AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್ ಟೂರ್ನಮೆಂಟ್​: ಟಿಕೆಟ್ ಬುಕ್​ ಮಾಡುವುದು ಹೇಗೆ? ಇಲ್ಲಿದೆ ಗೈಡ್​

Asia Cup 2022: ಏಷ್ಯಾಕಪ್​ ಪಂದ್ಯಗಳ ಟಿಕೆಟ್ ಮಾರಾಟವು ಆಗಸ್ಟ್ 15 ರಿಂದ ಪ್ರಾರಂಭವಾಗುತ್ತಿದೆ ಎಂದು ಎಸಿಸಿ ಶನಿವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.

Asia Cup 2022: ಏಷ್ಯಾಕಪ್ ಟೂರ್ನಮೆಂಟ್​: ಟಿಕೆಟ್ ಬುಕ್​ ಮಾಡುವುದು ಹೇಗೆ? ಇಲ್ಲಿದೆ ಗೈಡ್​
TV9 Web
| Updated By: Digi Tech Desk|

Updated on:Sep 06, 2022 | 10:27 AM

Share

ಆಗಸ್ಟ್ 27 ರಿಂದ ಬಹುನಿರೀಕ್ಷಿತ ಏಷ್ಯಾಕಪ್ (Asia Cup 2022) ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳ ಕಾಳಗದ ಮೇಲೆ ಇಡೀ ವಿಶ್ವದ ಕಣ್ಣು ನೆಟ್ಟಿದೆ. ಆ. 28 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ (India and Pakistan) ತಂಡಗಳು ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಜಗತ್ತಿನ ಅಭಿಮಾನಿಗಳೆಲ್ಲರೂ ಈ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಈ ಎರಡು ತಂಡಗಳ ನಡುವೆ ಪಂದ್ಯ ನಡೆದಾಗಲೆಲ್ಲ ಕ್ರೀಡಾಂಗಣ ವೀಕ್ಷಕರಿಮದ ತುಂಬಿ ತುಳುಕುತ್ತಿರುತ್ತದೆ. ಹೀಗಾಗಿ ಈ ಎರಡು ತಂಡಗಳ ಪಂದ್ಯವನ್ನು ಸ್ಟೇಡಿಯಂನಲ್ಲಿ ವೀಕ್ಷಿಸಲು ಬಯಸುವ ಪ್ರೇಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಅದೆನೆಂದರೆ, ಈ ಪಂದ್ಯದ ಟಿಕೆಟ್‌ಗಳ ಮಾರಾಟ ಆಗಸ್ಟ್ 15 ರಿಂದ ಅಂದರೆ ಸೋಮವಾರದಿಂದ ಪ್ರಾರಂಭವಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಟ್ವೀಟ್‌ನಲ್ಲಿ ಈ ಮಾಹಿತಿ ನೀಡಿದ್ದು, ಈ ಟೂರ್ನಿಯ ಮೊದಲ ಪಂದ್ಯ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಈಗಾಗಲೇ ಈ ಟೂರ್ನಿಗೆ ಅರ್ಹತೆ ಪಡೆದಿವೆ. ಮತ್ತೊಂದೆಡೆ, ಯುಎಇ, ಕುವೈತ್, ಸಿಂಗಾಪುರ ಮತ್ತು ಹಾಂಗ್ ಕಾಂಗ್ ತಂಡಗಳು ಒಮಾನ್‌ನಲ್ಲಿ ಅರ್ಹತಾ ಪಂದ್ಯಗಳನ್ನು ಆಡಲಿವೆ.

ಇದನ್ನೂ ಓದಿ
Image
Asia Cup 2022: ಏಷ್ಯಾಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ; ಯಾರಿಗೆ ಗೆಲುವು? ಪಾಂಟಿಂಗ್ ನುಡಿದ್ರು ಭವಿಷ್ಯ
Image
IND vs PAK: ಏಷ್ಯಾಕಪ್​ನಲ್ಲಿ ಪಾಕ್​ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿರಲಿದೆ
Image
Asia Cup 2022: ಏಷ್ಯಾಕಪ್​ನಲ್ಲಿ ಬರೋಬ್ಬರಿ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕಿಸ್ತಾನ..! ಹೇಗೆ ಗೊತ್ತಾ?

15 ರಿಂದ ಆರಂಭ

ಏಷ್ಯಾಕಪ್​ ಪಂದ್ಯಗಳ ಟಿಕೆಟ್ ಮಾರಾಟವು ಆಗಸ್ಟ್ 15 ರಿಂದ ಪ್ರಾರಂಭವಾಗುತ್ತಿದೆ ಎಂದು ಎಸಿಸಿ ಶನಿವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.

ಟೂರ್ನಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು

ಅಂದಹಾಗೆ, ಈ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಶ್ರೀಲಂಕಾದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಈ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರಿಸಲು ಸಂಘಟನಾ ಸಮಿತಿ ನಿರ್ಧರಿಸಿದೆ. “ಶ್ರೀಲಂಕಾದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದ ಎಸಿಸಿ ಸಾಕಷ್ಟು ಚರ್ಚೆಯ ನಂತರ ಪಂದ್ಯಾವಳಿಯನ್ನು ಶ್ರೀಲಂಕಾದಿಂದ ಯುಎಇಗೆ ಸ್ಥಳಾಂತರಿಸುವ ನಿರ್ಧಾರಕ್ಕೆ ಬಂದಿತ್ತು.

ಭಾರತ ಜಿಂಬಾಬ್ವೆ ಪ್ರವಾಸದಲ್ಲಿದೆ

ಏಷ್ಯಾಕಪ್‌ಗೂ ಮುನ್ನ ಭಾರತ ತಂಡ ಜಿಂಬಾಬ್ವೆ ಪ್ರವಾಸದಲ್ಲಿದೆ. ಇಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಭಾರತ ತನ್ನ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಪ್ರವಾಸದಲ್ಲಿಲ್ಲ. ಕೆಎಲ್ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ. ಈ ಸರಣಿಯಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಹಿಂದೆ ಕೆಎಲ್ ರಾಹುಲ್ ಗಾಯಗೊಂಡಿದ್ದರಿಂದ ಅವರನ್ನು ತಂಡಕ್ಕೆ ಸೇರಿಸಿಕೊಳ್ಳದೆ ಶಿಖರ್ ಧವನ್ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ರಾಹುಲ್ ಫಿಟ್ ಆಗಿದ್ದುರಿಂದ ಈ ಪ್ರವಾಸಕ್ಕೆ ಆಯ್ಕೆ ಮಾಡಿ ತಂಡದ ನಾಯಕತ್ವದ ಜವಬ್ದಾರಿವಹಿಸಲಾಗಿದೆ.

ಏಷ್ಯಾಕಪ್‌ಗಾಗಿ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್.

Published On - 4:18 pm, Sun, 14 August 22