Team India: ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Asia Cup 2022: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.

Team India: ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 11, 2022 | 2:59 PM

ಏಷ್ಯಾಕಪ್​ಗಾಗಿ (Asia Cup 2022) ಬಿಸಿಸಿಐ  15 ಸದಸ್ಯರ ಭಾರತ ತಂಡವನ್ನು (Team India) ಪ್ರಕಟಿಸಿದೆ. ಆದರೆ ಈ ತಂಡದಲ್ಲಿ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳಿಲ್ಲ ಎಂಬುದು ವಿಶೇಷ. ಅಂದರೆ ತಂಡದ ಆಯ್ಕೆಗೂ ಮುನ್ನ ಬೆನ್ನು ನೋವಿನ ಕಾರಣ ಜಸ್​ಪ್ರೀತ್ ಬುಮ್ರಾ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇನ್ನು ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಗಾಯಗೊಂಡ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಇತ್ತ ಈ ಇಬ್ಬರು ಅನುಭವಿ ವೇಗಿಗಳ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಆಯ್ಕೆ ಸಮಿತಿ ಅರ್ಷದೀಪ್ ಸಿಂಗ್ ಹಾಗೂ ಅವೇಶ್ ಖಾನ್​ರನ್ನು ಆಯ್ಕೆ ಮಾಡಿದೆ.

ಆದರೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವೇಶ್ ಖಾನ್​ರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇದೇ ಕಾರಣದಿಂದಾಗಿ ಅವೇಶ್ ಅವರ ಆಯ್ಕೆಯು ಇದೀಗ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ತಂಡಕ್ಕೆ ಮೂವರು ವೇಗಿಗಳು ಮಾತ್ರ ಆಯ್ಕೆಯಾಗಿದ್ದು, ಹೀಗಾಗಿ ಟೂರ್ನಿಯುದ್ದಕ್ಕೂ ಅವರಲ್ಲೇ ಬದಲಾವಣೆ ಮಾಡಿಕೊಳ್ಳಬೇಕಿದೆ.

ಇದೇ ಕಾರಣದಿಂದಾಗಿ ಇದೀಗ ಯ್ಕೆ ಸಮಿತಿಯು ತಂಡದಲ್ಲಿ ಮಹತ್ವದ ಬದಲಾವಣೆ ತರಲು ಪ್ಲ್ಯಾನ್ ರೂಪಿಸಿದೆ. ಅದರಂತೆ ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿರುವ ದೀಪಕ್ ಚಹರ್ ಅವರನ್ನು ಏಷ್ಯಾಕಪ್ ಸ್ಕ್ವಾಡ್​ಗೆ ಆಯ್ಕೆ ಮಾಡಲು ಚಿಂತಿಸಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಇತ್ತ ದೀಪಕ್ ಚಹರ್ ಅವರು ಗಾಯದ ಕಾರಣ ಕಳೆದ 6 ತಿಂಗಳಿಂದ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಚಹರ್ ಅವರ ಪ್ರದರ್ಶನವನ್ನು ಮೌಲ್ಯಮಾಪನ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಒಂದು ವೇಳೆ ದೀಪಕ್ ಚಹರ್ ಜಿಂಬಾಬ್ವೆ ವಿರುದ್ದ ಅತ್ಯುತ್ತಮ ಪ್ರದರ್ಶನ ನೀಡಿದ್ರೆ ಇತ್ತ ಅವೇಶ್ ಖಾನ್ ಸ್ಥಾನದಲ್ಲಿ ತಂಡಕ್ಕೆ ಆಯ್ಕೆಯಾಗಬಹುದು. ಹಾಗೆಯೇ ಅವೇಶ್ ಖಾನ್ ಮೀಸಲು ಆಟಗಾರನಾಗಿ ಹಿಂಬಡ್ತಿ ಪಡೆಯಬಹುದು.

ಹೀಗಾಗಿ ಜಿಂಬಾಬ್ವೆ ವಿರುದ್ದದ 2 ಪಂದ್ಯಗಳ ಏಕದಿನ ಸರಣಿಯು ದೀಪಕ್ ಚಹರ್ ಅವರ ಏಷ್ಯಾಕಪ್ ಭವಿಷ್ಯವನ್ನು ನಿರ್ಧರಿಸಲಿದೆ. ಹಾಗೆಯೇ ಅವೇಶ್ ಖಾನ್ ತಂಡದಲ್ಲಿ ಉಳಿಯಲಿದ್ದಾರಾ ಎಂಬುದು ಕೂಡ ನಿರ್ಧಾರವಾಗಲಿದೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ ವೇಳೆಯೂ ಆಯ್ಕೆ ಸಮಿತಿ ಇಂತಹದೊಂದು ಮಹತ್ವದ ಬದಲಾವಣೆ ಮಾಡಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದು ಮುಖ್ಯ ತಂಡಕ್ಕೆ ಆಯ್ಕೆಯಾಗಿದ್ದ ಅಕ್ಷರ್ ಪಟೇಲ್ ಅವರನ್ನು ಕೊನೆಯ ಕ್ಷಣದಲ್ಲಿ ಕೈ ಬಿಡಲಾಗಿತ್ತು. ಬದಲಾಗಿ ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದ ಶಾರ್ದೂಲ್ ಠಾಕೂರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಇದೀಗ ಅಂತಹದ್ದೇ ಪ್ರಯೋಗಕ್ಕೆ ಆಯ್ಕೆ ಸಮಿತಿ ಮುಂದಾಗಿದೆ.

“ದೀಪಕ್ ಚಹರ್ ಗಾಯದಿಂದ ಹಿಂತಿರುಗಿರುವ ಕಾರಣ ಅವರನ್ನು ನೇರವಾಗಿ ಏಷ್ಯಾ ಕಪ್‌ಗೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಆಟಗಾರನನ್ನು ಬದಲಾಯಿಸಲು ನಮಗೆ ಅವಕಾಶವಿದೆ. ಜಿಂಬಾಬ್ವೆ ಸರಣಿಯಲ್ಲಿ ದೀಪಕ್ ಚಹರ್ ಮಿಂಚಿದ್ರೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಕಂಡು ಬರಬಹುದು” ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಹೀಗಾಗಿ ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು