AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2025: ಮೊದಲ ಟೆಸ್ಟ್​ಗೆ ಆಸ್ಟ್ರೇಲಿಯಾದ ಮೂವರು ಅಲಭ್ಯ

Australia vs England: ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಪರ್ತ್​ನ ಆಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿ

Ashes 2025: ಮೊದಲ ಟೆಸ್ಟ್​ಗೆ ಆಸ್ಟ್ರೇಲಿಯಾದ ಮೂವರು ಅಲಭ್ಯ
Australia
ಝಾಹಿರ್ ಯೂಸುಫ್
|

Updated on: Nov 18, 2025 | 10:53 AM

Share

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಗೆ ದಿನಗಣನೆ ಶುರುವಾಗಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಮೂವರು ಹೊರಬಿದ್ದಿದ್ದಾರೆ. ಅಂದರೆ ನವೆಂಬರ್ 21 ರಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಪ್ಯಾಟ್ ಕಮಿನ್ಸ್, ಜೋಶ್ ಹೇಝಲ್​ವುಡ್ ಹಾಗೂ ಶಾನ್ ಅಬಾಟ್ ಅಲಭ್ಯರಾಗಿದ್ದಾರೆ.

ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಪರ್ತ್​ ಟೆಸ್ಟ್​ನಲ್ಲಿ ಸ್ಟೀವ್ ಸ್ಮಿತ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹೇಝಲ್​ವುಡ್ ಕೂಡ ಪರ್ತ್​ಗೆ ಟೆಸ್ಟ್​ನಿಂದ ಹಿಂದೆ ಸರಿದಿದ್ದಾರೆ. ಇದಾಗ್ಯೂ ಡಿಸೆಂಬರ್ 4 ರಿಂದ ಶುರುವಾಗಲಿರುವ 2ನೇ ಪಂದ್ಯದ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಹಾಗೆಯೇ ಮತ್ತೋರ್ವ ವೇಗಿ ಶಾನ್ ಅಬಾಟ್ ಕೂಡ ಮಂಡಿರಜ್ಜು ನೋವಿನ ಸಮಸ್ಯೆಗೀಡಾಗಿದ್ದು, ಅವರು ಸಹ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.  ಮೈಕೆಲ್ ನೇಸರ್ ಅವರನ್ನು ಹೆಚ್ಚುವರಿ ವೇಗಿಯಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇತ್ತ ಮೂವರು ಆಟಗಾರರ ಅಲಭ್ಯತೆಯ ನಡುವೆಯೂ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅವರೆ ಆಸ್ಟ್ರೇಲಿಯಾ ತಂಡದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಆಗಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಕಾಣಿಸಿಕೊಂಡರೆ, ಇಂಗ್ಲೆಂಡ್ ತಂಡದಲ್ಲಿ ಟೆಸ್ಟ್ ಪರಿಣಿತನಾಗಿ ಜೋ ರೂಟ್ ಹಾಗೂ ಒಲೀ ಪೋಪ್ ಇದ್ದಾರೆ.

ಇನ್ನು ಸ್ಫೋಟಕ ಆಟಕ್ಕೆ ಆಸೀಸ್ ಪಡೆಯಲ್ಲಿ ಟ್ರಾವಿಸ್ ಹೆಡ್ ಇದ್ದರೆ, ಇಂಗ್ಲೆಂಡ್ ತಂಡಕ್ಕೆ ಬಾಝ್ ಬಾಲ್ ಝಲಕ್ ತೋರಿಸಲು ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ ಹಾಗು ಬೆನ್ ಡಕೆಟ್ ಇದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಆಲ್​ರೌಂಡರ್​ಗಳಾಗಿ ಬೆನ್ ಸ್ಟೋಕ್ಸ್ ಹಾಗೂ ಜೇಕಬ್ ಬೆಥೆಲ್ ಇದ್ದರೆ, ಅತ್ತ ಆಸ್ಟ್ರೇಲಿಯಾದಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಬ್ಯೂ ವೆಬ್​ಸ್ಟರ್ ಇದ್ದಾರೆ. ಹಾಗೆಯೇ ವೇಗಿಗಳಾಗಿ ಆಸೀಸ್ ಪಡೆಯಲ್ಲಿ ಮಿಚೆಲ್ ಸ್ಟಾರ್ಕ್ ಹಾಗೂ ಸ್ಕಾಟ್ ಬೋಲ್ಯಾಂಡ್ ಕಾಣಿಸಿಕೊಂಡರೆ, ಇಂಗ್ಲೆಂಡ್ ತಂಡದ ವೇಗಾಸ್ತ್ರವಾಗಿ ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್ ಹಾಗೂ ಮಾರ್ಕ್ ವುಡ್​ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಯಾರು ಗೆದ್ದು ಬೀಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಆಸ್ಟ್ರೇಲಿಯಾ ಟೆಸ್ಟ್ ತಂಡ (ಮೊದಲ ಪಂದ್ಯಕ್ಕೆ): ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್, ಮೈಕೆಲ್ ನೇಸರ್, ಜೋಶ್ ಹೇಝಲ್​ವುಡ್ (ಅಲಭ್ಯ), ಶಾನ್ ಅಬಾಟ್ (ಅಲಭ್ಯ).

ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಝಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.

ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

ಆ್ಯಶಸ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಶುಕ್ರವಾರ ನವೆಂಬರ್ 21 – ನವೆಂಬರ್ 25 (ಬೆಳಿಗ್ಗೆ 2.30) – ಆಪ್ಟಸ್ ಕ್ರೀಡಾಂಗಣ, ಪರ್ತ್
  • ಎರಡನೇ ಟೆಸ್ಟ್: ಗುರುವಾರ ಡಿಸೆಂಬರ್ 4 – ಡಿಸೆಂಬರ್ 8 (ಬೆಳಿಗ್ಗೆ 4.30) – ದಿ ಗಬ್ಬಾ, ಬ್ರಿಸ್ಬೇನ್
  • ಮೂರನೇ ಟೆಸ್ಟ್: ಬುಧವಾರ ಡಿಸೆಂಬರ್ 17 – ಡಿಸೆಂಬರ್ 21 (ಬೆಳಿಗ್ಗೆ 12) – ಅಡಿಲೇಡ್ ಓವಲ್
  • ನಾಲ್ಕನೇ ಟೆಸ್ಟ್: ಗುರುವಾರ ಡಿಸೆಂಬರ್ 25 – ಡಿಸೆಂಬರ್ 29 (ರಾತ್ರಿ 11.30) – ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ಐದನೇ ಟೆಸ್ಟ್: ಜನವರಿ 3 ಭಾನುವಾರ – ಜನವರಿ 7  (ರಾತ್ರಿ 11.30) – ಸಿಡ್ನಿ ಕ್ರಿಕೆಟ್ ಮೈದಾನ.
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!