AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಜಾಲಿ ಮೂಡ್​ನಲ್ಲಿ ಟೀಮ್ ಇಂಡಿಯಾ: ಮಸ್ತ್ ಮಜಾ ವಿಡಿಯೋ ವೈರಲ್

Asia Cup 2022: ಭಾರತ ತಂಡವು ಸೂಪರ್-4 ಹಂತದ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ವಿರುದ್ಧ ಆಡಲಿದೆ.

Team India: ಜಾಲಿ ಮೂಡ್​ನಲ್ಲಿ ಟೀಮ್ ಇಂಡಿಯಾ: ಮಸ್ತ್ ಮಜಾ ವಿಡಿಯೋ ವೈರಲ್
Team India players
TV9 Web
| Edited By: |

Updated on:Sep 03, 2022 | 11:03 AM

Share

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ಆಟಗಾರರು ಮಸ್ತ್ ಮಜಾದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲ ಸುತ್ತಿನಲ್ಲಿ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-4 ಹಂತಕ್ಕೇರಿದ ಟೀಮ್ ಇಂಡಿಯಾ ಆ ಬಳಿಕ ರಿಲ್ಯಾಕ್ಸ್ ಮೂಡ್​ಗೆ ಜಾರಿತು. ಅಲ್ಲದೆ ದುಬೈ ಬೀಚ್​ನಲ್ಲಿ ಸಖತ್ ಎಂಜಾಯ್ ಮಾಡಿದರು. ಟೀಮ್ ಮ್ಯಾನೇಜ್ಮೆಂಟ್ ನೀಡಿದ್ದ ಒಂದು ದಿನದ ರಜೆಯ ಅವಧಿಯಲ್ಲಿ ಟೀಮ್ ಟೀಮ್ ಇಂಡಿಯಾ ಆಟಗಾರು ದುಬೈ ಸಮುದ್ರ ತೀರದಲ್ಲಿ ಬೀಚ್ ಸರ್ಫಿಂಗ್, ಬೀಚ್ ವಾಲಿಬಾಲ್, ರೈಡಿಂಗ್‌, ಬೋಟಿಂಗ್, ಆಕ್ವಾ ಸೈಕಲಿಂಗ್ ಮಾಡುವ ಮೂಲಕ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡರು.

ವಿರಾಟ್ ಕೊಹ್ಲಿ ಸರ್ಫಿಂಗ್ ಮಾಡಿದರೆ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೋಟಿಂಗ್​ನಲ್ಲಿ ಹೆಚ್ಚಿನ ಸಮಯ ಕಳೆದರು. ಹಾಗೆಯೇ ಅರ್ಷದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯ್ ಕೂಡ ಸರ್ಫಿಂಗ್ ಮಾಡುತ್ತಾ ಎಂಜಾಯ್ ಮಾಡಿದರು. ಇನ್ನು ಯುಜ್ವೇಂದ್ರ ಚಹಾಲ್ ಹಾಗೂ ಅಶ್ವಿನ್ ಆಕ್ವಾ ಸೈಕಲಿಂಗ್ ಮೂಲಕ ಸಮುದ್ರ ತೀರದಲ್ಲಿ ಸುತ್ತಾಡಿದರು. ಮತ್ತೊಂದೆಡೆ ಕೆಲ ಆಟಗಾರರು ಬೀಚ್ ವಾಲಿಬಾಲ್ ಆಡುವ ಮೂಲಕ ಪರಸ್ಪರ ಸೆಣಸಾಡಿಸಿದರು. ಹೀಗೆ ಒಂದು ದಿನದ ಫುಲ್ ಎಂಜಾಯ್ ಬಳಿಕ ಇದೀಗ ಟೀಮ್ ಇಂಡಿಯಾ ಆಟಗಾರರು ಅಭ್ಯಾಸಕ್ಕೆ ಮರಳಿದ್ದಾರೆ.

ಇನ್ನು ಟೀಮ್ ಇಂಡಿಯಾದ ಈ ಜಾಲಿ ಮೂಡ್​ನ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಈ ಫನ್ ಟೈಮ್ ವಿಡಿಯೋಗೆ ಮೆಚ್ಚುಗೆಗಳನ್ನು ಸೂಚಿಸುತ್ತಿದ್ದಾರೆ.

ಭಾರತ ತಂಡವು ಸೂಪರ್-4 ಹಂತದ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ವಿರುದ್ಧ ಆಡಲಿದೆ. ಈ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬಹುದು. ಹೀಗಾಗಿ ಮುಂದಿನ 3 ಪಂದ್ಯಗಳು ಭಾರತ ತಂಡದ ಪಾಲಿಗೆ ತುಂಬಾ ಮಹತ್ವದ ಪಂದ್ಯಗಳಾಗಿವೆ.

ಸೂಪರ್-4 ವೇಳಾಪಟ್ಟಿ ಹೀಗಿದೆ:

  • ಸೆಪ್ಟೆಂಬರ್ 3 – ಅಫ್ಘಾನಿಸ್ತಾನ್ vs ಶ್ರೀಲಂಕಾ– ಶಾರ್ಜಾ
  • ಸೆಪ್ಟೆಂಬರ್ 4 – ಭಾರತ vs ಪಾಕಿಸ್ತಾನ– ದುಬೈ
  • ಸೆಪ್ಟೆಂಬರ್ 6 – ಶ್ರೀಲಂಕಾ vs ಭಾರತ– ದುಬೈ
  • ಸೆಪ್ಟೆಂಬರ್ 7 – ಪಾಕಿಸ್ತಾನ vs ಅಫ್ಘಾನಿಸ್ತಾನ್ – ದುಬೈ
  • ಸೆಪ್ಟೆಂಬರ್ 8 – ಭಾರತvs ಅಫ್ಘಾನಿಸ್ತಾನ್ – ದುಬೈ
  • ಸೆಪ್ಟೆಂಬರ್ 9 – ಶ್ರೀಲಂಕಾ vs ಪಾಕಿಸ್ತಾನ– ದುಬೈ
  • ಸೆಪ್ಟೆಂಬರ್ 11 – ಫೈನಲ್ ಪಂದ್ಯ– ದುಬೈ

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು:  ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 10:59 am, Sat, 3 September 22

Follow Us
TV9 Web
TV9 Web

TV9 Kannada

Read More
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ