Ashes 2025: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ
Australia vs England: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ ಮೊದಲೆರಡು ಮ್ಯಾಚ್ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 17 ರಿಂದ ಶುರುವಾಗಲಿದ್ದು, ಈ ಮ್ಯಾಚ್ ಮೂಲಕ ಪ್ಯಾಟ್ ಕಮಿನ್ಸ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.

Australia
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಬುಧವಾರದಿಂದ ಅಡಿಲೇಡ್ನಲ್ಲಿ ಶುರುವಾಗಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಪ್ಯಾಟ್ ಕಮಿನ್ಸ್ ತಂಡಕ್ಕೆ ಮರಳಿದ್ದು, ಆರಂಭಿಕ ದಾಂಡಿಗ ಉಸ್ಮಾನ್ ಖ್ವಾಜಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಸಹ ಪ್ಲೇಯಿಂಗ್ ಇಲೆವೆನ್ನಲ್ಲಿ ಸೇರ್ಪಡೆಗೊಳಿಸಲಾಗಿದೆ.
ಕಮಿನ್ಸ್ ಕಪ್ತಾನ:
ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ನಾಯಕನಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಮಿನ್ಸ್ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.
Follow Us
