IND vs ENG: ಜೊತೆಯಾಗಿ ವಿಶೇಷ ಮೈಲುಗಲ್ಲು ದಾಟಿದ ಜಾನಿ-ಅಶ್ವಿನ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದ ಮೂಲಕ ಇಬ್ಬರು ಆಟಗಾರರು 100 ಟೆಸ್ಟ್ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ ಈ ಮೈಲುಗಲ್ಲು ದಾಟಿದರೆ, ಇಂಗ್ಲೆಂಡ್ ಪರ ಜಾನಿ ಬೈರ್​ಸ್ಟೋವ್ ಈ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಜೊತೆಯಾಗಿ 100ನೇ ಟೆಸ್ಟ್ ಪಂದ್ಯವಾಡಿದ ವಿಶೇಷ ದಾಖಲೆ ಬರೆದಿದ್ದಾರೆ.

IND vs ENG: ಜೊತೆಯಾಗಿ ವಿಶೇಷ ಮೈಲುಗಲ್ಲು ದಾಟಿದ ಜಾನಿ-ಅಶ್ವಿನ್
Jonny Bairstow-Ashwin
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 07, 2024 | 11:37 AM

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ಹಾಗೂ ಜಾನಿ ಬೈರ್​ಸ್ಟೋವ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ ಜೊತೆಯಾಗಿ 100ನೇ ಪಂದ್ಯವನ್ನಾಡುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ 100ನೇ ಪಂದ್ಯವಾಡುತ್ತಿದ್ದರೆ, ಇಂಗ್ಲೆಂಡ್ ಪರ ಜಾನಿ ಬೈರ್​ಸ್ಟೋವ್ 100ನೇ ಮ್ಯಾಚ್​ ಆಡುತ್ತಿದ್ದಾರೆ. ಈ ಮೂಲಕ ಒಂದೇ ಟೆಸ್ಟ್​ನಲ್ಲಿ ಜೊತೆಯಾಗಿ 100ನೇ ಪಂದ್ಯವಾಡಿದ ಅಪರೂಪದ ದಾಖಲೆ ಬರೆದಿದ್ದಾರೆ.

ದಾಖಲೆ ಬರೆದ 4ನೇ ಜೋಡಿ:

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೀಗೆ ಜೊತೆಯಾಗಿ ಒಂದೇ ಪಂದ್ಯದ ಮೂಲಕ ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಆಟಗಾರರು 100ನೇ ಪಂದ್ಯವಾಡುತ್ತಿರುವುದು ಇದು 4ನೇ ಬಾರಿ. ಇದಕ್ಕೂ ಮುನ್ನ 7 ಆಟಗಾರರು ಈ ಸಾಧನೆ ಮಾಡಿದ್ದರು.

2000 ರಲ್ಲಿ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರಾದ ಮೈಕೆಲ್ ಅಥರ್ಟನ್ ಮತ್ತು ಅಲೆಕ್ ಸ್ಟೀವರ್ಟ್ ಜೊತೆಯಾಗಿ 100ನೇ ಟೆಸ್ಟ್ ಪಂದ್ಯವಾಡಿದ ವಿಶೇಷ ದಾಖಲೆ ಬರೆದಿದ್ದರು.

2006 ರಲ್ಲಿ ಸೌತ್ ಆಫ್ರಿಕಾದ ಜಾಕ್ವೆಸ್ ಕಾಲಿಸ್, ಶಾನ್ ಪೊಲಾಕ್ ಮತ್ತು ನ್ಯೂಝಿಲೆಂಡ್​ನ​ ಸ್ಟೀಫನ್ ಫ್ಲೆಮಿಂಗ್ ಜೊತೆಯಾಗಿ 100ನೇ ಟೆಸ್ಟ್ ಪಂದ್ಯವಾಡಿದ ಸಾಧನೆ ಮಾಡಿದ್ದರು.

2013 ರಲ್ಲಿ ಪರ್ತ್‌ನಲ್ಲಿ ನಡೆದ ಇಂಗ್ಲೆಂಡ್-ಆಸ್ಟ್ರೇಲಿಯಾ ಆ್ಯಶಸ್ ಸರಣಿಯಲ್ಲಿ ಅಲಸ್ಟೈರ್ ಕುಕ್ ಮತ್ತು ಮೈಕೆಲ್ ಕ್ಲಾರ್ಕ್ ಜೊತೆಯಾಗಿ 100 ಟೆಸ್ಟ್ ಪಂದ್ಯಗಳ ಮೈಲುಗಲ್ಲನ್ನು ದಾಟಿದ್ದರು.

2024 ರಲ್ಲಿ ಜಾನಿ ಬೈರ್​ಸ್ಟೋವ್ ಹಾಗೂ ರವಿಚಂದ್ರನ್ ಅಶ್ವಿನ್ ಜೊತೆಯಾಗಿ 100ನೇ ಟೆಸ್ಟ್ ಪಂದ್ಯವನ್ನಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಜೊತೆಯಾಗಿ 100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ವಿಶೇಷ ದಾಖಲೆ ಬರೆದಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್:

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದೆ.

ದೇವದತ್ ಪಡಿಕ್ಕಲ್ ಕಣಕ್ಕೆ:

ಇಂಗ್ಲೆಂಡ್​ ವಿರುದ್ಧದ ಈ ಪಂದ್ಯದ ಮೂಲಕ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ಅಂದರೆ ಅಶ್ವಿನ್ ಅವರ 100ನೇ ಟೆಸ್ಟ್ ಪಂದ್ಯದ ವೇಳೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಕೆರಿಯರ್ ಆರಂಭಿಸುತ್ತಿರುವುದು ವಿಶೇಷ.

5ನೇ ಟೆಸ್ಟ್​​ನಲ್ಲಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್​:

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್, ಮಾರ್ಕ್ ವುಡ್.

ಆತುರದಲ್ಲಿ ಚಿಕನ್ ತಿಂದ ಧನರಾಜ್ ಆಚಾರ್; ಹೇಗಿದೆ ನೋಡಿ ಒದ್ದಾಟ
ಆತುರದಲ್ಲಿ ಚಿಕನ್ ತಿಂದ ಧನರಾಜ್ ಆಚಾರ್; ಹೇಗಿದೆ ನೋಡಿ ಒದ್ದಾಟ
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ