AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?

Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?
Kohli-Gayan-Rohit
TV9 Web
| Edited By: |

Updated on: Aug 30, 2022 | 11:56 AM

Share

Asia Cup 2022: ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2022 ರ ತಮ್ಮ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಟೀಮ್ ಇಂಡಿಯಾ ಭರ್ಜರಿ ಶುಭಾರಂಭ ಮಾಡಿದೆ. ಈ ವಿಶೇಷ ಪಂದ್ಯವನ್ನು ಭಾರತ-ಪಾಕಿಸ್ತಾನ್ ಅಭಿಮಾನಿಗಳಲ್ಲದೇ ಶ್ರೀಲಂಕಾ ಫ್ಯಾನ್ಸ್ ಕೂಡ ಕಣ್ತುಂಬಿಕೊಂಡಿದ್ದರು. ಅದರಲ್ಲೂ ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡುವ ಶ್ರೀಲಂಕಾದ ಅಭಿಮಾನಿ ಗಯಾನ್ ಸೇನಾನಾಯಕ ಇಂಡೋ-ಪಾಕ್ ಪಂದ್ಯವನ್ನು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರನ್ನು ಭೇಟಿ ಮಾಡುವ ಅವಕಾಶವನ್ನೂ ಸಹ ಪಡೆದರು.

ವಿಕಲಚೇತನರಾಗಿರುವ ಗಯಾನ್ ಸೇನಾನಾಯಕ ಅಪ್ಪಟ ಕ್ರಿಕೆಟ್ ಅಭಿಮಾನಿ. ಶ್ರೀಲಂಕಾ ಪಂದ್ಯಗಳ ವೇಳೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಗಯಾನ್ ಇದೀಗ ಏಷ್ಯಾಕಪ್​ ವೀಕ್ಷಿಸಲು ದುಬೈಗೆ ಬಂದಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ತಮ್ಮ ನೆಚ್ಚಿನ ಇಬ್ಬರು ಆಟಗಾರರನ್ನು ಜೊತೆಯಾಗಿ ಭೇಟಿ ಮಾಡುವ ಅವಕಾಶ ಪಡೆದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸೇನಾನಾಯಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅಪರೂಪದ ಫೋಟೋ ಎನಿಸಿಕೊಂಡಿರುವ ಈ ಚಿತ್ರದಲ್ಲಿ ಸೇನಾನಾಯಕನ ಎರಡು ಬದಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂತು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಸೇನಾನಾಯಕ ಅವರ ಫೋಟೋ ಈ ಹಿಂದೊಮ್ಮೆ ಕೂಡ ವೈರಲ್ ಆಗಿತ್ತು. 2017 ರಲ್ಲಿ ಮುಂಬೈನಲ್ಲಿ ವಿರಾಟ್ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಅವರ ವಿವಾಹ ಆರತಕ್ಷತೆಯಲ್ಲಿ ಸೇನಾನಾಯಕ ಭಾಗವಹಿಸಿದ್ದರು. ಆ ಫೋಟೋ ಮೂಲಕ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಗಯಾನ್ ಸೇನಾನಾಯಕ ಪರಿಚಿತರಾಗಿದ್ದರು.

ಇದೀಗ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರೊಂದಿಗೆ ಕೂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಗಯಾನ್ ಸೇನಾನಾಯಕ ಹೊಸ ಅಲೆ ಎಬ್ಬಿಸಿದ್ದಾರೆ.

ಇನ್ನು ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ. ಇನ್ನು ಮುಂದಿನ ಪಂದ್ಯದಲ್ಲಿ ಲಂಕಾ ಬಾಂಗ್ಲಾದೇಶ್ ವಿರುದ್ದ ಗೆದ್ದರೆ ಮಾತ್ರ ಮುಂದಿನ ಹಂತಕ್ಕೇರುವ ಅವಕಾಶ ಪಡೆಯಲಿದೆ. ಅಂದರೆ ಗಯಾನ್ ಸೇನಾನಾಯಕ ಅವರ ನಿರೀಕ್ಷೆಯಂತೆ ಭಾರತ-ಶ್ರೀಲಂಕಾ ಮುಖಾಮುಖಿಯಾಗಬೇಕಿದ್ದರೆ, ಸೂಪರ್- 4 ಹಂತಕ್ಕೆ ಲಂಕಾ ತಂಡ ಪ್ರವೇಶಿಸಬೇಕು. ಹೀಗಾಗಿ ಶ್ರೀಲಂಕಾ ತಂಡಕ್ಕೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​