ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂವರು ಸ್ಪಿನ್ನರ್ಗಳು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್ನ ಭಾಗವಾಗುವುದು ಕನ್ಫರ್ಮ್. ಇದಾಗ್ಯೂ ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ನಡುವೆ ಮೂರನೇ ಸ್ಪಿನ್ನರ್ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಸ್ತುತ ಮಾಹಿತಿ ಪ್ರಕಾರ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಜೊತೆ ಕುಲ್ದೀಪ್ ಯಾದವ್ ಅವರನ್ನು ಆಡಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಹೆಚ್ಚಿನ ಆಸಕ್ತಿ ಹೊಂದಿದೆ. ಹೀಗಾಗಿ ಈ ಮೂವರು ಭಾರತ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನಗಿಟ್ಟಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈನ ಚೆಪಾಕ್ ಮೈದಾನದ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಕಾರಿ. ಹೀಗಾಗಿಯೇ ಸ್ಪಿನ್ ತ್ರಿಮೂರ್ತಿಗಳೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ. ಇನ್ನು ಭಾರತ ತಂಡವು ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಿದರೆ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಇನ್ನುಳಿದಂತೆ ಆರು ಬ್ಯಾಟರ್ಗಳು ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಖಚಿತ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಹಾಗೂ ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.
ಅತ್ತ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಆಲ್ರೌಂಡರ್ಗಳಾಗಿರುವ ಕಾರಣ 8ನೇ ಕ್ರಮಾಂಕದವರೆಗೆ ಬ್ಯಾಟಿಂಗ್ ಲೈನಪ್ ಇರಲಿದೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.
ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.