ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಔಟ್

| Updated By: ಝಾಹಿರ್ ಯೂಸುಫ್

Updated on: Aug 27, 2023 | 5:53 PM

Afghanistan Squad: ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಫರೀದ್ ಅಹ್ಮದ್ ಮಲಿಕ್ ಮತ್ತು ಶಾಹಿದುಲ್ಲಾ ಕಮಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಪಾಕ್​ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಗೊಂಡಿರುವ ಅಜ್ಮತುಲ್ಲಾ ಒಮರ್ಜಾಯ್ ಬದಲಿಗೆ ಗುಲ್ಬದಿನ್ ನೈಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಔಟ್
Afghanistan
Follow us on

ಏಷ್ಯಾಕಪ್​ಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ಬಳಗವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಅಫ್ಘಾನ್​ನ ಯುವ ವೇಗಿ ನವೀನ್ ಉಲ್ ಹಕ್ ಸ್ಥಾನ ನೀಡಲಾಗಿಲ್ಲ. ಈ ಹಿಂದೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದು ನವೀನ್ ಉಲ್ ಹಕ್ ಭಾರೀ ಸುದ್ದಿಯಾಗಿದ್ದರು. ಅಲ್ಲದೆ ಏಷ್ಯಾಕಪ್​ನಲ್ಲಿ ನವೀನ್ ಹಾಗೂ ಕೊಹ್ಲಿ ನಡುವಣ ಮುಖಾಮುಖಿಯನ್ನು ನಿರೀಕ್ಷಿಸಲಾಗಿತ್ತು. ಆದರೀಗ 17 ಸದಸ್ಯರ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಬೌಲರ್​ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಮತ್ತೊಂದೆಡೆ 6 ವರ್ಷಗಳ ಬಳಿಕ ಕರೀಮ್ ಜನತ್ ಅಫ್ಘಾನಿಸ್ತಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2017 ರಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವಾಡಿದ್ದ ಜನತ್ ಇದೀಗ ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.

ಇನ್ನು ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಫರೀದ್ ಅಹ್ಮದ್ ಮಲಿಕ್ ಮತ್ತು ಶಾಹಿದುಲ್ಲಾ ಕಮಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಪಾಕ್​ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಗೊಂಡಿರುವ ಅಜ್ಮತುಲ್ಲಾ ಒಮರ್ಜಾಯ್ ಬದಲಿಗೆ ಗುಲ್ಬದಿನ್ ನೈಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಮುದ್ದೀನ್ ಅಶ್ರಫ್, ಅಬ್ದುಲ್ ರಹಮಾನ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಏಷ್ಯಾಕಪ್​ ವೇಳಾಪಟ್ಟಿ:

  1. ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  2. ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  3. ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  4. ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  5. ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  6. ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಸೂಪರ್-4 ಹಂತದ ವೇಳಾಪಟ್ಟಿ:

  1. ಸೆಪ್ಟೆಂಬರ್ 6- A1 Vs B2 (ಲಾಹೋರ್)
  2. ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  3. ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  4. ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  5. ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  6. ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  7. ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)