AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ‘ನಂ.1 ಮೇರಾ ಇಂಡಿಯಾ’ ಏಷ್ಯಾ ಕಪ್ ಪ್ರೋಮೋದಲ್ಲಿ ಮಿಂಚಿದ ರೋಹಿತ್, ಕೊಹ್ಲಿ; ವಿಡಿಯೋ

Asia Cup 2022: 'ನಂಬರ್ ಒನ್ ಮೈ ಇಂಡಿಯಾ, ನೌ ಟು ಕಾಂಕರ್ ಏಷ್ಯಾ' ಎಂಬ ಶೀರ್ಷಿಕೆಯ ಪ್ರೋಮೋ ಇದಾಗಿದೆ. ಪ್ರೋಮೋದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರ ಸ್ಟ್ರಾಂಗ್ ಸ್ಟೈಲ್ ಅಭಿಮಾನಿಗಳ ಹೃದಯವನ್ನು ಮುಟ್ಟುತ್ತದೆ.

Asia Cup 2022: ‘ನಂ.1 ಮೇರಾ ಇಂಡಿಯಾ' ಏಷ್ಯಾ ಕಪ್ ಪ್ರೋಮೋದಲ್ಲಿ ಮಿಂಚಿದ ರೋಹಿತ್, ಕೊಹ್ಲಿ; ವಿಡಿಯೋ
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ
TV9 Web
| Edited By: |

Updated on:Jul 23, 2022 | 2:45 PM

Share

ಈ ಬಾರಿಯ ಏಷ್ಯಾ ಕಪ್ (Asia Cup 2022) ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಡೆಯಲಿದೆ. ಮೊದಲು ಈ ಟೂರ್ನಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ (Sri Lanka Crisis) ಏಷ್ಯಾಕಪ್ ಅನ್ನು ಯುಎಇಗೆ ಸ್ಥಳಾಂತರಿಸಬೇಕಾಯಿತು. ಈ ಟೂರ್ನಿ ಆರಂಭವಾಗಲು ಸುಮಾರು ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಈ ಟೂರ್ನಿಯ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದೆ.

ಪಂದ್ಯಾವಳಿಯ ಅಧಿಕೃತ ಪ್ರಸಾರಕ ಸ್ಟಾರ್ ಸ್ಪೋರ್ಟ್ಸ್ ಇದೀಗ ಏಷ್ಯಾ ಕಪ್ 2022 ಪ್ರೋಮೋವನ್ನು ಬಿಡುಗಡೆ ಮಾಡಿದೆ. ‘ನಂಬರ್ ಒನ್ ಮೈ ಇಂಡಿಯಾ, ನೌ ಟು ಕಾಂಕರ್ ಏಷ್ಯಾ’ ಎಂಬ ಶೀರ್ಷಿಕೆಯ ಪ್ರೋಮೋ ಇದಾಗಿದೆ. ಪ್ರೋಮೋದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರ ಸ್ಟ್ರಾಂಗ್ ಸ್ಟೈಲ್ ಅಭಿಮಾನಿಗಳ ಹೃದಯವನ್ನು ಮುಟ್ಟುತ್ತದೆ.

ಇದನ್ನೂ ಓದಿ
Image
Asia Cup2022: ಏಷ್ಯಾ ಕಪ್ ಆಯೋಜನೆಗೆ ಅಧಿಕೃತ ಸ್ಥಳ ನಿಗದಿ! ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
ಏಷ್ಯಾಕಪ್‌ಗೂ ಮುನ್ನ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ ಭಾರತ; ಏಕದಿನ ಸರಣಿಯ ವೇಳಾಪಟ್ಟಿ ಹೀಗಿದೆ
Image
Asia Cup 2022: ಶ್ರೀಲಂಕಾ ಏಷ್ಯಾಕಪ್ ಆತಿಥ್ಯ ವಹಿಸಬೇಕೆಂದರೆ ಈ ಸರಣಿ ಯಶಸ್ವಿಯಾಗಲೇಬೇಕು..!

ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ

ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿರುವ ಏಷ್ಯಾ ಕಪ್ 2022ರಲ್ಲಿ ಆರು ತಂಡಗಳು ಭಾಗವಹಿಸಲಿವೆ. ಶ್ರೀಲಂಕಾ, ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಈಗಾಗಲೇ ಟೂರ್ನಿಗೆ ಅರ್ಹತೆ ಪಡೆದಿವೆ. ಆದ್ದರಿಂದ ಅರ್ಹತಾ ಪಂದ್ಯಾವಳಿಯ ನಂತರ ಆರನೇ ಮತ್ತು ಅಂತಿಮ ತಂಡವನ್ನು ನಿರ್ಧರಿಸಲಾಗುತ್ತದೆ. ಆರು ತಂಡಗಳ ಅರ್ಹತಾ ಪಂದ್ಯಾವಳಿಯು ಆಗಸ್ಟ್ 20 ರಂದು ಹಾಂಗ್ ಕಾಂಗ್, ಕುವೈತ್, ಸಿಂಗಾಪುರ್ ಮತ್ತು ಯುಎಇಯೊಂದಿಗೆ ಪ್ರಾರಂಭವಾಗಲಿದೆ. ಭಾರತ-ಪಾಕಿಸ್ತಾನ ಪಂದ್ಯ ಟೂರ್ನಿಯ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ. ಎರಡೂ ದೇಶಗಳ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಮೊದಲ ಪಂದ್ಯಾವಳಿಯನ್ನು 1984 ರಲ್ಲಿ ಆಡಲಾಯಿತು

ಏಷ್ಯಾಕಪ್ ಇತಿಹಾಸದ ಬಗ್ಗೆ ಮಾತನಾಡುವುದಾದರೆ, ಏಷ್ಯಾಕಪ್ 1984 ರಲ್ಲಿ ಪ್ರಾರಂಭವಾಯಿತು. ಇದುವರೆಗೆ ಈ ಪಂದ್ಯಾವಳಿಯನ್ನು 14 ಬಾರಿ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಇದುವರೆಗೆ 7 ಬಾರಿ ಈ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಗೆದ್ದಿದೆ. ಇದಲ್ಲದೇ ಶ್ರೀಲಂಕಾ ಎರಡು ಬಾರಿ ಹಾಗೂ ಪಾಕಿಸ್ತಾನ ಎರಡು ಬಾರಿ ಏಷ್ಯಾಕಪ್ ಟ್ರೋಫಿ ಗೆದ್ದಿದೆ. ಪಂದ್ಯಾವಳಿಯ ಎಲ್ಲಾ 14 ಆವೃತ್ತಿಗಳಲ್ಲಿ ಶ್ರೀಲಂಕಾ ತಂಡವು ಭಾಗವಹಿಸಿದೆ. ಆದರೆ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು 13 ಬಾರಿ ಈ ಟೂರ್ನಿಯಲ್ಲಿ ಪಾಲ್ಗೊಂಡಿವೆ. ಟೀಂ ಇಂಡಿಯಾ ಪ್ರಸ್ತುತ ಏಷ್ಯಾಕಪ್‌ನ ಹಾಲಿ ಚಾಂಪಿಯನ್ ಆಗಿದೆ.

Published On - 2:37 pm, Sat, 23 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ