Asia Cup 2022: ಪಾಕಿಸ್ತಾನ್ ಗೆದ್ದ ಖುಷಿಯಲ್ಲಿ ಗಾಳಿಯಲ್ಲಿ ಗುಂಡು: ಇಬ್ಬರ ಸಾವು..!

Asia 2022: ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ಅಭಿಮಾನಿಗಳು ಶಾರ್ಜಾ ಸ್ಟೇಡಿಯಂನಲ್ಲಿ ಹೊಡೆದಾಡಿಕೊಂಡ ಘಟನೆ ಕೂಡ ನಡೆದಿದೆ. ತಮ್ಮ ತಂಡ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನ್ ಅಭಿಮಾನಿಗಳನ್ನು ಪಾಕ್ ಫ್ಯಾನ್ಸ್​ ಹೀಯಾಳಿಸಿದ್ದರು.

Asia Cup 2022: ಪಾಕಿಸ್ತಾನ್ ಗೆದ್ದ ಖುಷಿಯಲ್ಲಿ ಗಾಳಿಯಲ್ಲಿ ಗುಂಡು: ಇಬ್ಬರ ಸಾವು..!
Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 08, 2022 | 1:00 PM

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದ ಐದನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅಫ್ಘಾನಿಸ್ತಾನ್ ವಿರುದ್ಧ ರೋಚಕ ಜಯ ಸಾಧಿಸಿತು. ಕೊನೆಯ ಓವರ್​ ರೋಚಕತೆಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ 2 ಸಿಕ್ಸ್​ ಸಿಡಿಸಿ ನಸೀಮ್ ಶಾ ಪಾಕ್ ತಂಡಕ್ಕೆ 1 ವಿಕೆಟ್​ಗಳ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ವಿಜಯೋತ್ಸವದ ಭರದಲ್ಲಿ ಇದೀಗ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಅತ್ತ ಶಾರ್ಜಾದಲ್ಲಿ ಪಾಕ್ ತಂಡ ಗೆಲ್ಲುತ್ತಿದ್ದಂತೆ, ಇತ್ತ ಪಾಕಿಸ್ತಾನದ ಪೇಶಾವರದಲ್ಲಿ ಜನರು ರೈಫಲ್ಸ್​ನೊಂದಿಗೆ ವಿಜಯೋತ್ಸವಕ್ಕಿಳಿದಿದ್ದರು.

ಈ ವೇಳೆ ಅನೇಕರು ಗಾಳಿಯಲ್ಲಿ ಗುಂಡು ಹಾರಿಸುತ್ತಾ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮದ ನಡುವೆ ಹಲವು ಜನರಿಗೆ ಗುಂಡು ತಾಗಿದ್ದು, ಅವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪೇಶಾವರದ ಮಾತಾನಿ ಅಡೆಜೈ ಪ್ರದೇಶದ ಸುದೇಸ್ ಗುಂಡಿನ ದಾಳಿಗೆ ಬಲಿಯಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಲ್ಲದೆ ಖಯ್ಯಾಮ್ ಎಂಬ ಇನ್ನೊಬ್ಬ ವ್ಯಕ್ತಿ ಕೂಡ ನಗರದ ಮತ್ತೊಂದು ಪ್ರದೇಶದಲ್ಲಿ ಗುಂಡಿನ ಸಂಭ್ರಮಕ್ಕೆ ಬಲಿಯಾಗಿದ್ದಾರೆ. ಹಾಗೆಯೇ ಕೆಲ ಮಹಿಳೆಯರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಜಿಯೋ ಟಿವಿ ವರದಿ ಪ್ರಕಾರ, ಈ ಪ್ರಕರಣಗಳ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಗಾಳಿಯಲ್ಲಿ ಗುಂಡು ಹಾರಿಸಿದ ಅಪರಾಧಕ್ಕಾಗಿ 41 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಗರದಾದ್ಯಂತ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮೃತರ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಮತ್ತೊಂದೆಡೆ ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ಅಭಿಮಾನಿಗಳು ಶಾರ್ಜಾ ಸ್ಟೇಡಿಯಂನಲ್ಲಿ ಹೊಡೆದಾಡಿಕೊಂಡ ಘಟನೆ ಕೂಡ ನಡೆದಿದೆ. ತಮ್ಮ ತಂಡ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನ್ ಅಭಿಮಾನಿಗಳನ್ನು ಪಾಕ್ ಫ್ಯಾನ್ಸ್​ ಹೀಯಾಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಅಫ್ಘಾನಿಸ್ತಾನ್ ಅಭಿಮಾನಿಗಳು ಸ್ಟೇಡಿಯಂನಲ್ಲೇ ಪಾಕಿಸ್ತಾನ್ ಫ್ಯಾನ್ಸ್​ಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದರ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ