ಬಾಕ್ಸಿಂಗ್ ಡೇ ಟೆಸ್ಟ್ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ
Australia vs England: ಟೆಸ್ಟ್ ಕ್ರಿಕೆಟ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಯನ್ನು ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಈ ಸರಣಿಯ ಮೊದಲ ಮೂರು ಮ್ಯಾಚ್ಗಳನ್ನು ಆಸೀಸ್ ಪಡೆ ಗೆದ್ದುಕೊಂಡಿದ್ದು, ಇದೀಗ ಡಿಸೆಂಬರ್ 26 ರಿಂದ ಶುರುವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗುತ್ತಿದೆ.

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್ ವೆದರಾಲ್ಡ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ.
ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಆರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಹಾಗೆಯೇ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
ವೇಗಿಗಳಾಗಿ ಮಿಚೆಲ್ ಸ್ಟಾರ್ಕ್ ಹಾಗೂ ಸ್ಕಾಟ್ ಬೋಲ್ಯಾಂಡ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನು ಮತ್ತೋರ್ವ ವೇಗಿಯಾಗಿ ಬ್ರೆಂಡನ್ ಡಾಗೆಟ್ಗೆ ಸ್ಥಾನ ಸಿಗುವ ನಿರೀಕ್ಷೆಯಿದೆ. ಆದರೆ ಹನ್ನೊಂದನೇ ಆಟಗಾರನ ಸ್ಥಾನಕ್ಕೆ ಮೈಕೆಲ್ ನೇಸರ್ ಹಾಗೂ ಜ್ಯೆ ರಿಚರ್ಡ್ಸನ್ ನಡುವೆ ನೇರ ಪೈಪೋಟಿ ಇದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಪ್ಲೇಯಿಂಗ್ ಇಲೆವೆನ್ನ ಭಾಗವಾಗಲಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್ಗೆ ಆಸ್ಟ್ರೇಲಿಯಾದ 12 ಆಟಗಾರರು: ಟ್ರಾವಿಸ್ ಹೆಡ್, ಜೇಕ್ ವೆದರಾಲ್ಡ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಉಸ್ಮಾನ್ ಖ್ವಾಜಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ಬ್ರೆಂಡನ್ ಡಾಗೆಟ್, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸ್, ಜೋಶ್ ಟಂಗ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್, ಟಾಡ್ ಮರ್ಫಿ, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.
ಇದನ್ನೂ ಓದಿ: ಒಂದೇ ಒಂದು ರನ್ನೊಂದಿಗೆ ವರ್ಲ್ಡ್ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್.
