AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs ENG: ಏನಿದು ಪಿಂಕ್ ಟೆಸ್ಟ್​?

Ashes 2026, Australia vs England: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಇನ್ನು ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ.

AUS vs ENG: ಏನಿದು ಪಿಂಕ್ ಟೆಸ್ಟ್​?
Australia
ಝಾಹಿರ್ ಯೂಸುಫ್
|

Updated on: Jan 03, 2026 | 9:09 AM

Share

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಣ 5ನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಸಜ್ಜಾಗಿದೆ. ಈ ಪಂದ್ಯವನ್ನು ಪಿಂಕ್ ಟೆಸ್ಟ್ (Pink Test) ಎಂದು ಕರೆಯಲಾಗುತ್ತದೆ. ಆದರೆ ಇದು ಪಿಂಕ್ ಬಾಲ್ ಟೆಸ್ಟ್ ಅಲ್ಲ. ಬದಲಿಗೆ ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಪಿಂಕ್ ಕ್ಯಾಪ್ ಧರಿಸಿ ಕಣಕ್ಕಿಳಿಯಲಿದ್ದಾರೆ.

ಏನಿದು ಪಿಂಕ್ ಟೆಸ್ಟ್?

ಪ್ರತಿ ವರ್ಷ ಸಿಡ್ನಿಯಲ್ಲಿ ಆಡಲಾಗುವ ಮೊದಲ ಟೆಸ್ಟ್ ಅನ್ನು ಪಿಂಕ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಈ ಪಂದ್ಯದಲ್ಲಿ ಆಟಗಾರರು ಪಿಂಕ್ ಕ್ಯಾಪ್ ಧರಿಸುವುದು. ಇದರ ಉದ್ದೇಶ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದಾಗಿದೆ.

ಇಂತಹದೊಂದು ಅಭಿಯಾನಕ್ಕೆ ನಾಂದಿಯಾಡಿದ್ದು ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಗ್ಲೆನ್ ಮೆಕ್​ಗ್ರಾಥ್ ಎಂಬುದು ವಿಶೇಷ. ಮೆಕ್​ಗ್ರಾಥ್ ಅವರ ಪತ್ನಿ ಜೇನ್ ಮೆಕ್‌ಗ್ರಾತ್ ಅವರು ಸ್ತನ ಕ್ಯಾನ್ಸರ್​ನಿಂದ ಮೃತಪಟ್ಟಿದ್ದರು. ಆ ಬಳಿಕ ಮೆಕ್‌ಗ್ರಾತ್ ಫೌಂಡೇಶನ್ ಸ್ಥಾಪಿಸಿದ ಗ್ಲೆನ್ ಮೆಕ್​ಗ್ರಾಥ್ ಸ್ತನ ಕ್ಯಾನ್ಸರ್ ಜಾಗೃತಿ ಹಾಗೂ ಈ ಕ್ಯಾನ್ಸರ್‌ನಿಂದ ಬಳಲುತ್ತಿರುವವರ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದೆ.

ಈ ಅಭಿಯಾನಕ್ಕೆ ಸಿಡ್ನಿ ಕ್ರಿಕೆಟ್ ಕೂಡ ಸಾಥ್ ನೀಡಿದ್ದು, ಈ ಮೂಲಕ ಪ್ರತಿ ವರ್ಷ ಪಿಂಕ್ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿದೆ. ಈ ಮೂಲಕ ಸ್ಟೇಡಿಯಂನ ಗ್ಯಾಲರಿಗಳನ್ನು ಪಿಂಕ್ ಬಣ್ಣಗಳಿಂದ ಅಲಂಕೃತಗೊಳಿಸಲಾಗುತ್ತದೆ. ಹಾಗೆಯೇ ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನದಂದು ಲೇಡೀಸ್ ಸ್ಟ್ಯಾಂಡ್ ಅನ್ನು ತಾತ್ಕಾಲಿಕವಾಗಿ ಜೇನ್ ಮೆಕ್‌ಗ್ರಾತ್ ಸ್ಟ್ಯಾಂಡ್ ಎಂದು ಮರುನಾಮಕರಣ ಮಾಡಲಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಆಟಗಾರರು ಧರಿಸಿದ ಪಿಂಕ್ ಕ್ಯಾಪ್​ ಅನ್ನು ಕೂಡ ಹರಾಜಾಗಿಡಲಾಗುತ್ತದೆ. ಇದರಿಂದ ಬಂದ ಹಣವನ್ನು ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಬಳಸಲಾಗುತ್ತದೆ.

ಸರಣಿ ಗೆದ್ದಿರುವ ಆಸ್ಟ್ರೇಲಿಯಾ:

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಆ್ಯಶಸ್ ಸರಣಿಯಲ್ಲಿ ಇನ್ನು ಉಳಿದಿರುವುದು ಒಂದು ಟೆಸ್ಟ್ ಮಾತ್ರ. ನಾಳೆಯಿಂದ (ಜ.4) ಶುರುವಾಗಲಿರುವ ಈ ಸರಣಿಯಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ತನ್ನ ಸೋಲಿನ ಅಂತರವನ್ನು ಕುಗ್ಗಿಸುವ ಇರಾದೆಯಲ್ಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಹೊಸ ವರ್ಷದಲ್ಲಿ ಶುಭಾರಂಭ ಮಾಡುವ ಯೋಜನೆಯೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್, ಟಾಡ್ ಮರ್ಫಿ, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸ್​, ಝಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.