Asia Cup 2022: ಏಷ್ಯಾಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದೆ. ಗ್ರೂಪ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ, ಪಾಕಿಸ್ತಾನ್, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಸೂಪರ್-4 ಹಂತಕ್ಕೇರಿದೆ. ಸೂಪರ್-4 ಹಂತದಲ್ಲಿ ಟೀಮ್ ಇಂಡಿಯಾ (Team India) ಮೊದಲ ಪಂದ್ಯದಲ್ಲೇ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಗಾಯಗೊಂಡಿರುವ ರವೀಂದ್ರ ಜಡೇಜಾ (Ravindra Jadeja) ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಮತ್ತೋರ್ವ ಆಲ್ರೌಂಡರ್ ಕಣಕ್ಕಿಳಿಯಬಹುದು.
ಇಲ್ಲಿ ಸ್ಪಿನ್ ಆಲ್ರೌಂಡರ್ಗಳಾಗಿ ತಂಡದಲ್ಲಿ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಇದ್ದಾರೆ. ಇವರಲ್ಲಿ ಒಬ್ಬರಿಗೆ ಸ್ಥಾನ ಖಚಿತ ಎನ್ನಬಹುದು. ದೀಪಕ್ ಹೂಡಾ ಉತ್ತಮ ಫಾರ್ಮ್ನಲ್ಲಿರುವ ಕಾರಣ ಅವರಿಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೂಡಾ ಸ್ಪಿನ್ ಬೌಲಿಂಗ್ ಕೂಡ ಮಾಡಬಲ್ಲರು. ಅಲ್ಲದೆ ಅತ್ಯುತ್ತಮ ಫೀಲ್ಡರ್ ಕೂಡ ಹೌದು. ಹೀಗಾಗಿ ಪಾಕ್ ವಿರುದ್ದ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಹೂಡಾರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಇನ್ನು ಅವೇಶ್ ಖಾನ್ ಕೂಡ ಆಡುವುದು ಅನುಮಾನ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅವೇಶ್ ಶನಿವಾರ ಅಭ್ಯಾಸದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರ ಬದಲು ಅಶ್ವಿನ್ಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚು. ಈ ಎರಡು ಬದಲಾವಣೆ ಹೊರತುಪಡಿಸಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಜಯ ಸಾಧಿಸಿತ್ತು. ಹೀಗಾಗಿ ಅದೇ ಬಳಗವನ್ನೇ ಈ ಬಾರಿ ಕೂಡ ಕಣಕ್ಕಿಳಿಸಬಹುದು. ಅದರಂತೆ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ದೀಪಕ್ ಹೂಡಾಗೆ ಚಾನ್ಸ್ ಸಿಗಬಹುದು. ಇನ್ನು ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್ ಕಣಕ್ಕಿಳಿಯಬಹುದು. ಹೀಗಾಗಿ ರಿಷಭ್ ಪಂತ್ ಹೊರಗುಳಿಯಬೇಕಾಗಿ ಬರಬಹುದು.
ಹಾಗೆಯೇ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಹಾಗೂ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ) , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ) , ಹಾರ್ದಿಕ್ ಪಾಂಡ್ಯ , ದೀಪಕ್ ಹೂಡಾ, ಭುವನೇಶ್ವರ್ ಕುಮಾರ್ , ಅಶ್ವಿನ್ , ಯುಜ್ವೇಂದ್ರ ಚಹಾಲ್ , ಅರ್ಷದೀಪ್ ಸಿಂಗ್.