Asia Cup 2023: 3 ಮಂಡಳಿ ಅಧ್ಯಕ್ಷರ ಹಾಜರಿ; ಐಪಿಎಲ್ ಫೈನಲ್ ಪಂದ್ಯದಲ್ಲಿ ಏಷ್ಯಾಕಪ್ ಭವಿಷ್ಯ ನಿರ್ಧಾರ!

Asia Cup 2023: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಈ ಹೇಳಿಕೆಯಿಂದ ಭಾರತವು ಪಾಕಿಸ್ತಾನವನ್ನು ಹೊರಗಿಟ್ಟು ಏಷ್ಯಾಕಪ್ ಭವಿಷ್ಯವನ್ನು ನಿರ್ಧರಿಸುವ ಹಾದಿಯಲ್ಲಿದೆ ಎಂಬುದು ಸ್ಪಷ್ಟವಾಗಿದೆ.

Asia Cup 2023: 3 ಮಂಡಳಿ ಅಧ್ಯಕ್ಷರ ಹಾಜರಿ; ಐಪಿಎಲ್ ಫೈನಲ್ ಪಂದ್ಯದಲ್ಲಿ ಏಷ್ಯಾಕಪ್ ಭವಿಷ್ಯ ನಿರ್ಧಾರ!
ಜಯ್ ಶಾ
Follow us
ಪೃಥ್ವಿಶಂಕರ
|

Updated on:May 25, 2023 | 10:49 PM

ಈ ಬಾರಿಯ ಏಷ್ಯಾಕಪ್ (Asia Cup) ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಏಷ್ಯಾಕಪ್ ಆಯೋಜನೆಯ ವಿಚಾರವಾಗಿ ಭಾರತ-ಪಾಕಿಸ್ತಾನ (India-Pakistan) ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಏತನ್ಮಧ್ಯೆ, ಪ್ರಸ್ತುತ ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು, ಲೀಗ್ ಫೈನಲ್ ಹಂತಕ್ಕೆ ಬಂದು ನಿಂತಿದೆ. ನಾಳೆ 16ನೇ ಐಪಿಎಲ್​ನ (IPL 2023) ಕ್ವಾಲಿಫೈಯರ್ 2 ಪಂದ್ಯ ನಡೆಯುತ್ತಿದ್ದು, ತದನಂತರ ಫೈನಲ್ ನಡೆಯಲಿದೆ. ಈ ನಡುವೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಹೇಳಿಕೆ ನೀಡಿರುವ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah), ಐಪಿಎಲ್ ಫೈನಲ್ ಪಂದ್ಯದ ನಂತರ ಏಷ್ಯಾಕಪ್ ನಡೆಯುವ ಸ್ಥಳವನ್ನು ನಿರ್ಧರಿಸಲಾಗುವುದು ಎಂದಿದ್ದಾರೆ. ಮೇ 28 ರಂದು ಅಹಮದಾಬಾದ್‌ನಲ್ಲಿ ಈ ಬಾರಿಯ ಐಪಿಎಲ್ ಫೈನಲ್ ನಡೆಯಲಿದೆ. ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಲು ಪಾಕಿಸ್ತಾನ ಹೊರತುಪಡಿಸಿ ಏಷ್ಯಾ ಕ್ರಿಕೆಟ್ ಕೌನ್ಸಿಲ್ (Asian Cricket Council) ಸದಸ್ಯರಿಗೆ ಬಿಸಿಸಿಐ ಆಹ್ವಾನ ನೀಡಿದೆ. ಆ ವೇಳೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದಿದ್ದಾರೆ.

ಐಪಿಎಲ್ ಅಂತಿಮ ಪಂದ್ಯವನ್ನು ವೀಕ್ಷಿಸಲು ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಅಧ್ಯಕ್ಷರೂ ಅಹಮದಾಬಾದ್‌ಗೆ ತಲುಪಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಏಷ್ಯಾಕಪ್ 2023 ರ ಮಹತ್ವದ ಚರ್ಚೆಗಳು ಈ ದಿನ ನಡೆಯಲಿದ್ದು, ಏಷ್ಯಾಕಪ್ ಆಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಏಷ್ಯಾಕಪ್ ನಡೆಯುವ ಸ್ಥಳದ ಬಗ್ಗೆ ಪಾಕಿಸ್ತಾನ ಮತ್ತು ಭಾರತೀಯ ಕ್ರಿಕೆಟ್ ಮಂಡಳಿ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಹೀಗಿರುವಾಗ ಅಹಮದಾಬಾದ್‌ನಲ್ಲಿ ನಡೆಯಲಿರುವ ಸಭೆ ಮಹತ್ವದ್ದಾಗಲಿದೆ.

IPL 2023: ಬೆಸ್ಟ್ ಐಪಿಎಲ್ ತಂಡ ಪ್ರಕಟಿಸಿದ ಸುರೇಶ್ ರೈನಾ; ಧೋನಿಗಿಲ್ಲ ತಂಡದಲ್ಲಿ ಸ್ಥಾನ..!

ಪಾಕಿಸ್ತಾನವನ್ನು ಹೊರಗಿಟ್ಟು ಏಷ್ಯಾಕಪ್ ಭವಿಷ್ಯ ನಿರ್ಧಾರ

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಈ ಹೇಳಿಕೆಯಿಂದ ಭಾರತವು ಪಾಕಿಸ್ತಾನವನ್ನು ಹೊರಗಿಟ್ಟು ಏಷ್ಯಾಕಪ್ ಭವಿಷ್ಯವನ್ನು ನಿರ್ಧರಿಸುವ ಹಾದಿಯಲ್ಲಿದೆ ಎಂಬುದು ಸ್ಪಷ್ಟವಾಗಿದೆ. ಐಪಿಎಲ್ ಫೈನಲ್ ವೀಕ್ಷಿಸಲು ಬಿಸಿಸಿಐ ಪಾಕಿಸ್ತಾನಕ್ಕೆ ಆಹ್ವಾನ ನೀಡಿರಲಿಲ್ಲ. ಇದರ ಪರಿಣಾಮವಾಗಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಭಾರತ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ನೈಜ ಮೈತ್ರಿಯನ್ನು ಎತ್ತಿ ತೋರಿಸಲು ಪ್ರಯತ್ನಿಸಿದೆ. ಅಲ್ಲದೆ ಏಷ್ಯನ್ ಕ್ರಿಕೆಟ್‌ನಲ್ಲಿ ಬಿಸಿಸಿಐ ತನ್ನ ಶಕ್ತಿ ಪ್ರದರ್ಶಿಸಲು ಬಯಸಿದೆ. ಏಷ್ಯಾಕಪ್ ಆಯೋಜಿಸುವ ಜವಾಬ್ದಾರಿಯನ್ನು ಪಿಸಿಬಿ ಹೊಂದಿದೆ. ಆದರೆ ಟೀಂ ಇಂಡಿಯಾ ಆಟಗಾರರು ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಅಂದು ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಭಾರತದ ಈ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದವು. ಬಿಸಿಸಿಐ ನಿರ್ಧಾರಕ್ಕೆ ಬೆದರಿದ್ದ ಪಾಕಿಸ್ತಾನ ಹೈಬ್ರಿಡ್ ಮಾದರಿಯನ್ನು ಪ್ರಸ್ತಾಪಿಸುವ ಮೂಲಕ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ತನ್ನಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಿತ್ತು. ಆದರೆ, ಬಿಸಿಸಿಐ ಈ ತೀರ್ಮಾನಕ್ಕೂ ಒಪ್ಪಿಗೆ ನೀಡಿರಲಿಲ್ಲ.

ಮೇ 27 ರಂದು ಅಹಮದಾಬಾದ್‌ನಲ್ಲಿ ಬಿಸಿಸಿಐ ವಿಶೇಷ ಸಭೆ

ಬಿಸಿಸಿಐ ಮೇ 27 ರಂದು ಅಹಮದಾಬಾದ್‌ನಲ್ಲಿ ವಿಶೇಷ ಸಾಮಾನ್ಯ ಸಭೆಯನ್ನು ಆಯೋಜಿಸಿದೆ. ಈ ಸಭೆಯ ನಂತರ, ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕುರಿತು ಚರ್ಚೆಸಬಹುದು. ಇದಲ್ಲದೇ ಈ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ. ಈ ವಿಶೇಷ ಸಭೆಯಲ್ಲಿ, ರಾಜ್ಯ ತಂಡಗಳಲ್ಲಿ ಫಿಸಿಯೋಗಳು ಮತ್ತು ತರಬೇತುದಾರರ ನೇಮಕಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ನಿರ್ದೇಶನಗಳು ಮತ್ತು ಲೈಂಗಿಕ ಕಿರುಕುಳದ ವಿರುದ್ಧ ಕಟ್ಟುನಿಟ್ಟಿನ ಕಾರ್ಯತಂತ್ರ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸುವ ಸಾಧ್ಯತೆಯಿದೆ.

ಮಾಧ್ಯಮ ವರದಿಗಳ ಪ್ರಕಾರ, ಈ ಬಾರಿಯ ವಿಶ್ವಕಪ್​ನಲ್ಲಿ 10 ತಂಡಗಳ ನಡುವೆ 48 ಪಂದ್ಯಗಳನ್ನು ಆಡಲಾಗುತ್ತದೆ. ಈ ಪಂದ್ಯಗಳು 12 ಕ್ರೀಡಾಂಗಣಗಳಲ್ಲಿ ನಡೆಯಲಿವೆ. ವಿಶ್ವಕಪ್ 2023 ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ನಡೆಯಲಿದೆ. ಐಪಿಎಲ್ 2023 ರ ಅಂತಿಮ ಪಂದ್ಯದ ನಂತರ ವಿಶ್ವಕಪ್ 2023 ರ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Thu, 25 May 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ