Asia Cup Final: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..!

Asia Cup 2023 Final: ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಭಾರತ ತಂಡವು ಬರೋಬ್ಬರಿ 97 ಮ್ಯಾಚ್​ಗಳಲ್ಲಿ ಲಂಕಾ ತಂಡವನ್ನು ಬಗ್ಗು ಬಡಿದಿದೆ.

Asia Cup Final: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 16, 2023 | 11:05 PM

ಏಷ್ಯಾಕಪ್​​ನ ಫೈನಲ್​ ಪಂದ್ಯದಲ್ಲಿ ಭಾರತ-ಶ್ರೀಲಂಕಾ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ 5 ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಆಟಗಾರರು ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಶಮಿ ತಂಡದಿಂದ ಹೊರಬೀಳಲಿದ್ದಾರೆ.

ಮತ್ತೊಂದೆಡೆ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿರುವ ಅಕ್ಷರ್ ಪಟೇಲ್ ಫೈನಲ್​ನಲ್ಲಿ ಆಡುವುದು ಅನುಮಾನ. ಹೀಗಾಗಿ ಶಾರ್ದೂಲ್ ಠಾಕೂರ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿದೆ. ಅದರಂತೆ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

ಬಲಿಷ್ಠ ಭಾರತ:

ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಭಾರತ ತಂಡವು ಬರೋಬ್ಬರಿ 97 ಮ್ಯಾಚ್​ಗಳಲ್ಲಿ ಲಂಕಾ ತಂಡವನ್ನು ಬಗ್ಗು ಬಡಿದಿದೆ. ಇನ್ನು 11 ಪಂದ್ಯಗಳು ರದ್ದಾರೆ, 1 ಮ್ಯಾಚ್ ಟೈ ಆಗಿತ್ತು.

ಹಾಗೆಯೇ ಕೊನೆಯ 6 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಐದರಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಅಂದರೆ ಇಲ್ಲಿ ಲಂಕಾ ಪಡೆಯ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಲಂಕಾ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಬಹುದು.1

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ,  ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್.

Published On - 11:04 pm, Sat, 16 September 23