Viral Video: ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ್-ಪಾಕಿಸ್ತಾನ್ ಫ್ಯಾನ್ಸ್​ ಹೊಡೆದಾಟ

Afghanistan - Pakistan: ಉಭಯ ತಂಡಗಳ ಅಭಿಮಾನಿಗಳ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಇದೀಗ ಪಾಕ್-ಅಫ್ಘಾನ್ ಅಭಿಮಾನಿಗಳ ಕಿತ್ತಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Viral Video: ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ್-ಪಾಕಿಸ್ತಾನ್ ಫ್ಯಾನ್ಸ್​ ಹೊಡೆದಾಟ
Pakistan vs Afghanistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 08, 2022 | 11:54 AM

Asia Cup 2022: ಏಷ್ಯಾಕಪ್​ನ ಸೂಪರ್​-4 ಹಂತದ 5ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮೈದಾನದಲ್ಲಿ ಪಾಕಿಸ್ತಾನ್-ಅಫ್ಘಾನಿಸ್ತಾನ್ (Pakistan vs Afghanistan) ಆಟಗಾರರು ಕಾಳಗಕ್ಕೆ ಇಳಿದರೆ, ಸ್ಟೇಡಿಯಂನಲ್ಲಿ ಉಭಯ ತಂಡಗಳ ಅಭಿಮಾನಿಗಳು ಕೂಡ ಹೊಡೆದಾಡಿಕೊಂಡರು. ಭಾರೀ ರೋಚಕತೆಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 6 ವಿಕೆಟ್ ನಷ್ಟಕ್ಕೆ 129 ರನ್​ ಕಲೆಹಾಕಿತ್ತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಅಂತಿಮ ಹಂತದಲ್ಲಿ ಆಘಾತ ನೀಡುವಲ್ಲಿ ಅಫ್ಘಾನಿಸ್ತಾನ್ ಬೌಲರ್​ಗಳು ಯಶಸ್ವಿಯಾಗಿದ್ದರು.

ಅದರಂತೆ 19 ಓವರ್ ಮುಕ್ತಾಯದ ವೇಳೆಗೆ 9 ವಿಕೆಟ್ ಉರುಳಿಸಿದ ಅಫ್ಘಾನ್ ತಂಡವು ಗೆಲ್ಲುವ ನಿರೀಕ್ಷೆಯಲ್ಲಿತ್ತು. ಪಾಕಿಸ್ತಾನ್ ತಂಡಕ್ಕೆ ಅಂತಿಮ ಓವರ್​ನಲ್ಲಿ  11 ರನ್​ಗಳ ಅವಶ್ಯಕತೆಯಿತ್ತು. ಇತ್ತ ಅಫ್ಘಾನಿಸ್ತಾನ್ ತಂಡಕ್ಕೆ ಕೇವಲ 1 ಒಂದು ವಿಕೆಟ್ ಬೇಕಿತ್ತು. ಆದರೆ ಕೊನೆಯ ಓವರ್​ನ ಮೊದಲೆರಡು ಎಸೆತಗಳಲ್ಲಿಯೇ ಭರ್ಜರಿ ಸಿಕ್ಸ್​ಗಳನ್ನು ಸಿಡಿಸುವ ಮೂಲಕ ನಸೀಮ್ ಶಾ ಪಾಕಿಸ್ತಾನ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಇದರ ನಡುವೆ ಅಫ್ಘಾನ್ ಅಭಿಮಾನಿಗಳನ್ನು ಹೀಯಾಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಅಫ್ಘಾನಿಸ್ತಾನ್ ತಂಡದ ಕೆಲ ಅಭಿಮಾನಿಗಳು ಸ್ಟೇಡಿಯಂನಲ್ಲಿನ ಕುರ್ಚಿಗಳನ್ನು ಕಿತ್ತು ಪಾಕ್ ಫ್ಯಾನ್ಸ್​ ಮೇಲೆಸೆದರು. ಅಲ್ಲದೆ ಕೆಲ ಅಭಿಮಾನಿಗಳೊಂದಿಗೆ ಹೊಡೆದಾಡಿಕೊಂಡರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದರಿಂದ ಉಭಯ ತಂಡಗಳ ಅಭಿಮಾನಿಗಳ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಇದೀಗ ಪಾಕ್-ಅಫ್ಘಾನ್ ಅಭಿಮಾನಿಗಳ ಕಿತ್ತಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಅನೇಕರು ಸೋಲು-ಗೆಲುವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಳ್ಳುವಂತೆ ಪ್ರತಿಕ್ರಿಯಿಸಿದ್ದಾರೆ.

ಅಂದಹಾಗೆ ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ಕ್ರಿಕೆಟ್ ಪ್ರೇಮಿಗಳು ಹೊಡೆದಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019 ರ ವಿಶ್ವಕಪ್​ ವೇಳೆಯೂ ಅಫ್ಘಾನಿಸ್ತಾನ್ ಫ್ಯಾನ್ಸ್ ಹಾಗೂ ಪಾಕ್ ಅಭಿಮಾನಿಗಳು ಸ್ಟೇಡಿಯಂನಲ್ಲೇ ಕೈ ಮಿಲಾಯಿಸಿದ್ದರು. ಇದೀಗ ಶಾರ್ಜಾ ಸ್ಟೇಡಿಯಂನಲ್ಲೂ ಉಭಯ ತಂಡಗಳ ಅಭಿಮಾನಿಗಳು ಕಿತ್ತಾಡಿಕೊಂಡಿದ್ದಾರೆ.