AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಮತ್ತೆ ಟೀಮ್ ಇಂಡಿಯಾ ಜೊತೆ ಕೈ ಜೋಡಿಸ್ತಾರಾ ಎಂಎಸ್ ಧೋನಿ..?

Asia Cup 2022: ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಟೀಮ್ ಇಂಡಿಯಾ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನಡೆಯುತ್ತಿರುವುದು ಪ್ರಮುಖ ಟೂರ್ನಿಯಾಗಿದೆ.

MS Dhoni: ಮತ್ತೆ ಟೀಮ್ ಇಂಡಿಯಾ ಜೊತೆ ಕೈ ಜೋಡಿಸ್ತಾರಾ ಎಂಎಸ್ ಧೋನಿ..?
Ms Dhoni
TV9 Web
| Edited By: |

Updated on: Aug 23, 2022 | 11:56 AM

Share

ಏಷ್ಯಾಕಪ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ಆದರೆ ಅದಕ್ಕೂ ಮುನ್ನ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಹೀಗಾಗಿ ಏಷ್ಯಾಕಪ್​ಗೆ ದ್ರಾವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ತರಬೇತುದಾರ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಸದ್ಯ 2 ಉತ್ತರಗಳು ಸಿಗುತ್ತಿರುವುದು ವಿಶೇಷ.

ಒಂದು ವೇಳೆ ರಾಹುಲ್ ದ್ರಾವಿಡ್ ಸಂಪೂರ್ಣವಾಗಿ ಏಷ್ಯಾಕಪ್​ನಿಂದ ಹೊರಗುಳಿದರೆ, ಟೀಮ್ ಇಂಡಿಯಾ ಬದಲಿ ಕೋಚ್ ಅನ್ನು ಆಯ್ಕೆ ಮಾಡಲಿದೆ. ಇಲ್ಲಿ ಕೇಳಿ ಬರುತ್ತಿರುವ ಮೊದಲ ಹೆಸರೆಂದರೆ ವಿವಿಎಸ್​ ಲಕ್ಷ್ಮಣ್. ಈ ಹಿಂದೆ ಕೂಡ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಟೀಮ್ ಇಂಡಿಯಾ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನಡೆಯುತ್ತಿರುವುದು ಪ್ರಮುಖ ಟೂರ್ನಿಯಾಗಿದೆ. ಹೀಗಾಗಿಯೇ ಬಿಸಿಸಿಐ ಲಕ್ಷ್ಮಣ್ ಅವರಿಗೆ ಸಂಪೂರ್ಣ ಜವಾಬ್ದಾರಿವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ.

ಹೀಗಾಗಿ ಟೀಮ್ ಇಂಡಿಯಾ ಜೊತೆ ಮಹೇಂದ್ರ ಸಿಂಗ್ ಧೋನಿ ಅವರನ್ನು ಯುಎಇಗೆ ಕಳುಹಿಸಿಕೊಡುವ ಸಾಧ್ಯತೆಯಿದೆ. ಈ ಹಿಂದೆ ಟಿ20 ವಿಶ್ವಕಪ್​ನಲ್ಲಿ ಧೋನಿ ಭಾರತ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಮಾರ್ಗದರ್ಶಕರಾಗಿ ಭಾರತ ತಂಡದ ಜೊತೆ ಪ್ರಯಾಣಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ ಇದು ಬಹುರಾಷ್ಟ್ರೀಯ ಪಂದ್ಯಾವಳಿಯಾಗಿರುವುದರಿಂದ ವಿವಿಎಸ್​ ಲಕ್ಷ್ಮಣ್ ಜೊತೆ ಧೋನಿಯನ್ನು ಕೂಡ ತಂಡದ ಜೊತೆ ಕಳುಹಿಸಿಕೊಡಬಹುದು. ಇದರಿಂದ ಲಕ್ಷ್ಮಣ್ ಅವರ ಕೆಲಸ ಸುಲಭವಾಗುತ್ತದೆ. ಹಾಗೆಯೇ ಧೋನಿಯ ನಾಯಕತ್ವದಲ್ಲಿ ಪದಾರ್ಪಣೆ ಮಾಡಿದ ಆಟಗಾರರು ಪ್ರಸ್ತುತ ತಂಡದಲ್ಲಿದ್ದಾರೆ.

ಹಾಗೆಯೇ ಧೋನಿ ಏಷ್ಯಾಕಪ್‌ನಲ್ಲಿ ಆಡಿದ ಅನುಭವವನ್ನು ಹೊಂದಿದ್ದಾರೆ. ಜೊತೆಗೆ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳ ಸಾಮರ್ಥ್ಯ ಮತ್ತು ಚಾಣಾಕ್ಷ ನಡೆಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದಿದ್ದಾರೆ. ಇದು ಟೀಮ್ ಇಂಡಿಯಾಗೆ ಪ್ರಯೋಜನವಾಗಲಿದೆ. ಹೀಗಾಗಿಯೇ ರಾಹುಲ್ ದ್ರಾವಿಡ್ ಏಷ್ಯಾಕಪ್​ನಿಂದ ಹೊರಗುಳಿದರೆ, ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!