿತ್ (22) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Steve Smith: ನೂರನೇ ಪಂದ್ಯದಲ್ಲಿ ದಾಖಲೆ ಬರೆದ ಸ್ಟೀವ್ ಸ್ಮಿತ್
Steve Smith
TV9 Web
| Updated By: ಝಾಹಿರ್ ಯೂಸುಫ್|

Updated on: Jul 06, 2023 | 6:18 PM

Share

Ashes 2023: ಲೀಡ್ಸ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಟೆಸ್ಟ್​ ಸರಣಿಯ 3ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ (Steve Smith) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಆಸ್ಟ್ರೇಲಿಯನ್ ಲೆಜೆಂಡ್ ಅಲನ್ ಬಾರ್ಡರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 42 ರನ್​ಗಳಿಸುವಷ್ಟರಲ್ಲಿ ಡೇವಿಡ್ ವಾರ್ನರ್ (4) ಹಾಗೂ ಉಸ್ಮಾನ್ ಖ್ವಾಜಾ (13) ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ ರಕ್ಷಣಾತ್ಮಕ ಆಟದ ಮೂಲಕ ಗಮನ ಸೆಳೆದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮಿತ್ ನಿಧಾನಗತಿಯಲ್ಲಿ ರನ್​ಗಳಿಸುತ್ತಾ ಸಾಗಿದರು. ಆದರೆ 22 ರನ್​ಗಳಿಸಿದ್ದ ವೇಳೆ ಬ್ರಾಡ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸ್ಟೀವ್ ಸ್ಮಿತ್ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ಹೊರನಡೆದರು.

ವಿಶೇಷ ಎಂದರೆ ಈ 22 ರನ್​ಗಳೊಂದಿಗೆ ಆ್ಯಶಸ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಮಿತ್ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಡಾನ್​ ಬ್ರಾಡ್​ಮ್ಯಾನ್ ಅಗ್ರಸ್ಥಾನದಲ್ಲಿದ್ದಾರೆ.

ಆ್ಯಶಸ್ ಸರಣಿಯಲ್ಲಿ 63 ಇನಿಂಗ್ಸ್ ಆಡಿರುವ ಡಾನ್ ಬ್ರಾಡ್​ಮ್ಯಾನ್ ಒಟ್ಟು​ 5028 ರನ್ ಕಲೆಹಾಕಿದ್ದಾರೆ. ಹಾಗೆಯೇ ದ್ವಿತೀಯ ಸ್ಥಾನದಲ್ಲಿ ಇಂಗ್ಲೆಂಡ್​ನ ಜಾನ್ ಹಾಬ್ಸ್ ಇದ್ದು, 71 ಇನಿಂಗ್ಸ್​ಗಳಿಂದ ಹಾಬ್ಸ್​ 3636 ರನ್​ಗಳಿಸಿದ್ದಾರೆ.

ಇದೀಗ 73 ಇನಿಂಗ್ಸ್​ಗಳ ಮೂಲಕ 3222 ರನ್​ ಕಲೆಹಾಕಿದ್ದ ಆಸ್ಟ್ರೇಲಿಯಾದ ಅಲನ್ ಬಾರ್ಡರ್ ಅವರನ್ನು ಹಿಂದಿಕ್ಕಿ ಸ್ಟೀವ್ ಸ್ಮಿತ್ ಮೂರನೇ ಸ್ಥಾನಕ್ಕೇರಿದ್ದಾರೆ. ಆ್ಯಶಸ್ ಸರಣಿಯಲ್ಲಿ 61 ಇನಿಂಗ್ಸ್ ಆಡಿರುವ ಸ್ಮಿತ್ ಒಟ್ಟು 3232 ರನ್​ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

100ನೇ ಪಂದ್ಯದ ಸಾಧನೆ:

ಸ್ಟೀವ್ ಸ್ಮಿತ್​ಗೆ ಇದು 100ನೇ ಟೆಸ್ಟ್ ಪಂದ್ಯ. 2010 ರಲ್ಲಿ ಟೆಸ್ಟ್ ಕೆರಿಯರ್ ಆರಂಭಿಸಿದ್ದ ಇದೀಗ ನೂರು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 15ನೇ ಆಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Ashes 2023: ಡೇವಿಡ್ ವಾರ್ನರ್ ವಿಕೆಟ್ ಕಬಳಿಸಿ ದಾಖಲೆ ಬರೆದ ಸ್ಟುವರ್ಟ್ ಬ್ರಾಡ್

ಇಂಗ್ಲೆಂಡ್ ಉತ್ತಮ ಆರಂಭ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದ್ದಾರೆ. ಪರಿಣಾಮ ಆಸ್ಟ್ರೇಲಿಯಾ ತಂಡವು ಭೋಜನಾ ವಿರಾಮಕ್ಕೂ ಮುನ್ನ ಡೇವಿಡ್ ವಾರ್ನರ್ (4), ಉಸ್ಮಾನ್ ಖ್ವಾಜಾ (13), ಮಾರ್ನಸ್ ಲಾಬುಶೇನ್ (21) ಹಾಗೂ ಸ್ಟೀವ್ ಸ್ಮಿತ್ (22) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭೋಜನಾ ವಿರಾಮದ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ ತಂಡವು 4 ವಿಕೆಟ್ ಕಳೆದುಕೊಂಡು 91 ರನ್​ಗಳಿಸಿದ್ದು, ಕ್ರೀಸ್​ನಲ್ಲಿ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.