Asia Cup 2023 Final: ಕ್ರಿಕೆಟ್ ದೇವರ ಸಾರ್ವಕಾಲಿಕ ದಾಖಲೆಯ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ..!

Asia Cup 2023 Final: ರೋಹಿತ್ ಶರ್ಮಾ ಪ್ರಸ್ತುತ ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಅತ್ಯಂತ ಹಿರಿಯ ಕ್ರಿಕೆಟಿಗ. ಇಂದಿನ ಫೈನಲ್ ಪಂದ್ಯದಲ್ಲಿ ರೋಹಿತ್ ಬ್ಯಾಟ್ ಘರ್ಜಿಸಿದರೆ, ಏಷ್ಯಾಕಪ್‌ನಲ್ಲಿ ಕ್ರಿಕೆಟ್‌ನ ದೇವರು, ಶ್ರೇಷ್ಠ ಆಟಗಾರ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರೋಹಿತ್ ಮುರಿಯಲ್ಲಿದ್ದಾರೆ.

Asia Cup 2023 Final: ಕ್ರಿಕೆಟ್ ದೇವರ ಸಾರ್ವಕಾಲಿಕ ದಾಖಲೆಯ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ..!
ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Sep 17, 2023 | 11:10 AM

ಏಷ್ಯಾಕಪ್ 2023 ರಲ್ಲಿ (Asia Cup 2023 Final) ಭಾರತ ತಂಡ ಸತತ ಮೂರು ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿತ್ತು. ಆದರೆ ಸುತ್ತಿನ ಕೊನೆಯ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 6 ರನ್​ಗಳಿಂದ ಸೋತಿದ್ದ ಭಾರತಕ್ಕೆ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಇದೀಗ ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯಕ್ಕೆ ಕಣಕ್ಕಿಳಿಯುತ್ತಿರುವ ಭಾರತ (India vs Sri lanka) ದಾಖಲೆಯ 8ನೇ ಏಷ್ಯಾಕಪ್​ ಅನ್ನು ತನ್ನ ಖಾತೆಗೆ ಹಾಕಿಕೊಳ್ಳಲು ಸಜ್ಜಾಗಿದೆ. ಇದರೊಂದಿಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ವಿಶೇಷ ದಾಖಲೆ ಸೃಷ್ಟಿಸುವ ತವಕದಲ್ಲಿದ್ದು, ಈ ಹಿಂದೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ನಿರ್ಮಿಸಿದ್ದ ಸಾರ್ವಕಾಲಿಕ ಶ್ರೇಷ್ಠ ದಾಖಲೆಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿ ಹಿಟ್​ಮ್ಯಾನ್ ಇದ್ದಾರೆ.

ಸಚಿನ್ ದಾಖಲೆ ಮೇಲೆ ರೋಹಿತ್ ಕಣ್ಣು

ರೋಹಿತ್ ಶರ್ಮಾ ಪ್ರಸ್ತುತ ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಅತ್ಯಂತ ಹಿರಿಯ ಕ್ರಿಕೆಟಿಗ. ಹೀಗಾಗಿ ರೋಹಿತ್ ಏಷ್ಯಾಕಪ್‌ನಲ್ಲಿ ಹೆಚ್ಚು ಪಂದ್ಯಗಳು ಮತ್ತು ರನ್‌ಗಳ ವಿಷಯದಲ್ಲಿ ಮತ್ತೊಂದು ದಾಖಲೆಯನ್ನು ರಚಿಸುವ ಅವಕಾಶ ಹೊಂದಿದ್ದಾರೆ. ಇಂದಿನ ಫೈನಲ್ ಪಂದ್ಯದಲ್ಲಿ ರೋಹಿತ್ ಬ್ಯಾಟ್ ಘರ್ಜಿಸಿದರೆ, ಏಷ್ಯಾಕಪ್‌ನಲ್ಲಿ ಕ್ರಿಕೆಟ್‌ನ ದೇವರು, ಶ್ರೇಷ್ಠ ಆಟಗಾರ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರೋಹಿತ್ ಮುರಿಯಲ್ಲಿದ್ದಾರೆ.

ಶೂನ್ಯ ಸುತ್ತುವುದರಲ್ಲಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದ ರೋಹಿತ್ ಶರ್ಮಾ..!

ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್!

ಸಚಿನ್ ತೆಂಡೂಲ್ಕರ್ ಏಷ್ಯಾಕಪ್‌ನ ಏಕದಿನ ಮಾದರಿಯಲ್ಲಿ ಅತ್ಯಂತ ಯಶಸ್ವಿ ಭಾರತೀಯ ಆಟಗಾರನೆನಿಸಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಏಷ್ಯಾಕಪ್‌ನ ಏಕದಿನ ಮಾದರಿಯಲ್ಲಿ ಭಾರತದ ಪರ 23 ಪಂದ್ಯಗಳಲ್ಲಿ 51.10 ರ ಸರಾಸರಿಯಲ್ಲಿ 971 ರನ್ ಕಲೆ ಹಾಕಿದ್ದಾರೆ. ಸಚಿನ್ ನಂತರ ಈ ಸಾಧನೆ ಮಾಡಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಇದ್ದಾರೆ. ರೋಹಿತ್ ಏಷ್ಯಾಕಪ್‌ನಲ್ಲಿ ಇದುವರೆಗೆ 27 ಪಂದ್ಯಗಳಲ್ಲಿ 939 ರನ್ ಕಲೆಹಾಕಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ರೋಹಿತ್ 33 ರನ್ ಗಳಿಸಿದರೆ, ಏಷ್ಯಾಕಪ್‌ನ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಉತ್ತಮ ಫಾರ್ಮ್‌ನಲ್ಲಿದ್ದಾರೆ ರೋಹಿತ್

2023 ರ ಏಷ್ಯಾಕಪ್‌ನಲ್ಲಿ ರೋಹಿತ್ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧದ ಗುಂಪಿನ ಪಂದ್ಯದಲ್ಲಿ ರೋಹಿತ್ ಕೇವಲ 11 ರನ್ ಗಳಿಸಿದ್ದರು. ಆದಾಗ್ಯೂ, ನಂತರ ಅವರು ಸೂಪರ್ 4 ಸುತ್ತಿನಲ್ಲಿ ನೇಪಾಳ ವಿರುದ್ಧ ಅಜೇಯ 74 ಮತ್ತು ನಂತರ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಕ್ರಮವಾಗಿ 56 ಮತ್ತು 53 ರನ್ ಬಾರಿಸಿದ್ದರು. ಆದರೆ ಬಾಂಗ್ಲಾದೇಶ ವಿರುದ್ಧದ ಸೂಪರ್ 4 ಸುತ್ತಿನ ಕೊನೆಯ ಪಂದ್ಯದಲ್ಲಿ ರೋಹಿತ್ ಬ್ಯಾಟ್​ ಶೂನ್ಯಕ್ಕೆ ಸುಸ್ತಾಗಿತ್ತು. ಆದರೀಗ ಫೈನಲ್​ನಲ್ಲಿ ನಾಯಕನ ಪಾತ್ರವನ್ನು ನಿರ್ವಹಿಸಲೇಬೇಕಾದ ಜವಬ್ದಾರಿ ಹೊತ್ತಿರುವ ರೋಹಿತ್, ಏಷ್ಯಾಕಪ್‌ನ ಏಕದಿನ ಸ್ವರೂಪದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ದಾಖಲೆ ಬರೆಯುವ ಹೊಸ್ತಿಲಿನಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Sun, 17 September 23

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು