Ashes 2021: ಟೆಸ್ಟ್ ಕ್ರಿಕೆಟ್‌ನಲ್ಲಿ ತೆಂಡೂಲ್ಕರ್, ಗವಾಸ್ಕರ್ ದಾಖಲೆ ಮುರಿದ ಆಂಗ್ಲ ನಾಯಕ ರೂಟ್
Ashes 2021: ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ರೂಟ್, ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ಅವರ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ದಾಖಲೆಯನ್ನು ಮುರಿದರು.
ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ರೂಟ್ ಅವರ ಬ್ಯಾಟ್ನಿಂದ ರನ್ ಮಳೆ ಸುರಿಯುತ್ತಿದೆ. ಶನಿವಾರ ಅಡಿಲೇಡ್ ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ರೂಟ್, ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ಅವರ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ದಾಖಲೆಯನ್ನು ಮುರಿದರು. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದ ವೇಳೆ ರೂಟ್ ಈ ಸಾಧನೆ ಮಾಡಿದರು.
ರೂಟ್ ಈಗಾಗಲೇ ಕ್ಯಾಲೆಂಡರ್ ವರ್ಷದಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಆಂಗ್ಲ ಬ್ಯಾಟ್ಸ್‌ಮನ್ ಮೈಕಲ್ ವಾನ್ ಅವರ ದಾಖಲೆಯನ್ನು ರೂಟ್ ಮುರಿದರು. ವಾನ್ 2002 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 1481 ರನ್ ಗಳಿಸಿ ಇಂಗ್ಲೆಂಡ್‌ನ ಸಾರ್ವಕಾಲಿಕ ಪ್ರಮುಖ ಸ್ಕೋರರ್ ಆಗಿದ್ದರು. ಟೆಸ್ಟ್‌ನ ಮೂರನೇ ದಿನದಂದು ರೂಟ್ ಸುನಿಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.
ಗವಾಸ್ಕರ್ 1979 ರಲ್ಲಿ 1,555 ರನ್ ಗಳಿಸಿದ್ದರು ಮತ್ತು ಸಚಿನ್ ತೆಂಡೂಲ್ಕರ್ 2010 ಕ್ಯಾಲೆಂಡರ್ ವರ್ಷದಲ್ಲಿ 1,562 ರನ್ ಗಳಿಸಿದ್ದರು. ಜೋ ರೂಟ್ ತೆಂಡೂಲ್ಕರ್ ನಂತರ ಒಂದೇ ವರ್ಷದಲ್ಲಿ ಐದನೇ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ರೂಟ್, ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ದಾಖಲೆ ಬರೆದಿದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಮತ್ತು ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿದರು.
ಆಂಗ್ಲ ನಾಯಕ ರೂಟ್ ಈ ವರ್ಷ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಭಾರತದಲ್ಲಿ ಭಾರತ ವಿರುದ್ಧದ ನಾಲ್ಕು ಟೆಸ್ಟ್‌ಗಳ ಸರಣಿಯಲ್ಲಿ ರೂಟ್ ಅತಿ ಹೆಚ್ಚು ರನ್ ಗಳಿಸಿದರು. ಇದರಲ್ಲಿ ದ್ವಿಶತಕವೂ ಸೇರಿದೆ. ದ್ವಿಶತಕ ಸೇರಿದಂತೆ ಒಟ್ಟು ಆರು ಶತಕ ಬಾರಿಸಿದ್ದಾರೆ. ಈ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಸರಾಸರಿ 65 ಆಗಿದೆ.
ಪಾಕಿಸ್ತಾನದ ಮೊಹಮ್ಮದ್ ಯೂಸುಫ್ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಅವರು 2006 ರಲ್ಲಿ 11 ಪಂದ್ಯಗಳಲ್ಲಿ 1,788 ರನ್ ಗಳಿಸಿದ್ದರು. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ವಿವಿಯನ್ ರಿಚರ್ಡ್ಸ್ 1976 ರಲ್ಲಿ 11 ಪಂದ್ಯಗಳಲ್ಲಿ 1,710 ರನ್ ಗಳಿಸಿದರು. ಯೂಸುಫ್ ಅವರ ದಾಖಲೆಯನ್ನು ಮುರಿಯಲು ಜೋ ರೂಟ್ ಇನ್ನೂ ಮೂರು ಇನ್ನಿಂಗ್ಸ್‌ಗಳಲ್ಲಿ ಉತ್ತಮ ಬ್ಯಾಟಿಂಗ್ ಮಾಡಬೇಕಿದೆ.