AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’!

India A vs Sri Lanka A: ನಾವು ಸಾಮಾನ್ಯವಾಗಿ ಐಪಿಎಲ್‌ನಲ್ಲಿ ನೋಡುವಷ್ಟು ಹೆಚ್ಚಿನ ಸಂಖ್ಯೆಯ ಕ್ಯಾಮೆರಾಗಳು ಕಿರಿಯರ ಸರಣಿಗಳಲ್ಲಿ ಇರುವುದಿಲ್ಲ. ಸೂಪರ್ ಓವರ್‌ನಲ್ಲಿ ಅಂಪೈರ್ ನೀಡಿದ ಆ 'ನೋ ಬಾಲ್' ತೀರ್ಪು ನಿಜಕ್ಕೂ ತೀವ್ರ ಚರ್ಚಾಸ್ಪದವಾಗಿತ್ತು. ಅದರಲ್ಲೂ ವಿಶೇಷವಾಗಿ, ಕತ್ತಲಾಗುತ್ತಿದ್ದ ಸಂದರ್ಭದಲ್ಲಿ ಶ್ರೀಲಂಕಾ ತಂಡದ ಬ್ಯಾಟರ್‌ಗಳು ಕ್ರೀಸ್‌ಗೆ ಬರಲು ಉದ್ದೇಶಪೂರ್ವಕವಾಗಿ ತಡ ಮಾಡಿದ ರೀತಿ, ಅವರು ಗೆಲ್ಲಲು ಮಾಡಿದ್ದ ಪಕ್ಕಾ 'ಮೈಂಡ್ ಗೇಮ್ಸ್' ಆಗಿತ್ತು ಎಂದು ಅಶ್ವಿನ್ ಹೇಳಿದ್ದಾರೆ.

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು 'ನಾಟಕೀಯ ರಂಗಭೂಮಿ'!
Ashwin - Team IndiaImage Credit source: Google
ಝಾಹಿರ್ ಯೂಸುಫ್
|

Updated on: Jun 16, 2026 | 10:51 AM

Share

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಅವರು ಈ ಮ್ಯಾಚ್​ ಅನ್ನು “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಕರೆಯಲು ಮುಖ್ಯ ಕಾರಣ ಪಂದ್ಯದ ವೇಳೆ ಕಂಡು ಬಂದ ಟ್ವಿಸ್ಟ್ ಹಾಗೂ ಅವ್ಯವಸ್ಥೆ.

ಏಕೆಂದರೆ ಈ ಪಂದ್ಯವು ಟೈ ಆಗಿ ಸೂಪರ್ ಓವರ್‌ಗೆ ತಲುಪಿದಾಗ ಉಭಯ ತಂಡಗಳಲ್ಲಿ ತೀವ್ರ ಒತ್ತಡವಿತ್ತು. ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರಿಗೆ ಮತ್ತು ವೀಕ್ಷಕರಿಗೆ ಇದು ಯಾವುದೇ ರೋಮಾಂಚಕ ನಾಟಕ ಅಥವಾ ಸಿನಿಮಾಗೆ ಕಮ್ಮಿ ಇರಲಿಲ್ಲ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಅದರಲ್ಲೂ ಸೂಪರ್ ಓವರ್‌ನಲ್ಲಿ ಬಂದ ‘ನೋ ಬಾಲ್’ ತೀರ್ಪು ಪಂದ್ಯದ ಅತಿ ದೊಡ್ಡ ಟ್ವಿಸ್ಟ್ ಆಗಿತ್ತು. ಯಾವುದೇ ನಿಖರ ತಂತ್ರಜ್ಞಾನವಿಲ್ಲದೆ ಅಂಪೈರ್ ನೀಡಿದ ಈ ತೀರ್ಪು ನಾಟಕವೊಂದರ ವಿವಾದಾತ್ಮಕ ಸನ್ನಿವೇಶದಂತೆ ಇಡೀ ಪಂದ್ಯದ ದಿಕ್ಕನ್ನೇ ಬದಲಿಸಿತು ಎಂದು ಎಂಬುದು ಅಶ್ವಿನ್ ಅವರ ಅಭಿಪ್ರಾಯ.

ಇನ್ನು ಕತ್ತಲಾಗುತ್ತಿದ್ದ ಸಂದರ್ಭವನ್ನು ಬಳಸಿಕೊಂಡು ಶ್ರೀಲಂಕಾ ಆಟಗಾರರು ಕ್ರೀಸ್‌ಗೆ ಬರಲು ತಡ ಮಾಡಿದ್ದು ಪಕ್ಕಾ ಚಿತ್ರಕಥೆಯ ವಿಲನ್ ತಂತ್ರಗಳಂತೆ ಕಾಣಿಸಿತು. ಇದು ಭಾರತೀಯ ಆಟಗಾರರಲ್ಲಿ ತೀವ್ರ ಹತಾಶೆ ಮತ್ತು ಆಕ್ರೋಶವನ್ನು ಹುಟ್ಟುಹಾಕಿತು.

ಹಾಗೆಯೇ ಪಂದ್ಯದ ಕ್ಲೈಮ್ಯಾಕ್ಸ್‌ನಲ್ಲಿ ಯುವ ಆಟಗಾರರಾದ ವೈಭವ್ ಸೂರ್ಯವಂಶಿ ಮತ್ತು ವಿಶೇನ್ ಹಲಂಬಾಗೆ ಪರಸ್ಪರ ಮೈದಾನದಲ್ಲೇ ತಳ್ಳಾಡಿಕೊಂಡಿದ್ದು ಆಟದಲ್ಲಿದ್ದ ತೀವ್ರ ಮಾನಸಿಕ ಒತ್ತಡ ಮತ್ತು ಭಾವನೆಗಳ ಸ್ಫೋಟವನ್ನು ತೋರಿಸಿದೆ ಎಂದು ಅಶ್ವಿನ್ ಹೇಳಿದ್ದಾರೆ.

ಕ್ರೀಡಾ ಸ್ಫೂರ್ತಿಯ ದೃಷ್ಟಿಯಿಂದ ಇದು ಸರಿಯಲ್ಲದಿದ್ದರೂ, ವೀಕ್ಷಕರಿಗೆ ಮತ್ತು ಕ್ರಿಕೆಟ್ ಪ್ರಿಯರಿಗೆ ಇದೊಂದು ಮರೆಯಲಾಗದ, ಅತ್ಯಂತ ರೋಮಾಂಚಕ “ನಾಟಕೀಯ ಪಂದ್ಯವಾಗಿತ್ತು” ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ: ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!

ಶ್ರೀಲಂಕಾ ತಂಡಕ್ಕೆ ಸೂಪರ್ ಗೆಲುವು:

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 49.2 ಓವರ್​ಗಳಲ್ಲಿ 265 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ಎ ತಂಡ 50 ಓವರ್​ಗಳಲ್ಲಿ 265 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಶ್ರೀಲಂಕಾ 16 ರನ್ ಬಾರಿಸಿದರು. 17 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 6 ಎಸೆತಗಳಲ್ಲಿ ಕೇವಲ 9 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ