Virat Kohli: ವಿರಾಟ್ ಕೊಹ್ಲಿ ಎಸೆದ ಆ ಒಂದು ಓವರ್ ಯಾಕೆ ವಿಶೇಷ ಅಂದರೆ…

| Updated By: ಝಾಹಿರ್ ಯೂಸುಫ್

Updated on: Sep 01, 2022 | 10:55 AM

Asia Cup 2022: ಈ ಬೃಹತ್ ಗುರಿಯನ್ನು ಬೆನ್ನತ್ತಿದ ಹಾಂಗ್ ಕಾಂಗ್ ಬ್ಯಾಟ್ಸ್​ಮನ್​ಗಳಿಗೆ ಸ್ಪಿನ್ ಮೋಡಿ ಮಾಡುವಲ್ಲಿಯೂ ವಿರಾಟ್ ಕೊಹ್ಲಿ ಸಫಲರಾಗಿದ್ದರು.

Virat Kohli: ವಿರಾಟ್ ಕೊಹ್ಲಿ ಎಸೆದ ಆ ಒಂದು ಓವರ್ ಯಾಕೆ ವಿಶೇಷ ಅಂದರೆ...
Virat kohli bowling
Follow us on

Asia Cup 2022: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಂಗ್ ಕಾಂಗ್ ವಿರುದ್ದ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್​ಗೆ ಮರಳಿರುವುದನ್ನು ಖಚಿತಪಡಿಸಿದ್ದಾರೆ. 44 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 59 ರನ್ ಬಾರಿಸಿದ್ದರು. ಅಲ್ಲದೆ ಸೂರ್ಯಕುಮಾರ್ ಯಾದವ್​ಗೆ ಉತ್ತಮ ಸಾಥ್ ನೀಡುವ ಮೂಲಕ ತಂಡದ ಮೊತ್ತವನ್ನು 192 ಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಹಾಂಗ್ ಕಾಂಗ್ ಬ್ಯಾಟ್ಸ್​ಮನ್​ಗಳಿಗೆ ಸ್ಪಿನ್ ಮೋಡಿ ಮಾಡುವಲ್ಲಿಯೂ ಕೊಹ್ಲಿ ಸಫಲರಾಗಿದ್ದರು. ಅಂದರೆ ಐವರು ಬೌಲರ್​ಗಳೊಂದಿಗೆ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಪರ ಹೆಚ್ಚುವರಿ ಬೌಲರ್ ಆಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಬರೋಬ್ಬರಿ 6 ವರ್ಷಗಳ ಬಳಿಕ ಮತ್ತೊಮ್ಮೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡರು.

ಈ ಹಿಂದೆ 2016 ರಲ್ಲಿ ವೆಸ್ಟ್ ಇಂಡೀಸ್​ ವಿರುದ್ದದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದರು. ಇದಾದ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಮತ್ತೆ ಚೆಂಡೆಸೆಯುವ ಪ್ರಯತ್ನ ಮಾಡಿರಲಿಲ್ಲ. ಇದೀಗ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದ 6ನೇ ಬೌಲರ್ ಆಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು ವಿಶೇಷ.

ಇದನ್ನೂ ಓದಿ
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

17ನೇ ಓವರ್ ಬೌಲಿಂಗ್ ಮಾಡಿದ್ದ ಕೊಹ್ಲಿ ನೀಡಿದ್ದು ಕೇವಲ 6 ರನ್ ಮಾತ್ರ. ಈ ಮೂಲಕ ನಾಯಕ ರೋಹಿತ್ ಶರ್ಮಾ ಇಟ್ಟುಕೊಂಡಿದ್ದ ನಿರೀಕ್ಷೆಯನ್ನು  ಉಳಿಸಿಕೊಂಡರು. ಆದರೆ ಈ ಬಾರಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ.
ಅಂದರೆ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ 1.4 ಓವರ್ ಬೌಲ್ ಮಾಡಿದ್ದ ಮಾಡಿದ್ದ ಕೊಹ್ಲಿ 15 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಈ ಬಾರಿ ವಿಕೆಟ್ ಪಡೆಯಲು ಯಶಸ್ವಿಯಾಗದಿದ್ದರೂ ರನ್ ನಿಯಂತ್ರಿಸುವಲ್ಲಿ ಸಫಲರಾಗಿದ್ದರು.

ಒಟ್ಟಿನಲ್ಲಿ ಬ್ಯಾಟಿಂಗ್​ನಲ್ಲಿ ಫಾರ್ಮ್​ಗೆ ಬರುತ್ತಿದ್ದಂತೆ ವಿರಾಟ್ ಕೊಹ್ಲಿ ಬೌಲಿಂಗ್ ಮೂಲಕ ಕೂಡ ಮೋಡಿ ಮಾಡಲು ಮುಂದಾಗಿರುವುದು ವಿಶೇಷ. ಅದರಲ್ಲೂ ಐವರು ಬೌಲರ್​ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿದರೆ 6ನೇ ಬೌಲರ್ ಯಾರು ಎಂಬ ಪ್ರಶ್ನೆಗೆ ಸದ್ಯದ ಉತ್ತರ, ವಿರಾಟ್ ಕೊಹ್ಲಿ.