AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಹೀಗೊಂದು ಅಚ್ಚರಿ: ಈ ಬಾರಿ ಕೂಡ ಮಿಸ್ ಆಯ್ತು ಫೈನಲ್ ಫೈಟ್

Asia Cup 2022: ಏಷ್ಯಾಕಪ್‌ನಲ್ಲಿ ಭಾರತ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಶ್ರೀಲಂಕಾ 5 ಬಾರಿ ಮತ್ತು ಪಾಕಿಸ್ತಾನ 2 ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.

Asia Cup 2022: ಹೀಗೊಂದು ಅಚ್ಚರಿ: ಈ ಬಾರಿ ಕೂಡ ಮಿಸ್ ಆಯ್ತು ಫೈನಲ್ ಫೈಟ್
Asia Cup 2022
TV9 Web
| Edited By: |

Updated on: Sep 11, 2022 | 3:59 PM

Share

15ನೇ ಏಷ್ಯಾಕಪ್ (Asia Cup 2022) ಟೂರ್ನಿಯ ಫೈನಲ್ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿದೆ. ಆಗಸ್ಟ್ 27 ರಿಂದ ಶುರುವಾಗಿದ್ದ ಟೂರ್ನಿಯ ಅಂತಿಮ ಮುಖಾಮುಖಿಯಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ್ ತಂಡಗಳು ಸೆಣಸಲಿದೆ. ಇದರೊಂದಿಗೆ ಏಷ್ಯಾಕಪ್​ ಫೈನಲ್​ನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಮುಖಾಮುಖಿಗೆ ಮತ್ತಷ್ಟು ಕಾಯಬೇಕಾಗಿದೆ. ಅಂದರೆ 15 ಸೀಸನ್​ ಏಷ್ಯಾಕಪ್​ನಲ್ಲಿ ಇದುವರೆಗೆ ಭಾರತ-ಪಾಕಿಸ್ತಾನ್ ಫೈನಲ್​ನಲ್ಲಿ ಮುಖಾಮುಖಿಯಾಗಿಲ್ಲ. ಅಂದರೆ ಭಾರತ ಫೈನಲ್ ಪ್ರವೇಶಿಸಿದಾಗೆಲ್ಲಾ ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳು ಎದುರಾಳಿಗಳಾಗಿ ಸಿಕ್ಕಿವೆ. ಹಾಗೆಯೇ ಪಾಕಿಸ್ತಾನ್ ಫೈನಲ್ ಪ್ರವೇಶಿಸಿದಾಗ ಭಾರತ ತಂಡವು ಅಂತಿಮ ಹಣಾಹಣಿ ಹಂತಕ್ಕೆ ತಲುಪಿರಲಿಲ್ಲ ಎಂಬುದು ವಿಶೇಷ. ಈ ಬಾರಿ ಕೂಡ ಅದು ಮರುಕಳಿಸಿದೆ. ಈ ಸಲ ಪಾಕಿಸ್ತಾನ್ ತಂಡವು ಫೈನಲ್ ಪ್ರವೇಶಿಸಿದರೆ, ಟೀಮ್ ಇಂಡಿಯಾ ಹೊರಬಿದ್ದಿದೆ. ಹೀಗಾಗಿ ಏಷ್ಯಾಕಪ್​ನಲ್ಲಿ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಗೆ ಇನ್ನಷ್ಟು ವರ್ಷಗಳ ಕಾಲ ಕಾಯಬೇಕಿದೆ. ಹಾಗಿದ್ರೆ ಏಷ್ಯಾಕಪ್​ ಫೈನಲ್​ ಇತಿಹಾಸದ ಹೇಗಿದೆ ನೋಡೋಣ…

  • 1984: ಚೊಚ್ಚಲ ಏಷ್ಯಾಕಪ್​ನಲ್ಲಿ ಭಾರತ ಹಾಗೂ ಶ್ರೀಲಂಕಾ ಫೈನಲ್​ನಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
  • 1986: 2ನೇ ಏಷ್ಯಾಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಶ್ರೀಲಂಕಾ ಮೊದಲ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
  • 1988: ಏಷ್ಯಾಕಪ್‌ನ ಮೂರನೇ ಆವೃತ್ತಿಯಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಸೋಲಿಸಿ ಮತ್ತೊಮ್ಮೆ ಟ್ರೋಫಿಗೆ ಮುತ್ತಿಕ್ಕಿತು.
  • 1991: ಏಷ್ಯಾಕಪ್‌ನಲ್ಲಿ ಪ್ರಾಬಲ್ಯ ಮುಂದುವರಿಸಿದ್ದ ಭಾರತ ತಂಡವು ಶ್ರೀಲಂಕಾವನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
  • 1995: ಐದನೇ ಆವೃತ್ತಿಯ ಏಷ್ಯಾಕಪ್​ನ ಫೈನಲ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಶ್ರೀಲಂಕಾ ಮತ್ತೊಮ್ಮೆ ಸೋಲನುಭವಿಸಿತು.
  • 1997: ಆರನೇ ಏಷ್ಯಾಕಪ್​ ಫೈನಲ್​ನಲ್ಲಿ ಭಾರತವನ್ನು ಮಣಿಸಿ ಶ್ರೀಲಂಕಾ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿತು.
  • 2000: 7ನೇ ಏಷ್ಯಾಕಪ್​ನಲ್ಲಿ ಶ್ರೀಲಂಕಾವನ್ನು ಮಣಿಸುವ ಮೂಲಕ ಪಾಕಿಸ್ತಾನ್ ತಂಡವು ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು.
  • 2004: ಸತತವಾಗಿ ಏಷ್ಯಾಕಪ್​ನಲ್ಲಿ ಅಮೋಘ ಪ್ರದರ್ಶನ ತೋರಿದ ಶ್ರೀಲಂಕಾ ಭಾರತಕ್ಕೆ ಸೋಲುಣಿಸಿ ಮೂರನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿತು.
  • 2008: 9ನೇ ಏಷ್ಯಾಕಪ್​ನಲ್ಲಿ ಮತ್ತೊಮ್ಮೆ ಭಾರತಕ್ಕೆ ಸೋಲಿನ ರುಚಿ ತೋರಿಸಿದ ಶ್ರೀಲಂಕಾ ಚಾಂಪಿಯನ್ ಪಟ್ಟವನ್ನು ಕಾಯ್ದುಕೊಂಡಿತು.
  • 2010: ಸತತ ಎರಡು ಬಾರಿ ಸೋಲುಣಿಸಿದ ಶ್ರೀಲಂಕಾವನ್ನು ಬಗ್ಗು ಬಡಿಯುವ ಮೂಲಕ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು.
  • 2012: ಬಾಂಗ್ಲಾದೇಶ್ ತಂಡವನ್ನು ಫೈನಲ್​ನಲ್ಲಿ ಮಣಿಸಿ ಪಾಕಿಸ್ತಾನ್ 2ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿತು.
  • 2014: ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ಶ್ರೀಲಂಕಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
  • 2016: ಫೈನಲ್​ನಲ್ಲಿ ಬಾಂಗ್ಲಾದೇಶ್ ತಂಡವನ್ನು ಸೋಲಿಸಿದ ಭಾರತ ಮತ್ತೊಮ್ಮೆ ಏಷ್ಯಾ ಚಾಂಪಿಯನ್​ ಪಟ್ಟವನ್ನು ಅಲಂಕರಿಸಿತು.
  • 2018: 14ನೇ ಏಷ್ಯಾಕಪ್​ನಲ್ಲಿ ಭಾರತ-ಬಾಂಗ್ಲಾದೇಶ್ ಮತ್ತೊಮ್ಮೆ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಪಟ್ಟವನ್ನು ಕಾಯ್ದುಕೊಂಡಿತು.

ಅಂದರೆ ಏಷ್ಯಾಕಪ್‌ನಲ್ಲಿ ಭಾರತ 7 ಬಾರಿ, ಶ್ರೀಲಂಕಾ 5 ಬಾರಿ ಮತ್ತು ಪಾಕಿಸ್ತಾನ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅದರೆ ಇದುವರೆಗೆ ಭಾರತ-ಪಾಕಿಸ್ತಾನ್ ಫೈನಲ್​ನಲ್ಲಿ ಮುಖಾಮುಖಿಯಾಗಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ