Asia Cup 2022: ಭಾರತ-ಪಾಕಿಸ್ತಾನ್: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

India vs Pakistan: ಟಿ20 ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅತ್ಯಂತ ಬಲಿಷ್ಠವಾಗಿವೆ. ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಅವರಂತಹ ಬ್ಯಾಟ್ಸ್‌ಮನ್‌ಗಳಿದ್ದಾರೆ.

Asia Cup 2022: ಭಾರತ-ಪಾಕಿಸ್ತಾನ್: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?
IND vs PAK
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 24, 2022 | 1:24 PM

Asia Cup 2022: ಏಷ್ಯಾಕಪ್​ ಇದೇ ಶನಿವಾರದಿಂದ (ಆಗಸ್ಟ್ 27) ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಇನ್ನು ಭಾರತ ತಂಡ ಪಾಕ್ (India vs Pakistan)​ ವಿರುದ್ದದ ಪಂದ್ಯದ ಮೂಲಕ ಭಾನುವಾರ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಮೇಲೆ ಇದೀಗ ಇಡೀ ವಿಶ್ವ ಕ್ರಿಕೆಟ್ ಪ್ರೇಮಿಗಳ ಕಣ್ಣು ನೆಟ್ಟಿದೆ. ಏಕೆಂದರೆ ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾಗೆ ಪಾಕಿಸ್ತಾನ್ ಸೋಲುಣಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ. ಹೀಗಾಗಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇಲ್ಲಿ ಮೇಲ್ನೋಟಕ್ಕೆ ಉಭಯ ತಂಡಗಳು ಬಲಿಷ್ಠವಾಗಿದ್ದರೂ ಏಷ್ಯಾಕಪ್​ನಲ್ಲಿ ಭಾರತ ತಂಡವೇ ಮೇಲುಗೈ ಸಾಧಿಸುತ್ತಾ ಬಂದಿದೆ. ಅಂದರೆ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ 14 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ಪಾಕ್ ತಂಡಕ್ಕೆ 8 ಬಾರಿ ಸೋಲುಣಿಸಿದೆ. ಇನ್ನು ಪಾಕಿಸ್ತಾನ್ ಟೀಮ್ ಇಂಡಿಯಾ ವಿರುದ್ದ ಗೆದ್ದಿದ್ದು ಕೇವಲ 5 ಬಾರಿ ಮಾತ್ರ. ಹಾಗೆಯೇ 1997ರಲ್ಲಿ ಉಭಯ ತಂಡಗಳ ನಡುವಿನ 1 ಪಂದ್ಯ ರದ್ದಾಗಿತ್ತು. ಈ ಅಂಕಿ ಅಂಶಗಳ ಪ್ರಕಾರ ಭಾರತ ತಂಡವೇ ಮೇಲುಗೈ ಹೊಂದಿದ್ದು, ಅತ್ತ ಇದುವೇ ಪಾಕ್ ತಂಡದ ದೊಡ್ಡ ಚಿಂತೆಗೆ ಕಾರಣವಾಗಿದೆ.

ಇದಾಗ್ಯೂ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ದ ಪಾಕಿಸ್ತಾನ್ ಜಯ ಸಾಧಿಸಿತ್ತು. ಇದೇ ಕಾರಣದಿಂದಾಗಿ ಈ ಪಂದ್ಯದ ಮೇಲೆ ಕುತೂಹಲ ಇಮ್ಮಡಿಯಾಗಿದೆ. ಆದರೆ ಈ ಬಾರಿ ಉಭಯ ತಂಡಗಳಲ್ಲೂ ಪ್ರಮುಖ ಆಟಗಾರರು ಕಣಕ್ಕಿಳಿಯುತ್ತಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಉಭಯ ತಂಡಗಳಿಗೂ ಹಿನ್ನಡೆ:

ಟಿ20 ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅತ್ಯಂತ ಬಲಿಷ್ಠವಾಗಿವೆ. ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಅವರಂತಹ ಬ್ಯಾಟ್ಸ್‌ಮನ್‌ಗಳಿದ್ದಾರೆ. ಅತ್ತ ಪಾಕ್ ತಂಡದಲ್ಲಿ ಬಾಬರ್ ಅಜಮ್, ಫಕರ್ ಜಮಾನ್ ಮತ್ತು ಮೊಹಮ್ಮದ್ ರಿಜ್ವಾನ್​ನಂತಹ ಆಟಗಾರರಿದ್ದಾರೆ. ಬಾಬರ್ ಮತ್ತು ರಿಜ್ವಾನ್ ಪ್ರಸ್ತುತ ಟಿ20 ಕ್ರಿಕೆಟ್‌ನ ಅತ್ಯುತ್ತಮ ಆರಂಭಿಕ ಜೋಡಿಗಳಲ್ಲಿ ಒಂದು ಎಂಬುದು ವಿಶೇಷ.

ಆದರೆ ಏಷ್ಯಾಕಪ್‌ನಲ್ಲಿ ಉಭಯ ತಂಡಗಳು ತಮ್ಮ ಪ್ರಮುಖ ವೇಗದ ಬೌಲರ್ ಇಲ್ಲದೆ ಕಣಕ್ಕಿಳಿಯಲಿದೆ. ಅಂದರೆ ಬೆನ್ನು ನೋವಿನ ಸಮಸ್ಯೆಯಿಂದಾಗಿ ಜಸ್ಪ್ರೀತ್ ಬುಮ್ರಾ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ, ಶಾಹೀನ್ ಶಾ ಆಫ್ರಿದಿ ಮೊಣಕಾಲಿನ ಗಾಯದ ಆಡುತ್ತಿಲ್ಲ. ಹೀಗಾಗಿ ಹಿನ್ನಡೆ ವಿಷಯದಲ್ಲೂ ಉಭಯ ತಂಡಗಳ ಸಮಬಲವಾಗಿದೆ ಎನ್ನಬಹುದು.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್