Asia Cup 2022: ಪಾಕ್​ಗಿಂತ ಮುಂದಿರುವ ಟೀಮ್ ಇಂಡಿಯಾ: 2 ಎಸೆತಗಳಿಂದ ಫೈನಲ್ ಮಿಸ್..!

Asia Cup 2022: ಸೆಪ್ಟೆಂಬರ್ 11 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿವೆ.

Asia Cup 2022: ಪಾಕ್​ಗಿಂತ ಮುಂದಿರುವ ಟೀಮ್ ಇಂಡಿಯಾ: 2 ಎಸೆತಗಳಿಂದ ಫೈನಲ್ ಮಿಸ್..!
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 10, 2022 | 11:00 AM

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಆಡಿದ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಶ್ರೀಲಂಕಾ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ 3 ರಲ್ಲಿ 2 ಜಯ ದಾಖಲಿಸಿರುವ ಪಾಕಿಸ್ತಾನ್ ತಂಡವಿದೆ. ಇನ್ನು 3ನೇ ಸ್ಥಾನದೊಂದಿಗೆ ಟೀಮ್ ಇಂಡಿಯೇ ಏಷ್ಯಾಕಪ್​ ಅಭಿಯಾನ ಅಂತ್ಯಗೊಳಿಸಿದರೆ, 4ನೇ ಸ್ಥಾನಕ್ಕೆ ಅಫ್ಘಾನಿಸ್ತಾನ್ ತಂಡ ತೃಪ್ತಿಪಟ್ಟುಕೊಂಡಿದೆ. ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದ್ದರೂ ರನ್​ ರೇಟ್​ನಲ್ಲಿ ಪಾಕಿಸ್ತಾನ್ ತಂಡಕ್ಕಿಂತ ಮುಂದಿರುವುದು ವಿಶೇಷ.

ಸೂಪರ್- 4 ಹಂತದಲ್ಲಿ  3 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು 2 ಜಯ ಸಾಧಿಸಿ -0.279 ನೆಟ್​ ರನ್​ ಪಡೆದುಕೊಂಡಿದೆ. ಅದೇ ಮೂರು ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಹೊಂದಿರುವುದು +1.607 ನೆಟ್ ರನ್ ರೇಟ್. ಅಂದರೆ ಇಲ್ಲಿ ಟೀಮ್ ಇಂಡಿಯಾ ಹಾಗೂ ಪಾಕ್ ನಡುವಣ ನೆಟ್ ರನ್ ರೇಟ್ ಅಜಗಜಾಂತರ ವ್ಯತ್ಯಾಸವಿದೆ. ಆದರೆ ಪಾಯಿಂಟ್​ನಲ್ಲಿ ಪಾಕಿಸ್ತಾನ್ ತಂಡವು 4 ಅಂಕಗಳಿಸಿರುವ ಪರಿಣಾಮ 2ನೇ ಸ್ಥಾನ ಅಲಂಕರಿಸಿದೆ. ಇಲ್ಲಿ ಟೀಮ್ ಇಂಡಿಯಾ ಪಾಲಿಗೆ ಮುಳುವಾಗಿದ್ದು ಅಫ್ಘಾನಿಸ್ತಾನ್ ತಂಡದ ಸೋಲು ಎಂಬುದು ಗಮನಾರ್ಹ.

ಅಂದರೆ ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಮುಖಾಮುಖಿಯಲ್ಲಿ ಅಫ್ಘಾನ್ ಗೆದ್ದಿದ್ದರೆ ಟೀಮ್ ಇಂಡಿಯಾಗೆ ಫೈನಲ್ ಪ್ರವೇಶಿಸುವ ಅವಕಾಶ ದೊರೆಯುತ್ತಿತ್ತು. ಆದರೆ ಕೇವಲ 130 ರನ್​ಗಳ ಟಾರ್ಗೆಟ್ ನೀಡಿ ಭರ್ಜರಿ ಪೈಪೋಟಿ ನೀಡಿದ್ದ ಅಫ್ಘಾನಿಸ್ತಾನ್ ತಂಡವು ಅಂತಿಮ ಓವರ್​ನಲ್ಲಿ ಶರಣಾಗಿತ್ತು. ಅದರಲ್ಲೂ ಕೊನೆಯ ಓವರ್​ನಲ್ಲಿ 11 ರನ್​ಗಳ ಟಾರ್ಗೆಟ್ ಪಡೆದಿದ್ದ ಪಾಕಿಸ್ತಾನ್ ತಂಡಕ್ಕೆ 2 ಎಸೆತಗಳಲ್ಲಿ ಎರಡು ಸಿಕ್ಸ್ ಸಿಡಿಸುವ ಮೂಲಕ ನಸೀಮ್ ಶಾ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟಿದ್ದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಒಂದು ವೇಳೆ ಆ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ರೋಚಕ ಜಯ ಸಾಧಿಸಿದ್ದರೂ, ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುತ್ತಿತ್ತು ಎಂಬುದಕ್ಕೆ ಪ್ರಸ್ತುತ ಪಾಯಿಂಟ್ಸ್ ಟೇಬಲೇ ಸಾಕ್ಷಿ. ಅಂದರೆ ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ್ ತಂಡಗಳನ್ನು ಮಣಿಸಿ ಪಾಕಿಸ್ತಾನ್ ಹೆಚ್ಚಿನ ಪಾಯಿಂಟ್ ಮೂಲಕ ಇದೀಗ ಫೈನಲ್ ಪ್ರವೇಶಿಸಿದೆ.

ಅಫ್ಘಾನಿಸ್ತಾನ್ ವಿರುದ್ಧ ಪಾಕಿಸ್ತಾನ್ ಸೋತಿದ್ದರೆ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ್ ಸಮ ಅಂಕಗಳನ್ನು ಪಡೆಯುತ್ತಿತ್ತು. ಅಲ್ಲದೆ ಹೆಚ್ಚು ನೆಟ್ ರನ್​ ರೇಟ್​ ಹೊಂದಿರುವ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಫೈನಲ್ ಆಡುವ ಅವಕಾಶ ಪಡೆಯುತ್ತಿತ್ತು.

ಇದೀಗ ಸೆಪ್ಟೆಂಬರ್ 11 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿವೆ. ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದು ಯಾರು ಚಾಂಪಿಯನ್ ಪಟ್ಟ ಅಲಂಕರಿಸಲಿದ್ದಾರೆ ಕಾದು ನೋಡಬೇಕಿದೆ.

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ