ಏಷ್ಯಾಕಪ್ 2023 ಕ್ಕೆ ತೆರೆ ಬಿದ್ದಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲೇ 8ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡ ವಿಶೇಷ ಹಿರಿಮೆ ಟೀಮ್ ಇಂಡಿಯಾ ಪಾಲಾಯಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೊದಲ ಓವರ್ನಲ್ಲೇ ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಇನ್ನು ಮೊಹಮ್ಮದ್ ಸಿರಾಜ್ 4ನೇ ಓವರ್ನಲ್ಲಿ 4 ವಿಕೆಟ್ ಕಬಳಿಸಿದರು.
ಇನ್ನು 7 ಓವರ್ಗಳನ್ನು ಎಸೆದ ಸಿರಾಜ್ 21 ರನ್ ನೀಡಿ 6 ವಿಕೆಟ್ ಪಡೆದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 2.2 ಓವರ್ಗಳಲ್ಲಿ 3 ರನ್ ನೀಡಿ 3 ವಿಕೆಟ್ ಉರುಳಿಸಿದರು. ಇದರೊಂದಿಗೆ ಶ್ರೀಲಂಕಾ ತಂಡವು 50 ರನ್ಗಳಿಗೆ ಸರ್ವಪತನ ಕಂಡಿತು.
Hey @ImRo45, shaam ki chai ready hain… Cup aap le aao bas 😌 #AsiaCup2023 live only on #DisneyPlusHotstar, free on the mobile app.#INDvSL #FreeMeinDekhteJaao #AsiaCupOnHotstar #Cricket pic.twitter.com/8Brj56ywfd
— Disney+ Hotstar (@DisneyPlusHS) September 17, 2023
51 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್ಗಳಲ್ಲಿ ಚೇಸ್ ಮಾಡಿ 10 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿತು. ಇದಾದ ಬಳಿಕ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಟೀಮ್ ಇಂಡಿಯಾ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ಪಡೆದರು. ಹೀಗೆ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…