Asia Cup 2022: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

| Updated By: ಝಾಹಿರ್ ಯೂಸುಫ್

Updated on: Jul 07, 2022 | 10:25 AM

India vs pakistan: ಆಗಸ್ಟ್ 21ರಿಂದ ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಲಿವೆ. ಇದರಲ್ಲಿ ಯುಎಇ, ಒಮನ್, ನೇಪಾಳ, ಹಾಂಕಾಂಗ್ ಸೇರಿದಂತೆ ಇತರೆ ತಂಡಗಳು ಸೆಣಸಲಿವೆ.

Asia Cup 2022: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್
India vs pakistan
Follow us on

ಟಿ20 ವಿಶ್ವಕಪ್​ 2021 ರ ಹೀನಾಯ ಸೋಲಿನ ಬಳಿಕ ಭಾರತ ತಂಡವು ಪಾಕಿಸ್ತಾನ್ (India vs pakistan) ವಿರುದ್ದ ಯಾವುದೇ ಪಂದ್ಯವಾಡಿಲ್ಲ. ಉಭಯ ದೇಶಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆಯದ ಕಾರಣ, ಮತ್ತೊಮ್ಮೆ ಮುಖಾಮುಖಿಗೆ ಐಸಿಸಿ ಟಿ20 ವಿಶ್ವಕಪ್​ ತನಕ ಕಾಯಲೇಬೇಕಿತ್ತು. ಆದರೆ ಇದರ ನಡುವೆ ಏಷ್ಯಾ ಕಪ್ ನಡೆಸಲು ಏಷ್ಯನ್ ಕ್ರಿಕೆಟ್ ಅಸೋಷಿಯೇಷನ್ ಮುಂದಾಗಿದೆ. ಅದರಂತೆ ಟಿ20 ವಿಶ್ವಕಪ್​ಗೂ ಮುನ್ನವೇ ಏಷ್ಯಾಕಪ್ ನಡೆಯಲಿದೆ. ಈ ಬಾರಿ ಏಷ್ಯಾಕಪ್​ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹೀಗಾಗಿ ಪಾಕಿಸ್ತಾನ್​ ವಿರುದ್ದ ಟಿ20 ವಿಶ್ವಕಪ್​ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಈ ಬಾರಿ ಟೂರ್ನಿಯನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ಆಯೋಜಿಸಲಿದ್ದು, ಅದರ ಮೊದಲ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಶ್ರೀಲಂಕಾ ಕ್ರಿಕೆಟ್ ಸಿಇಒ ಆಶ್ಲೇ ಡಿ ಸಿಲ್ವಾ, ಏಷ್ಯಾ ಕಪ್ ಟಿ20 ಟೂರ್ನಿ ಆಗಸ್ಟ್ 27ರಿಂದ ಆರಂಭವಾಗಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆಗಸ್ಟ್ 28 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ. ಅಂದರೆ ಟಿ20 ವಿಶ್ವಕಪ್​ಗೂ ಮುನ್ನವೇ ಆಗಸ್ಟ್ 28 ರಂದು ಸಾಂಪ್ರದಾಯಿಕ ಎದುರಾಳಿಗಳು ಮತ್ತೆ ಮುಖಾಮುಖಿಯಾಗಲಿದ್ದಾರೆ.

ಇನ್ನು ಆಗಸ್ಟ್ 21ರಿಂದ ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಲಿವೆ. ಇದರಲ್ಲಿ ಯುಎಇ, ಒಮನ್, ನೇಪಾಳ, ಹಾಂಕಾಂಗ್ ಸೇರಿದಂತೆ ಇತರೆ ತಂಡಗಳು ಸೆಣಸಲಿವೆ. ಇವುಗಳಲ್ಲಿ ಒಂದು ತಂಡವು ಪ್ರಧಾನ ಸುತ್ತಿಗೆ ಅರ್ಹತೆ ಪಡೆಯುತ್ತದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಈಗಾಗಲೇ ಪ್ರಧಾನ ಸುತ್ತಿನಲ್ಲಿ ಸ್ಥಾನ ಪಡೆದಿವೆ. 2018ರಲ್ಲಿ ಯುಎಇಯಲ್ಲಿ ಕೊನೆಯ ಬಾರಿ ಏಷ್ಯಾಕಪ್ ಪಂದ್ಯಗಳು ನಡೆದಿದ್ದವು. ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಭಾರತ 7ನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿತು.

ಇದನ್ನೂ ಓದಿ
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಈ ಬಾರಿ ಆಯೋಜನೆಗೊಳ್ಳುತ್ತಿರುವುದು 15ನೇ ಸೀಸನ್ ಏಷ್ಯಾ ಕಪ್. 1984 ರಲ್ಲಿ ಯುಎಇನಲ್ಲಿ ಶುರುವಾದ ಏಷ್ಯಾ ಕಪ್​ಗೆ ಈ ಬಾರಿ ಲಂಕಾ ಕ್ರಿಕೆಟ್ ಮಂಡಳಿ ಆತಿಥ್ಯವಹಿಸುವ ಸಾಧ್ಯತೆಯಿದೆ. ಇನ್ನು ಕಳೆದ ವರ್ಷ ಕೊರೋನಾ ಕಾರಣದಿಂದ ಟೂರ್ನಿಯನ್ನು ನಡೆಸಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೂ ಮುನ್ನ ಟೂರ್ನಿಯನ್ನು ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

ಏಷ್ಯಾ ಕಪ್ ದಾಖಲೆ:
ಇದುವರೆಗೆ ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಿಸಲಾಗುತ್ತಿತ್ತು. ಇದೀಗ ಟಿ20 ಸ್ವರೂಪದಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಇನ್ನು ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಲ್ಲದೇ ಶ್ರೀಲಂಕಾ ತಂಡ 5 ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನ ಎರಡು ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.

ವಿಶೇಷ ಎಂದರೆ ಏಷ್ಯಾಕಪ್​ ಬಳಿಕ ಅಕ್ಟೋಬರ್​ನಲ್ಲಿ ಮತ್ತೆ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಅಂದರೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಅಕ್ಟೋಬರ್ 23 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ದ ಆಡಲಿದೆ. ಅದರಂತೆ ಈ ಬಾರಿ ಭಾರತ-ಪಾಕ್ ಎರಡು ಬಾರಿ ಮುಖಾಮುಖಿಯಾಗುವುದು ಖಚಿತವಾಗಿದೆ.