Steve Smith: ಮೂರನೇ ಟೆಸ್ಟ್​ ಮೂಲಕ ನೂರರ ಸಾಧನೆ ಮಾಡಿದ ಸ್ಟೀವ್ ಸ್ಮಿತ್

Ashes 2023: ಮೂರನೇ ಟೆಸ್ಟ್ ಪಂದ್ಯವು ಇಂಗ್ಲೆಂಡ್ ತಂಡದ ಪಾಲಿಗೆ ನಿರ್ಣಾಯಕ ಪಂದ್ಯ. ಏಕೆಂದರೆ 5 ಟೆಸ್ಟ್ ಪಂದ್ಯಗಳ ಆ್ಯಶಸ್ ಸರಣಿ ಮೊದಲೆರಡು ಟೆಸ್ಟ್​ಗಳಲ್ಲಿ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ.

Steve Smith: ಮೂರನೇ ಟೆಸ್ಟ್​ ಮೂಲಕ ನೂರರ ಸಾಧನೆ ಮಾಡಿದ ಸ್ಟೀವ್ ಸ್ಮಿತ್
Steve Smith
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 06, 2023 | 5:20 PM

Ashes 2023: ಲೀಡ್ಸ್​ನ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ಹಾಗೂ ಆಸ್ಟ್ರೇಲಿಯಾ (Australia) ನಡುವಣ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬೆನ್ ಸ್ಟೋಕ್ಸ್​ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡಲಿರುವ ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ (Steve Smith) ಪಾಲಿಗೆ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಈ ಪಂದ್ಯದ ಮೂಲಕ ಆಸೀಸ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ಸ್ಮಿತ್ ನಿರ್ಮಿಸಿದ್ದಾರೆ.

ಹಾಗೆಯೇ ಆಸ್ಟ್ರೇಲಿಯಾ ಪರ ಈ ಸಾಧನೆ ಮಾಡಿದ 15ನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಿಕಿ ಪಾಂಟಿಂಗ್ (168 ಪಂದ್ಯಗಳು), ಸ್ಟೀವ್ ವಾ (168 ಪಂದ್ಯಗಳು), ಅಲನ್ ಬಾರ್ಡರ್ (156 ಪಂದ್ಯಗಳು), ಶೇನ್ ವಾರ್ನ್ (145 ಪಂದ್ಯಗಳು), ಮಾರ್ಕ್ ವಾ (128 ಪಂದ್ಯಗಳು), ಗ್ಲೆನ್ ಮೆಕ್​ಗ್ರಾಥ್ (124 ಪಂದ್ಯಗಳು) ನಾಥನ್ ಲಿಯಾನ್ (122 ಪಂದ್ಯಗಳು), ಇಯಾನ್ ಹೀಲಿ (119 ಪಂದ್ಯಗಳು), ಮೈಕಲ್ ಕ್ಲಾರ್ಕ್​ (115 ಪಂದ್ಯಗಳು), ಡೇವಿಡ್ ಬೂನ್ (107 ಪಂದ್ಯಗಳು), ಡೇವಿಡ್ ವಾರ್ನರ್ (106 ಪಂದ್ಯಗಳು), ಜಸ್ಟಿನ್ ಲ್ಯಾಂಗರ್ (105 ಪಂದ್ಯಗಳು), ಮಾರ್ಕ್ ಟೇಲರ್ (104 ಪಂದ್ಯಗಳು), ಮ್ಯಾಥ್ಯೂ ಹೇಡನ್ (103 ಪಂದ್ಯಗಳು) ಆಸೀಸ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ್ದರು.

ಇದೀಗ ಪ್ರತಿಷ್ಠಿತ ಆ್ಯಶಸ್ ಸರಣಿಯ ಪಂದ್ಯದ ಮೂಲಕ ಸ್ಟೀವ್ ಸ್ಮಿತ್ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇನ್ನು 99 ಟೆಸ್ಟ್ ಪಂದ್ಯಗಳಲ್ಲಿ 175 ಬಾರಿ ಬ್ಯಾಟ್ ಬೀಸಿರುವ ಸ್ಮಿತ್ ಒಟ್ಟು 9113 ರನ್ ಕಲೆಹಾಕಿದ್ದಾರೆ. ಈ ವೇಳೆ 4 ದ್ವಿಶತಕ, 37 ಅರ್ಧಶತಕ ಹಾಗೂ 32 ಶತಕಗಳನ್ನು ಕೂಡ ಸಿಡಿಸಿದ್ದಾರೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ 99 ಟೆಸ್ಟ್ ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ಬರೋಬ್ಬರಿ 1004 ಫೋರ್​ಗಳನ್ನು ಬಾರಿಸಿರುವುದು. ಇದು ಕೂಡ ಒಂದು ದಾಖಲೆ. ಇದೀಗ ಮೂರನೇ ಟೆಸ್ಟ್​ ಮೂಲಕ ನೂರರ ಸಾಧನೆ ಮಾಡಿರುವ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡಕ್ಕೆ ಈ ಬಾರಿ ಆ್ಯಶಸ್ ಸರಣಿ ಗೆದ್ದುಕೊಡಲಿದ್ದಾರಾ ಕಾದು ನೋಡಬೇಕಿದೆ.

ನಿರ್ಣಾಯಕ ಪಂದ್ಯ:

ಮೂರನೇ ಟೆಸ್ಟ್ ಪಂದ್ಯವು ಇಂಗ್ಲೆಂಡ್ ತಂಡದ ಪಾಲಿಗೆ ನಿರ್ಣಾಯಕ ಪಂದ್ಯ. ಏಕೆಂದರೆ 5 ಟೆಸ್ಟ್ ಪಂದ್ಯಗಳ ಆ್ಯಶಸ್ ಸರಣಿ ಮೊದಲೆರಡು ಟೆಸ್ಟ್​ಗಳಲ್ಲಿ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಇದೀಗ 3ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು.

ಇತ್ತ ಇಂಗ್ಲೆಂಡ್ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಅಥವಾ ಡ್ರಾ ಮಾಡಿಕೊಂಡಿದ್ದರೆ ಮಾತ್ರ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹೀಗಾಗಿ ಹೆಡಿಂಗ್ಲಿ ಟೆಸ್ಟ್ ಪಂದ್ಯವು ಇಂಗ್ಲೆಂಡ್ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ:

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: Steve Smith: ಭರ್ಜರಿ ಸೆಂಚುರಿಯೊಂದಿಗೆ 7 ದಾಖಲೆ ಬರೆದ ಸ್ಟೀವ್ ಸ್ಮಿತ್

ಇಂಗ್ಲೆಂಡ್ (ಪ್ಲೇಯಿಂಗ್ XI): ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್.

Published On - 3:37 pm, Thu, 6 July 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್