IND vs SA: ಮೊಬೈಲ್​ನಲ್ಲಿ ಕೊಹ್ಲಿ ಶತಕವನ್ನು ವೀಕ್ಷಿಸಿದ್ದು 4 ಕೋಟಿ 40 ಲಕ್ಷ ಮಂದಿ: ಇದು ಡಿಜಿಟಲ್ ಇಂಡಿಯಾ ಎಂದ ಅಶ್ವಿನಿ ವೈಷ್ಣವ್

Virat Kohli Century Record: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ವಿಶ್ವಕಪ್ ಪಂದ್ಯ ಕ್ರಿಕೆಟ್ ಜಗತ್ತಿನಲ್ಲಿ ಶಾಶ್ವತವಾಗಿ ಉಳಿಯಲಿದೆ. ಯಾಕೆಂದರೆ ಒಂದು ಕಡೆ ಕೊಹ್ಲಿ ಹುಟ್ಟುಹಬ್ಬದಂದು ಶತಕ ಬಾರಿಸಿದರೆ, ಮತ್ತೊಂದೆಡೆ ಕೊಹ್ಲಿ ಶತಕದ ವೇಳೆ ಈ ಪಂದ್ಯವನ್ನು ವೀಕ್ಷಿಸಿದ್ದು ಬರೋಬ್ಬರಿ 4 ಕೋಟಿ 40 ಲಕ್ಷ ಮಂದಿ.

IND vs SA: ಮೊಬೈಲ್​ನಲ್ಲಿ ಕೊಹ್ಲಿ ಶತಕವನ್ನು ವೀಕ್ಷಿಸಿದ್ದು 4 ಕೋಟಿ 40 ಲಕ್ಷ ಮಂದಿ: ಇದು ಡಿಜಿಟಲ್ ಇಂಡಿಯಾ ಎಂದ ಅಶ್ವಿನಿ ವೈಷ್ಣವ್
Virat Kohli and Ashwini Vaishnaw
Follow us
Vinay Bhat
|

Updated on: Nov 06, 2023 | 11:27 AM

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ (India vs South Africa) 243 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 326 ರನ್ ಗಳಿಸಿತು. ಬಳಿಕ ಟೀಮ್ ಇಂಡಿಯಾ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಕೇವಲ 27.1 ಓವರ್‌ಗಳಲ್ಲಿ ಕೇವಲ 83 ರನ್‌ಗಳಿಗೆ ಆಲೌಟಾಯಿತು. ಈ ಮೂಲಕ ವಿಶ್ವಕಪ್‌ನಲ್ಲಿ ಭಾರತ ಸತತ ಎಂಟನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿ ಮಿಂಚಿದರು.

ಹುಟ್ಟುಹಬ್ಬದ ದಿನದಂದೇ ಕಿಂಗ್ ಕೊಹ್ಲಿ 49ನೇ ಶತಕ ದಾಖಲಿಸಿ ದಾಖಲೆ ಬರೆದರು. ಈ ಶತಕದೊಂದಿಗೆ ಸಚಿನ್ ಅವರ ಅತಿ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ವಿಶ್ವಕಪ್ ಪಂದ್ಯ ಕ್ರಿಕೆಟ್ ಜಗತ್ತಿನಲ್ಲಿ ಶಾಶ್ವತವಾಗಿ ಉಳಿಯಲಿದೆ. ಯಾಕೆಂದರೆ ಒಂದು ಕಡೆ ಕೊಹ್ಲಿ ಹುಟ್ಟುಹಬ್ಬದಂದು ಶತಕ ಬಾರಿಸಿದರೆ, ಮತ್ತೊಂದೆಡೆ ಕೊಹ್ಲಿ ಶತಕದ ವೇಳೆ ಈ ಪಂದ್ಯವನ್ನು ವೀಕ್ಷಿಸಿದ್ದು ಬರೋಬ್ಬರಿ 4 ಕೋಟಿ 40 ಲಕ್ಷ ಮಂದಿ.

ಇದನ್ನೂ ಓದಿ
Image
ಮೆಡಲ್ ಸಿಕ್ಕಿದ್ದು ರೋಹಿತ್​ಗೆ: ಎದ್ದು-ಬಿದ್ದು ಸಂಭ್ರಮಿಸಿದ್ದು ಗಿಲ್-ಕಿಶನ್
Image
ಈಡನ್ ಗಾರ್ಡನ್ ಪಿಚ್​ಗೆ ಮನಸೋತ ಕೊಹ್ಲಿ: ಗ್ರೌಂಡ್ಸ್ ಮೆನ್​ಗಳ ಜೊತೆ ಫೋಟೋ
Image
ಭಾರತದ ಮುಂದಿನ ಪಂದ್ಯ ಬೆಂಗಳೂರಲ್ಲಿ: ಕೊನೆಯ ಮ್ಯಾಚ್ ಯಾವಾಗ?, ಯಾರ ವಿರುದ್ಧ?
Image
ಕೊಹ್ಲಿ ಸ್ವಾರ್ಥಿ ಎಂದವರಿಗೆ ಪಂದ್ಯದ ಬಳಿಕ ರೋಹಿತ್ ಕೊಟ್ಟ ಉತ್ತರವೇನು ನೋಡಿ

IND vs NED, ICC World Cup: ಭಾರತದ ಮುಂದಿನ ಪಂದ್ಯ ಬೆಂಗಳೂರಿನಲ್ಲಿ: ಕೊನೆಯ ಮ್ಯಾಚ್ ಯಾವಾಗ?, ಯಾರ ವಿರುದ್ಧ?

ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಇದು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಹೇಗೆ ಮುನ್ನಡೆಯುತ್ತಿದೆ ಎಂಬುದನ್ನು ಮತ್ತೊಮ್ಮೆ ನೆನಪಿಸುತ್ತದೆ ಎಂದು ಹೇಳಿದ್ದಾರೆ. ಕಡಿಮೆ ದರದ ಡೇಟಾದಿಂದ ಇಂಟರ್ನೆಟ್‌ ಉಪಯೋಗಿಸುತ್ತಿದ್ದಾರೆ. ಇದು ಭಾರತದ ಡಿಜಿಟಲ್ ಲ್ಯಾಂಡ್‌ಸ್ಕೇಪ್ ಅನ್ನು ಬದಲಾಯಿಸಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲು ಪರಿಸ್ಥಿತಿಗಳು ಹೇಗಿದ್ದವು ಮತ್ತು ಈಗ ಹೇಗಾಗಿದೆ ಎಂಬುದನ್ನು ಸಾಮಾಜಿಕ ಮಾಧ್ಯಮದಲ್ಲಿ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಡಿರುವ ಟ್ವೀಟ್:

”ಕಡಿಮೆ ವೆಚ್ಚದಲ್ಲಿ ಇಂಟರ್ನೆಟ್ ಸಿಗುತ್ತಿದೆ. ಇದರಿಂದ ಸುಲಭವಾಗಿ ಮೊಬೈಲ್​ನಲ್ಲಿ ಡೇಟಾ ಆನ್ ಮಾಡಿ ಉಪಯೋಗಿಸುತ್ತಿದ್ದಾರೆ. ಇದು ಭಾರತದ ಡಿಜಿಟಲ್ ಲ್ಯಾಂಡ್‌ಸ್ಕೇಪ್ ಅನ್ನು ಮಾರ್ಪಡಿಸಿದೆ. 2011ರಲ್ಲಿ ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದಿತ್ತು. ಆಗ ಟೀವಿ ಶೋರೂಮ್‌ಗಳ ಹೊರಗೆ ಪಂದ್ಯವನ್ನು ವೀಕ್ಷಿಸಲು ಜನರು ಸೇರುತ್ತಿದ್ದರು. ಆದರೆ, ಈಗ ನೋಡುವ ರೀತಿ ಸಂಪೂರ್ಣ ಬದಲಾಗಿದೆ. ಜನರು ಮೊಬೈಲ್ ಫೋನ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಕ್ರಿಕೆಟ್ ವೀಕ್ಷಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಇಂದು ಶತಕ ಬಾರಿಸಿದ್ದಾರೆ. ಈ ಸಮಯದಲ್ಲಿ ಕಂಡ 4.4 ಕೋಟಿ ವೀಕ್ಷಣೆಗಳು ಡಿಜಿಟಲ್ ಇಂಡಿಯಾದ ಯಶಸ್ಸಿನ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಇದಕ್ಕೆ ಕಾರಣ,” ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್