AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಮಿಚೆಲ್ ಸ್ಟಾರ್ಕ್ ಔಟ್! ಮೊದಲ ಆಶಸ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ

Ashes 2023: ಇಂದಿನಿಂದ ಆರಂಭವಾಗಿರುವ ಆಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಆಸೀಸ್ ತಂಡ ಪ್ರಕಟವಾಗಿದ್ದು, ತಂಡದ ಆಡುವ ಹನ್ನೊಂದರ ಬಳಗದಿಂದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು ಕೈಬಿಟ್ಟಿದೆ.

Ashes 2023: ಮಿಚೆಲ್ ಸ್ಟಾರ್ಕ್ ಔಟ್! ಮೊದಲ ಆಶಸ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಶಸ್ ಸರಣಿ
ಪೃಥ್ವಿಶಂಕರ
|

Updated on:Jun 16, 2023 | 4:05 PM

Share

ಇಂದಿನಿಂದ ಆರಂಭವಾಗಿರುವ ಆಶಸ್ (Ashes 2023) ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಆಸೀಸ್ ತಂಡ (Australia playing XI) ಪ್ರಕಟವಾಗಿದ್ದು, ತಂಡದ ಆಡುವ ಹನ್ನೊಂದರ ಬಳಗದಿಂದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ (Mitchell Starc) ಅವರನ್ನು ಕೈಬಿಡಲಾಗಿದೆ. ಅವರ ಜಾಗದಲ್ಲಿ ಜೋಶ್ ಹ್ಯಾಜಲ್‌ವುಡ್​ಗೆ (Josh Hazelwood) ಅವಕಾಶ ನೀಡಲಾಗಿದೆ. ಸ್ಟಾರ್ಕ್ ಈ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್ ಆಡಿದ್ದ ಆಸೀಸ್ ತಂಡದ ಬಾಗವಾಗಿದ್ದರು. ಇದಾದ ನಂತರ ಆಶಸ್ ಸರಣಿಯಲ್ಲೂ ಕಾಣಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಟೆಸ್ಟ್‌ನಲ್ಲೇ ಆಸ್ಟ್ರೇಲಿಯಾ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಈ ಪಂದ್ಯದ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಬಳಿಕ ತಾವೂ ಕೂಡ ಮೊದಲು ಬ್ಯಾಟಿಂಗ್ ಮಾಡಲು ಇಚ್ಚಿಸಿದ್ದೇವು ಎಂದರು. ಇಂಗ್ಲೆಂಡ್ ಈ ಹಿಂದೆ, ಅಂದರೆ 2 ದಿನಗಳ ಹಿಂದೆಯೇ ತನ್ನ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿತ್ತು. ಆದರೆ ಆಸೀಸ್ ಮಾತ್ರ ಟಾಸ್​ವರೆಗೂ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿತ್ತು. ಇದೀಗ ಆಸೀಸ್ ತಂಡದ ಪ್ಲೇಯಿಂಗ್ ಇಲೆವೆನ್ ಹೊರಬಿದ್ದಿದ್ದು, ಸ್ಟಾರ್ಕ್​ ಅವರನ್ನು ಆಸೀಸ್ ಕೈಬಿಟ್ಟಿರುವುದು ಅಚ್ಚರಿ ತಂದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸ್ಟಾರ್ಕ್ ಒಟ್ಟು 4 ವಿಕೆಟ್ ಪಡೆದಿದ್ದರು. ಅಲ್ಲದೆ, ಎರಡನೇ ಇನ್ನಿಂಗ್ಸ್‌ನಲ್ಲಿ 41 ರನ್ ಸಹ ಬಾರಿಸಿದ್ದರು.

MLC: ಭಾರತ ಕ್ರಿಕೆಟ್​ಗೆ ಗುಡ್​ಬೈ ಹೇಳಿ ವಿದೇಶಿ ಲೀಗ್​ಗಳತ್ತ ಮುಖ ಮಾಡಿದ ಸಿಎಸ್​ಕೆ ಸೂಪರ್​ಸ್ಟಾರ್..!

ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಬಳಿಕ ಮಾತನಾಡಿದ ಕಮ್ಮಿನ್ಸ್, ಆಸ್ಟ್ರೇಲಿಯಾ ಒಂದೇ ಒಂದು ಬದಲಾವಣೆ ಮಾಡಿದೆ. ಕಳೆದ ಪಂದ್ಯದಲ್ಲಿ ಸ್ಟಾರ್ಕ್ ಅದ್ಬುತ ಪ್ರದರ್ಶನ ನೀಡಿದರೂ ಹ್ಯಾಜಲ್​ವುಡ್​ರಂತಹ ಬೌಲರ್​ಗಳು ತಂಡದಲ್ಲಿ ಇರುವುದು ಒಳ್ಳೆಯದು. ಕೆಲಸದ ಹೊರೆಯನ್ನು ನಿರ್ವಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗೆಯೇ ಆಶಸ್ ಸರಣಿ ಜಯಿಸಲು ಉತ್ತಮ ತಯಾರಿ ನಡೆದಿದೆ ಎಂದು ಹೇಳಿದರು.

ಮೊಯಿನ್ ಅಲಿ ಆಗಮನದಿಂದ ತಂಡ ಬಲಗೊಂಡಿದೆ

ಟಾಸ್ ಗೆದ್ದ ಬಳಿಕ ಮಾತನಾಡಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, ವಿಕೆಟ್ ಅದ್ಭುತವಾಗಿದೆ. ಇದು ತನಗೆ ಮತ್ತು ತನ್ನ ತಂಡಕ್ಕೆ ಅತ್ಯಂತ ವಿಶೇಷವಾದ ಕ್ಷಣವಾಗಿದೆ. ಮೊಯಿನ್ ಅಲಿ ಮತ್ತೆ ಟೆಸ್ಟ್ ತಂಡಕ್ಕೆ ಮರಳಿರುವುದು ಸಂತಸ ತಂದಿದೆ. ಅವರು ಏನು ಮಾಡಬಹುದು ಎಂಬುದು ಎಲ್ಲರಿಗೂ ತಿಳಿದಿದೆ ಎಂದರು.

ಮೊದಲ ಪಂದ್ಯಕ್ಕೆ ಉಭಯ ತಂಡಗಳು

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೂರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್.

ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಓಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Fri, 16 June 23

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ