AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes: 103 ಬಾರಿ ನಾಟೌಟ್: ವಿಶ್ವ ದಾಖಲೆ ಬರೆದ ಇಂಗ್ಲೆಂಡ್ ವೇಗಿ

18 ಎಸೆತಗಳನ್ನು ರಕ್ಷಣಾತ್ಮಕವಾಗಿ ಆಡಿದ ಸ್ಟುವರ್ಟ್ ಬ್ರಾಡ್-ಜೇಮ್ಸ್ ಅಂಡರ್ಸನ್ ಪಂದ್ಯವನ್ನು ಡ್ರಾ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕೊನೆಯ 6 ಎಸೆತಗಳನ್ನು ಎದುರಿಸಿದ್ದು ಜೇಮ್ಸ್ ಅಂಡರ್ಸನ್ ಎಂಬುದು ವಿಶೇಷ.

Ashes: 103 ಬಾರಿ ನಾಟೌಟ್: ವಿಶ್ವ ದಾಖಲೆ ಬರೆದ ಇಂಗ್ಲೆಂಡ್ ವೇಗಿ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: Jan 10, 2022 | 7:17 PM

Share

ಆಸ್ಟ್ರೇಲಿಯಾ-ಇಂಗ್ಲೆಂಡ್ (Australia vs England) ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಸರಣಿಯ 5 ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳು ಮುಗಿದಿವೆ. ಈ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಆಸ್ಟ್ರೇಲಿಯಾ ತಂಡವು ಸರಣಿ ವಶಪಡಿಸಿಕೊಂಡಿದೆ. ಇದಾಗ್ಯೂ ಇಂಗ್ಲೆಂಡ್ ತಂಡವು 4ನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ವೈಟ್ ವಾಶ್ ತಪ್ಪಿಸಿಕೊಂಡಿದೆ. ಅದಕ್ಕಿಂತಲೂ ಹೆಚ್ಚಾಗಿ ಗೆಲುವಿನ ಸಮೀಪಕ್ಕೆ ತಲುಪಿದ್ದ ಆಸ್ಟ್ರೇಲಿಯಾದ ಜಯವನ್ನು ಇಂಗ್ಲೆಂಡ್ ಕಸಿದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ ಎನ್ನುವುದು ಉತ್ತಮ. ಏಕೆಂದರೆ ನಾಲ್ಕನೇ ಟೆಸ್ಟ್ ಪಂದ್ಯದ 5ನೇ ದಿನದಾಟದ ಅಂತಿಮ 3 ಓವರ್​ಗಳ ವೇಳೆ ಆಸ್ಟ್ರೇಲಿಯಾಗೆ ಗೆಲ್ಲಲು ಕೇವಲ 1 ವಿಕೆಟ್ ಅವಶ್ಯಕತೆಯಿತ್ತು. ಅದಾಗಲೇ 9 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಅಂಡರ್ಸನ್ ಕ್ರೀಸ್​ನಲ್ಲಿದ್ದರು.

18 ಎಸೆತಗಳನ್ನು ರಕ್ಷಣಾತ್ಮಕವಾಗಿ ಆಡಿದ ಸ್ಟುವರ್ಟ್ ಬ್ರಾಡ್-ಜೇಮ್ಸ್ ಅಂಡರ್ಸನ್ ಪಂದ್ಯವನ್ನು ಡ್ರಾ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕೊನೆಯ 6 ಎಸೆತಗಳನ್ನು ಎದುರಿಸಿದ್ದು ಜೇಮ್ಸ್ ಅಂಡರ್ಸನ್ ಎಂಬುದು ವಿಶೇಷ. ರೋಚಕ ಕ್ಷಣಗಳಿಗೆ ಸಾಕ್ಷಿಯಾಗಿದ್ದ ಈ ಆರು ಎಸೆತಗಳನ್ನು ರಕ್ಷಣಾತ್ಮಕವಾಗಿ ಆಡಿದ ಅಂಡರ್ಸನ್ ಆಸ್ಟ್ರೇಲಿಯಾ ಗೆಲುವನ್ನು ಕಸಿದುಕೊಂಡಿದ್ದರು. ಹೀಗೆ 6 ಎಸೆತಗಳನ್ನು ಎದುರಿಸಿ ಶೂನ್ಯದೊಂದಿಗೆ ಅಜೇಯರಾಗಿ ಅಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ಹೊಂದಿದ್ದಾರೆ.

ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ನಾಟೌಟ್ ಆದ ಆಟಗಾರ ಎಂಬ ದಾಖಲೆ ಜೇಮ್ಸ್ ಅಂಡರ್ಸನ್ ಹೆಸರಿನಲ್ಲಿದೆ. ಅಂಡರ್ಸನ್ ಇದುವರೆಗೆ 103 ಬಾರಿ ನಾಟೌಟ್ ಆಗಿ ಉಳಿದಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಷ್ಟೊಂದು ಬಾರಿ ಅಜೇಯರಾಗಿ ಉಳಿದ ಮತ್ತೊಬ್ಬ ಆಟಗಾರನಿಲ್ಲ ಎಂಬುದು ವಿಶೇಷ. ಅಂದರೆ ನಾಟೌಟ್ ಮೂಲಕ ಶತಕ ಪೂರೈಸಿರುವುದು ಅಂಡರ್ಸನ್ ಮಾತ್ರ.

ಇನ್ನು ವೆಸ್ಟ್ ಇಂಡೀಸ್​ನ ಕಾರ್ಟ್ನಿ ವಾಲ್ಷ್ 61 ಬಾರಿ ನಾಟೌಟ್ ಆಗುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 56 ಬಾರಿ ನಾಟೌಟ್ ಆಗಿರುವ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿ ನಾಟೌಟ್ ಆಗಿರುವ ದಾಖಲೆ ಇಶಾಂತ್ ಶರ್ಮಾ ಹೆಸರಿನಲ್ಲಿದೆ. ಇಶಾಂತ್ ಶರ್ಮಾ 47 ಬಾರಿ ಅಜೇಯರಾಗಿ ಉಳಿದಿದ್ದರು.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Ashes: James Anderson remains unbeaten for 103rd time in Tests)

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?