AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL Final Live Streaming: ಭಾರತ- ಲಂಕಾ ಏಷ್ಯಾಕಪ್ ಫೈನಲ್ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ

IND vs SL Final Live Streaming: 2023ರ ಏಷ್ಯಾಕಪ್ ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಒಟ್ಟು 6 ತಂಡಗಳು ಸ್ಪರ್ಧಿಸಿದ್ದ ಈ ಕಾಂಟಿನೆಂಟಲ್ ಕಾಳಗದಲ್ಲಿ ಅಂತಿಮವಾಗಿ 2 ಅಂತಿಮ ತಂಡಗಳು ಫೈನಲ್​ಗೆ ಕಾಲಿಟ್ಟಿವೆ. ಭಾರತ ಹಾಗೂ ಶ್ರೀಲಂಕಾ ಎರಡು ತಂಡಗಳು ಅಂತಿಮ ಸುತ್ತಿಗೆ ಟಿಕೆಟ್ ಪಡೆದಿದ್ದು, ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿಯಲ್ಲಿದೆ.

IND vs SL Final Live Streaming: ಭಾರತ- ಲಂಕಾ ಏಷ್ಯಾಕಪ್ ಫೈನಲ್ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ
ಭಾರತ- ಶ್ರೀಲಂಕಾ
ಪೃಥ್ವಿಶಂಕರ
|

Updated on: Sep 17, 2023 | 6:55 AM

Share

2023ರ ಏಷ್ಯಾಕಪ್ ಟೂರ್ನಿ (Asia Cup 2023 Final) ಅಂತಿಮ ಹಂತಕ್ಕೆ ಬಂದು ನಿಂತಿದೆ. ಒಟ್ಟು 6 ತಂಡಗಳು ಸ್ಪರ್ಧಿಸಿದ್ದ ಈ ಕಾಂಟಿನೆಂಟಲ್ ಕಾಳಗದಲ್ಲಿ ಅಂತಿಮವಾಗಿ 2 ಅಂತಿಮ ತಂಡಗಳು ಫೈನಲ್​ಗೆ ಕಾಲಿಟ್ಟಿವೆ. ಭಾರತ ಹಾಗೂ ಶ್ರೀಲಂಕಾ (India vs Sri lanka) ಎರಡು ತಂಡಗಳು ಅಂತಿಮ ಸುತ್ತಿಗೆ ಟಿಕೆಟ್ ಪಡೆದಿದ್ದು, ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿಯಲ್ಲಿದೆ. ಇನ್ನು ಸ್ಪರ್ಧೆಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿದವು. ಸೂಪರ್ 4 ಸುತ್ತಿನಲ್ಲಿ ಭಾರತ ಮತ್ತು ಶ್ರೀಲಂಕಾ ಎರಡೂ ತಂಡಗಳು ಆಡಿದ 3 ಪಂದ್ಯಗಳಲ್ಲಿ 2 ರಲ್ಲಿ ಗೆದ್ದಿವೆ. ಉಳಿದ 1 ಪಂದ್ಯದಲ್ಲಿ ಸೋತಿವೆ. ಟೀಂ ಇಂಡಿಯಾ (Team India),  ಶ್ರೀಲಂಕಾವನ್ನು ಸೋಲಿಸಿ ಫೈನಲ್ ತಲುಪಿದರೆ, ಪಾಕಿಸ್ತಾನವನ್ನು ಕೊನೆಯ ಎಸೆತದಲ್ಲಿ ಮಣಿಸಿದ ಶ್ರೀಲಂಕಾ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಯಾವಾಗ ನಡೆಯಲ್ಲಿದೆ?

ಸೆಪ್ಟೆಂಬರ್ 17 ರಂದು ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಉಚಿತವಾಗಿ ಎಲ್ಲಿ ನೋಡಬೇಕು?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ನ ಚಾನೆಲ್​ನ ವಿವಿದ ಭಾಷೆಗಳಲ್ಲಿ ಮತ್ತು ಡಿಡಿ ಸ್ಪೋರ್ಟ್ಸ್‌ನಲ್ಲಿ ಟಿವಿಯಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಮೊಬೈಲ್​ನಲ್ಲಿ ಉಚಿತವಾಗಿ ನೋಡುವುದು ಹೇಗೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಮೊಬೈಲ್‌ನಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಏಷ್ಯಾಕಪ್​ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ಪ್ರಸಿದ್ಧ ಕೃಷ್ಣ, ತಿಲಕ್ ವರ್ಮ.

ಶ್ರೀಲಂಕಾ ಕ್ರಿಕೆಟ್ ತಂಡ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಲ್ ಜೆನಿತ್ ಪೆರೇರಾ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವ, ಮತಿಶ ಪತಿರಾನ, ಸದಿರ ಸಮರವಿಕ್ರಮ, ಮಹಿಷ್ ತೀಕ್ಷಣ, ದುನಿತ್ ವೆಲ್ಲೇಜ್, ಕಸುನ್ ರಜಿತ, ಫೆರ್ನಾಂಡೊ ಮತ್ತು ಪ್ರಮೋದ್ ಮಧುಶನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ