ಏಷ್ಯಾಕಪ್ 2023 ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಮೊದಲು ಫೀಲ್ಡಿಂಗ್ ಮಾಡಲಿದೆ.
ಇನ್ನು ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಶಮಿ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಮತ್ತೊಂದೆಡೆ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿರುವ ಅಕ್ಷರ್ ಪಟೇಲ್ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗಿದೆ. ಈ ಐದು ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಈ ಕೆಳಗಿನಂತಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಾಣ
IND vs SL ಏಕದಿನ ಮುಖಾಮುಖಿ:
ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಭಾರತ ತಂಡವು ಬರೋಬ್ಬರಿ 97 ಮ್ಯಾಚ್ಗಳಲ್ಲಿ ಲಂಕಾ ತಂಡವನ್ನು ಬಗ್ಗು ಬಡಿದಿದೆ. ಇನ್ನು 11 ಪಂದ್ಯಗಳು ರದ್ದಾರೆ, 1 ಮ್ಯಾಚ್ ಟೈ ಆಗಿತ್ತು.
ಹಾಗೆಯೇ ಕೊನೆಯ 6 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಐದರಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಅಂದರೆ ಇಲ್ಲಿ ಲಂಕಾ ಪಡೆಯ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಲಂಕಾ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್.
ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!
ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.
Published On - 2:34 pm, Sun, 17 September 23