ASIA CUP 2022: ಏಷ್ಯಾ ಕಪ್ಗೆ ಡೇಟ್ ಫಿಕ್ಸ್: ಮತ್ತೆ ಭಾರತ-ಪಾಕ್ ಮುಖಾಮುಖಿ
ASIA CUP 2022: ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಿಸಲಾಗುತ್ತಿತ್ತು. ಇದೀಗ ಟಿ20 ಸ್ವರೂಪದಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಇನ್ನು ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ.
ಕೊಲಂಬೊದಲ್ಲಿ ಶನಿವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾ ಕಪ್ 2022 (ASIA CUP 2022) ಆಯೋಜನೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದ್ದು, ಆಗಸ್ಟ್ 27 ರಂದು ಟೂರ್ನಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ಸೆಪ್ಟಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳು ಏಷ್ಯಾ ಕಪ್ನಲ್ಲೂ ಸೆಣಸಾಡಲಿದೆ. ಈ ಬಾರಿ ಏಷ್ಯಾ ಕಪ್ನಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನು ಒಂದು ತಂಡವು ಅಂತಿಮವಾಗಬೇಕಿದೆ.
ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದಿವೆ. ಆರನೇ ತಂಡವನ್ನು ಅರ್ಹತಾ ಸುತ್ತಿನಲ್ಲಿ ನಿರ್ಧರಿಸಲಾಗುತ್ತದೆ. ಹಾಂಗ್ ಕಾಂಗ್, ಕುವೈತ್, ಸಿಂಗಾಪುರ ಮತ್ತು ಯುಎಇ ತಂಡಗಳು ಅರ್ಹತಾ ಸುತ್ತಿಗೆ ಪ್ರವೇಶಿಸಿವೆ. ಹೀಗಾಗಿ ಈ ತಂಡಗಳಲ್ಲಿ ಒಂದು ತಂಡವು ಈ ಬಾರಿ ಏಷ್ಯಾ ಕಪ್ನಲ್ಲಿ ಕಾಣಿಸಿಕೊಳ್ಳಲಿದೆ.
ಅಂದಹಾಗೆ ಈ ಬಾರಿ ಆಯೋಜನೆಗೊಳ್ಳುತ್ತಿರುವುದು 15ನೇ ಸೀಸನ್ ಏಷ್ಯಾ ಕಪ್. 1984 ರಲ್ಲಿ ಯುಎಇನಲ್ಲಿ ಶುರುವಾದ ಏಷ್ಯಾ ಕಪ್ಗೆ ಈ ಬಾರಿ ಲಂಕಾ ಕ್ರಿಕೆಟ್ ಮಂಡಳಿ ಆತಿಥ್ಯವಹಿಸಲಿದೆ. ಇನ್ನು ಕಳೆದ ವರ್ಷ ಕೊರೋನಾ ಕಾರಣದಿಂದ ಟೂರ್ನಿಯನ್ನು ನಡೆಸಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೂ ಮುನ್ನ ಟೂರ್ನಿಯನ್ನು ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.
ಜಯ್ ಶಾ ಅಧ್ಯಕ್ಷ:
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರನ್ನು 2024 ರವರೆಗೆ ಎಸಿಸಿ ಅಧ್ಯಕ್ಷರಾಗಿ ಮುಂದುವರೆಸಲು ಅನುಮೋದಿಸಲಾಯಿತು . ಸಭೆಯಲ್ಲಿ ಕತಾರ್‌ಗೆ ಕೌನ್ಸಿಲ್‌ನ ಪೂರ್ಣ ಸದಸ್ಯನ ಸ್ಥಾನಮಾನವನ್ನು ನೀಡಲಾಯಿತು. ಇದೇ ವೇಳೆ ಸಭೆಯಲ್ಲಿ ಏಷ್ಯಾ ಕಪ್ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ಪಂದ್ಯಾವಳಿಯ ಅರ್ಹತಾ ಪಂದ್ಯಗಳು ಆಗಸ್ಟ್ 20 ರಿಂದ ನಡೆಯಲಿವೆ.
ಏಷ್ಯಾ ಕಪ್ ದಾಖಲೆ: ಇದುವರೆಗೆ ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಿಸಲಾಗುತ್ತಿತ್ತು. ಇದೀಗ ಟಿ20 ಸ್ವರೂಪದಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಇನ್ನು ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಲ್ಲದೇ ಶ್ರೀಲಂಕಾ ತಂಡ 5 ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನ ಎರಡು ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(ASIA CUP 2022 WILL BE HELD IN SRI LANKA FROM 27 AUGUST TO 11 SEPTEMBER)
Published On - 3:54 pm, Sat, 19 March 22